ಪೂರ್ಣಗೊಳ್ಳದ ರಾಜಕಾಲುವೆ ಒತ್ತುವರಿ ವರದಿ!

Team Udayavani, May 29, 2019, 6:00 AM IST

e-10

ನಗರದಲ್ಲಿ ರಾಜಕಾಲುವೆ ಒತ್ತುವರಿ ಮಾಡಿರುವ ಪ್ರಕರಣವನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌ ಅವರು ಒಂದು ವರ್ಷದ ಹಿಂದೆ ನಿಯುಕ್ತಿಗೊಳಿಸಿದ್ದ “ಅಧಿಕಾರಿಗಳ ವಿಶೇಷ ಸಮಿತಿ’ಯ ಪೂರ್ಣ ಅಧ್ಯಯನ ವರದಿ ಇನ್ನೂ ಜಿಲ್ಲಾಡಳಿತದ ಕೈ ಸೇರಿಲ್ಲ!

ಸದ್ಯದ ಮಾಹಿತಿ ಪ್ರಕಾರ, ತಜ್ಞರು ನೀಡಬೇಕಾದ ಪೂರ್ಣ ಅಧ್ಯಯನ ವರದಿಯನ್ನು ಮೂಡಾಕ್ಕೆ ಸಲ್ಲಿಸದ ಕಾರಣ ಜಿಲ್ಲಾಡಳಿತಕ್ಕೆ ಸಲ್ಲಿಸುವ ಅಂತಿಮ ವರದಿ ತಡವಾಗಿದೆ ಎನ್ನಲಾಗಿದೆ. ಆದರೆ ಘಟನೆ ನಡೆದು ವರ್ಷವಾದರೂ ಅಂತಿಮ ವರದಿ ನೀಡಲು ಇನ್ನೂ ಸಾಧ್ಯವಾಗದಿರುವುದು ಇದೀಗ ಹಲವು ಪ್ರಶ್ನೆಗಳಿಗೂ ಕಾರಣವಾಗಿವೆ. ಚುನಾವಣೆ ಸಹಿತ ಇತರ ಕಾರ್ಯ ಒತ್ತಡದ ನೆಪದಿಂದಾಗಿ ಅಂತಿಮ ವರದಿ ತಡವಾಗಿದೆ ಎಂಬ ಅಭಿಪ್ರಾಯ ಎಷ್ಟರ ಮಟ್ಟಿಗೆ ಸರಿ? ಎಂಬ ಪ್ರಶ್ನೆ ಸದ್ಯ ಕಾಡುತ್ತಿದೆ.

ಕಳೆದ ವರ್ಷ ನಗರದಲ್ಲಿ ಸುರಿದ ಭಾರೀ ಮಳೆಯಿಂದ ಸಮಸ್ಯೆ ಉಂಟಾದ ಕಾರಣ ರಾಜಕಾಲುವೆ ಒತ್ತುವರಿ ಆಗಿದ್ದನ್ನು ಅವಲೋಕಿಸಿದ ಜಿಲ್ಲಾಧಿಕಾರಿ, ಅದರ ವಿವರಗಳಿಗಾಗಿ ಅಂದಿನ ಮೂಡಾ ಆಯುಕ್ತ ಡಾ| ಭಾಸ್ಕರ್‌ ಎನ್‌. ನೇತೃತ್ವದಲ್ಲಿ ಸಮಿತಿ ರಚಿಸಿ ಎರಡು ವಾರದೊಳಗೆ ವರದಿ ನೀಡುವಂತೆ ಸೂಚಿಸಿದ್ದರು. ಇದರಲ್ಲಿ ಮನಪಾ ಕಂದಾಯ ವಿಭಾಗದ ಮುಖ್ಯಸ್ಥೆ ಗಾಯತ್ರಿ ನಾಯಕ್‌, ಪ್ರೊಬೆಷನರಿ ಎಸಿ ಮದನ್‌ ಮೋಹನ್‌, ಕೆಯುಐಡಿಎಫ್‌ಸಿ ಮುಖ್ಯಾಧಿಕಾರಿ ಜಯಪ್ರಕಾಶ್‌, ಧಾರ್ಮಿಕ ದತ್ತಿ ಇಲಾಖೆಯ ತಹಶೀಲ್ದಾರ್‌ ಮೋಹನ್‌ ಸಹಿತ ಐವರು ಸದಸ್ಯರು ಸಮಿತಿಯಲ್ಲಿದ್ದರು. ಸಮಿತಿ ಆದ ಬಳಿಕ ಡಾ| ಭಾಸ್ಕರ್‌ ಎನ್‌. ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಮರುನಿಯೋಜನೆಗೊಂಡ ಮೂಡಾ ಆಯುಕ್ತ ಶ್ರೀಕಾಂತ್‌ ಅಧಿಕಾರ ಸ್ವೀಕರಿಸಿದರು. ಆದರೆ ಲೋಕಸಭಾ ಚುನಾವಣೆ ಕಾರಣದಿಂದ ಮತ್ತೆ ಅಧಿಕಾರಿಗಳ ವರ್ಗಾವಣೆ ನಡೆದಿದ್ದು, ಸದ್ಯ ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿ ಪ್ರಮೀಳಾ ಅವರು ಪ್ರಭಾರ ಜವಾಬ್ದಾರಿಯಲ್ಲಿದ್ದಾರೆ.

