ಅರಸಿನಮಕ್ಕಿ ಹತ್ಯಡ್ಕದಲ್ಲಿ ತಾಳಮದ್ದಳೆ ವೇಳೆ ಕಾಡಾನೆ ಪ್ರತ್ಯಕ್ಷ !
Team Udayavani, Jan 8, 2018, 8:15 AM IST
ಅರಸಿನಮಕ್ಕಿ: ಇಲ್ಲಿನ ಉದ್ಯಮಿಯೊಬ್ಬರ ಮನೆಯಲ್ಲಿ ಯಕ್ಷಗಾನ ತಾಳಮದ್ದಳೆ ನಡೆಯುತ್ತಿದ್ದ ವೇಳೆ ಮನೆಯ ಆವರಣ ಗೋಡೆಯ ಬಳಿ ಕಾಡಾನೆಯೊಂದು ಕಾಣಿಸಿಕೊಂಡು ಜನರಲ್ಲಿ ಆತಂಕ, ಕುತೂಹಲ ಹುಟ್ಟಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಅರಸಿಮಕ್ಕಿಯ ಹತ್ಯಡ್ಕದಲ್ಲಿ ನಡೆದಿದೆ. ಘಟನೆಯಿಂದಾಗಿ ಯಾವುದೇ ಅನಾಹುತ ಸಂಭವಿಸಿಲ್ಲವಾದರೂ ಹತ್ತಾರು ಮಂದಿಗೆ ಆನೆಯು ಒಮ್ಮೆಲೆ ದರ್ಶನ ನೀಡಿದ್ದು ಜನರನ್ನು ಕಂಗಾಲಾಗಿಸಿತು.
ಹಸ್ತಿನಾವತಿ ಎಂದಾಗ ಹಸ್ತಿ ಪ್ರತ್ಯಕ್ಷ !
ಸ್ಥಳೀಯ ಉದ್ಯಮಿ ಸುಧೀರ್ ಕುಮಾರ್ ಅವರು ತಮ್ಮ ಮನೆಯಲ್ಲಿ ರವಿವಾರ ಮಧ್ಯಾಹ್ನ ಸತ್ಯನಾರಾಯಣ ಪೂಜೆ ಹಾಗೂ ಮಧ್ಯಾಹ್ನದ ಅನಂತರ ಮನೆಯಂಗಳದಲ್ಲಿಯೇ ಸುಭದ್ರಾರ್ಜುನ ತಾಳಮದ್ದಳೆಯನ್ನು ಏರ್ಪಡಿಸಿದ್ದರು.
ಅಪರಾಹ್ನ 3 ಗಂಟೆ ಸುಮಾರಿಗೆ ತಾಳಮದ್ದಳೆಯು ಆರಂಭವಾಯಿತು. ತಾಳಮದ್ದಳೆ ಪ್ರಾರಂಭವಾಗಿ ಸತ್ಯ
ಭಾಮೆ ಹಾಗೂ ಶ್ರೀಕೃಷ್ಣನ ಸಂವಾದ ನಡೆಯುತ್ತಿತ್ತು. ಹಸ್ತಿನಾವತಿಯ ರಾಜ ಕೌರವನಿಗೆ ಸುಭದ್ರೆಯನ್ನು ನೀಡಿ ವಿವಾಹ ಮಾಡಿಸುವ ಕುರಿತು ಬಲರಾಮನು ಯೋಚಿಸುತ್ತಿರುವ ಬಗ್ಗೆ ಶ್ರೀಕೃಷ್ಣನಲ್ಲಿ ತಿಳಿಸುತ್ತಿದ್ದಳು. ಕಾವ್ಯಶ್ರೀ ಅಜೇರು ಇವರ ಭಾಗವತಿಕೆಯಲ್ಲಿ ಹರೀಶ್ ಬೊಳಂತಿಮೊಗರು ಹಾಗೂ ಶೇಣಿ ಬಾಲಮುರಳಿಯವರು ಅರ್ಥವನ್ನು ನುಡಿಯುತ್ತಿದ್ದರು. ಸಾಕಷ್ಟು ಸಂಖ್ಯೆಯಲ್ಲಿದ್ದ ಯಕ್ಷಗಾನಾಸಕ್ತರು ತಾಳಮದ್ದಳೆಯನ್ನು ಆಸ್ವಾದಿಸುತ್ತಿದ್ದರು. ಇದೇ ಸಂದರ್ಭದಲ್ಲಿ ಹಸ್ತಿನಾವತಿಯ ರಾಜನಿಗೆ ಮದುವೆ ಮಾಡಿಕೊಡಬಾರದು ಎಂದು ಸತ್ಯಭಾಮೆ ನುಡಿಯುತ್ತಿದ್ದ ಸಂದರ್ಭದಲ್ಲೆ ದಿಢೀರನೆ ಅವರ ಮನೆಯ ಅಂಗಳದಲ್ಲಿ ವಾಹನಗಳ ನಿಲುಗಡೆಯ ಜಾಗದಲ್ಲಿ ಹಸ್ತಿ ಪ್ರತ್ಯಕ್ಷವಾಗಿದೆ. ಮನೆಯ ಯಜಮಾನರು ಹಾಗೂ ಹತ್ತಿರದಲ್ಲಿದ್ದವರು ಕಂಪೌಂಡ್‌ನೊಳಗೆ ಗಾಬರಿಯಿಂದ ಬಂದಿದ್ದು ಆ ಸಂದರ್ಭದಲ್ಲಿ ವಾಹನವನ್ನು ಪಾರ್ಕ್ ಮಾಡಲು ಬಂದವರು ಕೂಡ ಭೀತಿಯಿಂದ ಅಂಗಳದೊಳಕ್ಕೆ ಬಂದಿದ್ದಾರೆ. ಅನೇಕರು ಹಠಾತ್ ಪ್ರತ್ಯಕ್ಷವಾದ ಆನೆಯನ್ನು ಕಂಡು ಭೀತಿಗೊಳಗಾಗಿದ್ದಾರೆ. ಸಾಕಷ್ಟು ವಾಹನ, ಜನರನ್ನು ಕಂಡ ಆನೆಯು ಮನೆಯ ಹಿತ್ತಲಿನಿಂದ ತೋಟಕ್ಕೆ ಹೋಗಿ ಕಾಡನ್ನು ಸೇರಿಕೊಂಡಿದೆ. ಗಜ ಪುರಾಣದಿಂದಾಗಿ ಸುಮಾರು ಹದಿನೈದು ನಿಮಿಷಗಳ ಕಾಲ ತಾಳಮದ್ದಳೆಯನ್ನು ನಿಲ್ಲಿಸಿ ಅನಂತರ ಮುಂದುವರಿಸಲಾಯಿತು. ತಾಳಮದ್ದಳೆಯಲ್ಲಿ ಹಲವಾರು ಬಾರಿ ಕಾಡಾನೆ ವಿಷಯ ಪ್ರಸ್ತಾಪವಾಗಿ ಹಾಸ್ಯದ ಹೊನಲು ಹರಿಯುವಂತಾಯಿತು.
ಕಾಡಾನೆ ಉಪಟಳ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದ್ದು ಶಿಶಿಲದಲ್ಲಿ ಶನಿವಾರ ಕಾಡಾನೆ ತೋಟವನ್ನು ಧ್ವಂಸಗೊಳಿಸಿದ್ದು ರವಿವಾರ ಇದೇ ಆನೆ ಬಂದಿರಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.