‘ಮೀನು ಮಾರುಕಟ್ಟೆ ಅಭಿವೃದ್ಧಿಗೆ ಒತ್ತು’
Team Udayavani, Oct 11, 2017, 9:48 AM IST
ಸ್ಟೇಟ್‌ಬ್ಯಾಂಕ್: ಇಲ್ಲಿನ ಹಸಿ ಮೀನು ಮಾರುಕಟ್ಟೆ ಪ್ರಾಂಗಣದಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ಕೈಗೊಂಡ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಮೇಯರ್ ಕವಿತಾ ಸನಿಲ್ ಮಂಗಳವಾರ ಉದ್ಘಾಟಿಸಿದರು.
ಮಾರುಕಟ್ಟೆಯ ಪ್ರಾಂಗಣದ ಮೇಲ್ಛಾವಣಿ ಸಂಪೂರ್ಣ ನಾದುರಸ್ತಿಯಲ್ಲಿದ್ದ ಹಿನ್ನೆಲೆಯಲ್ಲಿ ಹೊಸದಾಗಿ ನಿರ್ಮಿಸಲಾ
ಗಿದೆ. ಮೀನು ಮಾರಾಟ ಮಾಡುವ ಸ್ಥಳದಲ್ಲಿ ಹೊಂಡ ಗುಂಡಿಗಳಿದ್ದ ಕಾರಣದಿಂದ, ಪ್ರಾಂಗಣದ ವ್ಯಾಪ್ತಿಯಲ್ಲಿ ನೆಲಕ್ಕೆ ಕಾಂಕ್ರೀಟ್ ಹಾಸಲಾಗಿದೆ. ಮೀನು ಮಾರಾಟ ಮಾಡುವ ಮಹಿಳೆಯರಿಗಾಗಿ ವಿಶ್ರಾಂತಿ ಕೊಠಡಿಯನ್ನು ತೆರೆಯಲಾಗಿದ್ದು, ಅದನ್ನು ಮೇಯರ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಮೀನು ಮಾರಾಟ ಮಾಡುವ ಮಹಿಳೆಯರ ಬಹು ದಿನಗಳ ನೋವಿಗೆ ಸ್ಪಂದಿಸುವ
ಕೆಲಸವನ್ನು ಆದ್ಯತೆಯ ನೆಲೆಯಲ್ಲಿ ಪಾಲಿಕೆ ಕೈಗೆತ್ತಿಕೊಂಡು ಮಾಡಲಾಗಿದೆ. ಮೀನು ಮಾರುಕಟ್ಟೆ ವ್ಯಾಪ್ತಿಯ ಹಲವು ಸಮಸ್ಯೆಗಳ ಬಗ್ಗೆ ಗಮನಕ್ಕೆ ಬಂದಿದೆ. ಹೀಗಾಗಿ ಮಾರುಕಟ್ಟೆಯನ್ನು ಅತ್ಯಂತ ಸುಸ್ಥಿತಿಯಲ್ಲಿ ಮತ್ತು ಅಲ್ಲಿ ವ್ಯಾಪಾರ ಮಾಡುವವರಿಗೆ ಎಲ್ಲ ರೀತಿಯ ಮೂಲ ಸೌಕರ್ಯ ನೀಡುವ ನೆಲೆಯಲ್ಲಿ ಪ್ರಾಮಾಣಿಕ ಕಾರ್ಯಗಳನ್ನು ಮಾಡಲಾಗುವುದು ಎಂದು ಅವರು ಹೇಳಿದರು.
ಮಾರುಕಟ್ಟೆಯ ಪ್ರಮುಖರಾದ ಬೇಬಿ ಅಮೀನ್ ಮಾತನಾಡಿ, ಹಸಿ ಮೀನು ಮಾರಾಟ ಮಾಡುವ ಈ ಪ್ರದೇಶದ
ಸಮಸ್ಯೆ ಪರಿಹರಿಸಲು ಜನಪ್ರತಿನಿಧಿಗಳಿಗೆ ಮನವಿ ಮಾಡುತ್ತಾ ಬರಲಾಗಿತ್ತಾದರೂ ಸೂಕ್ತ ಸ್ಪಂದನೆ ದೊರಕಿರಲಿಲ್ಲ. ಮೇಯರ್ ಕವಿತಾ ಸನಿಲ್ ಅವರ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಅವರು ಕೆಲವೇ ದಿನದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಮೊದಲ ಹಂತದ ಕೆಲಸಗಳನ್ನು ಮಾಡಿ ತೋರಿಸಿದ್ದಾರೆ ಎಂದು ಶ್ಲಾಘಿಸಿದರು.
ಉಪ ಮೇಯರ್ ರಜನೀಶ್, ಮುಖ್ಯ ಸಚೇತಕ ಎಂ. ಶಶಿಧರ ಹೆಗ್ಡೆ, ಸ್ಥಾಯೀ ಸಮಿತಿ ಅಧ್ಯಕ್ಷರಾದ ಅಬ್ದುಲ್ ರವೂಫ್,
ಸಬಿತಾ ಮಿಸ್ಕಿತ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karkala: ಈ ರಸ್ತೆಯಲ್ಲಿ ಬಸ್ ತಂಗುದಾಣಗಳೇ ಇಲ್ಲ!
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.