ಮಧ್ಯಾಂತರ ವರದಿ ಸಲ್ಲಿಕೆ
ಈ ಸಂಬಂಧ ಜೂ. 5ರಂದು ಈ ಸಮಿತಿಯು 27 ಪುಟಗಳ ಮಧ್ಯಾಂತರ ವರದಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿತ್ತು. ಪೂರ್ಣ ವರದಿಗೆ ಮತ್ತೆ ಹೆಚ್ಚುವರಿ ಸಮಯಾವಕಾಶ ನೀಡಲಾಗಿತ್ತು. ಮೂಡಾ ಆಯುಕ್ತರಾಗಿದ್ದ ಶ್ರೀಕಾಂತ್‌ ರಾವ್‌ ನೇತೃತ್ವದಲ್ಲಿ 4 ಮಂದಿ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ಸಮಗ್ರ ವರದಿ ಸಿದ್ಧಗೊಳಿಸುತ್ತಿದ್ದರು. ಜತೆಗೆ ಪೂರ್ಣ ವರದಿ ತಯಾರಿಸಲು 4 ಮಂದಿ ಸಿಟಿ ಸರ್ವೆಯರ್‌ಗಳನ್ನು ನೇಮಕ ಮಾಡಲು ಜಿಲ್ಲಾಡಳಿತ ತಿಳಿಸಿತ್ತು. ಆ ವೇಳೆಗೆ ಚುನಾವಣೆ ಘೋಷಣೆಯಾಗಿ ಅಧಿಕಾರಿಗಳ ವರ್ಗಾವಣೆಯಾಯಿತು.

ಬೆಂಗಳೂರಿನಿಂದ ಟೊಪೋಗ್ರಫಿ ನಕ್ಷೆ ಬಂದಿತ್ತು!
ಸಮಗ್ರ ವರದಿಗೆ ಎನ್‌ಐಟಿಕೆ ತಂತ್ರಜ್ಞರ ಸಹಕಾರವನ್ನು ಪಡೆದುಕೊಳ್ಳಲಾಗಿತ್ತು. ಅವರು “ಟೊಪೋಗ್ರಫಿ ನಕ್ಷೆ’ಯ ಸಹಾಯ ಕೇಳಿದ್ದರು. ಈ ಹಿನ್ನೆಲೆಯಲ್ಲಿ ಮಂಗಳೂರು ತಾ.ಪಂ. ಅಧಿಕಾರಿಗಳ ಸಹಕಾರದಿಂದ ನಕ್ಷೆಯನ್ನು ಬೆಂಗಳೂರಿನಿಂದ ತರಿಸಿ ನೀಡಲಾಗಿತ್ತು. ಜತೆಗೆ, ರಾಜಕಾಲುವೆ ಸಾಗುವ ಹಾದಿಯ ಸರ್ವೆ ನಂಬರ್‌, ಇತರ ಮಾಹಿತಿಗಳನ್ನು ಸಮಿತಿ, ಎನ್‌ಐಟಿಕೆ ತಜ್ಞರ ಕಮಿಟಿಗೆ ನೀಡಲಾಗಿದೆ.

“ಚುನಾವಣೆ ಸಂಬಂಧ ಪ್ರಸ್ತುತ ನಾನು ಮೂಡಾ ಆಯುಕ್ತನಾಗಿ ಇತ್ತೀಚೆಗೆ ಅಧಿಕಾರ ಸ್ವೀಕರಿಸಿದ್ದು, ರಾಜಕಾಲುವೆ ವರದಿ ಸಲ್ಲಿಸಿರುವ ಬಗ್ಗೆ ಹೆಚ್ಚಿನ ಮಾಹಿತಿ ನನ್ನಲ್ಲಿ ಸದ್ಯಕ್ಕಿಲ್ಲ. ಈ ಬಗ್ಗೆ ಅಧಿಕಾರಿಗಳಲ್ಲಿ ಮಾಹಿತಿ ಪಡೆದುಕೊಳ್ಳಲಾಗುವುದು’ ಎಂಬುದು ಪ್ರಸಕ್ತ ಮೂಡಾ ಪ್ರಭಾರ ಆಯುಕ್ತರಾಗಿರುವ ಪ್ರಮೀಳಾ ಅವರ ಅಭಿಪ್ರಾಯ. “ಪ್ರಾರಂಭಿಕ ವರದಿಯನ್ನು ಸಲ್ಲಿಸಲಾಗಿದ್ದು, ಅದರಂತೆ ಕೆಲವು ಒತ್ತುವರಿಯನ್ನು ಪಾಲಿಕೆಯು ಈಗಾಗಲೇ ತೆರವು ಮಾಡಿದೆ’ ಎನ್ನುವುದು ಸಮಿತಿಯ ಸದಸ್ಯೆ ಮನಪಾ ಕಂದಾಯ ವಿಭಾಗದ ಮುಖ್ಯಸ್ಥೆ ಗಾಯತ್ರಿ ನಾಯಕ್‌ ಅಭಿಪ್ರಾಯ.

ಕೆಲವು ಕಡೆಗಳಲ್ಲಿ ಒತ್ತುವರಿ ತೆರವು
ಜಿಲ್ಲಾಧಿಕಾರಿ ನೇಮಿಸಿದ ಸಮಿತಿಯು ಜಿಲ್ಲಾಧಿಕಾರಿ ಯವರಿಗೆ ಸಲ್ಲಿಸಿದ ಮಧ್ಯಾಂತರ ವರದಿಯಲ್ಲಿ ನಗರದ ಕೆಲವು ಕಡೆಗಳಲ್ಲಿ ರಾಜಕಾಲುವೆ ಒತ್ತುವರಿ ಆಗಿದೆ ಎಂಬುದನ್ನು ಬೊಟ್ಟು ಮಾಡಿ ತಿಳಿಸಿತ್ತು. ಇದನ್ನು ಅದಾಗಲೇ ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ, ಪಾಲಿಕೆ ಕೆಲವು ಒತ್ತುವರಿಯನ್ನು ತೆರವು ಮಾಡಿದ್ದರು. ಹೀಗಾಗಿ ಅಂತಿಮ ವರದಿ ಬಂದ ಬಳಿಕ ಇನ್ನಷ್ಟು ಒತ್ತುವರಿಗೆ ಬ್ರೇಕ್‌ ಬೀಳಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ತಾಂತ್ರಿಕ ಕಾರಣದ ನೆಪದಿಂದ ವರದಿ ಮಾತ್ರ ತಡವಾಗುತ್ತಲೇ ಇದೆ!

-  ದಿನೇಶ್‌ ಇರಾ

ಟಾಪ್ ನ್ಯೂಸ್

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವುMangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು

Mangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು

Mangaluru:ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ;ಅಧ್ಯಕ್ಷರಾಗಿ ಡಾ| ಪ್ರಭಾಕರ ಶಿಶಿಲ ಆಯ್ಕೆ

Mangaluru:ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ;ಅಧ್ಯಕ್ಷರಾಗಿ ಡಾ| ಪ್ರಭಾಕರ ಶಿಶಿಲ ಆಯ್ಕೆ

ಜ. 11,12: ಮಂಗಳೂರಿನಲ್ಲಿ ಬೀಚ್‌ ಉತ್ಸವ

ಜ. 11,12: ಮಂಗಳೂರಿನಲ್ಲಿ ಬೀಚ್‌ ಉತ್ಸವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.