Kambala, ಕ್ರೀಡೆಗೆ ಉತ್ತೇಜನ: ಸಚಿವ ಬಿ. ನಾಗೇಂದ್ರ
Team Udayavani, Jan 13, 2024, 11:54 PM IST
ಉಳ್ಳಾಲ: ರಾಜ್ಯ ಸರಕಾರ ಮತ್ತು ಕ್ರೀಡಾ ಇಲಾಖೆ ಕಂಬಳ ಸೇರಿದಂತೆ ಕ್ರೀಡೆಗೆ ಉತ್ತೇಜನ ನೀಡಲು ಬದ್ಧವಾಗಿದ್ದು, ಕಂಬಳಕ್ಕೆ ಅನುದಾನ ಬಿಡುಗಡೆ ಸೇರಿದಂತೆ ನರಿಂಗಾನದಲ್ಲಿ ಆಟದ ಮೈದಾನ ನಿರ್ಮಾಣಕ್ಕೆ ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದು ಯುವಜನ ಮತ್ತು ಕ್ರೀಡಾ ಸಚಿವ ಬಿ. ನಾಗೇಂದ್ರ ಅಭಿಪ್ರಾಯಪಟ್ಟರು.
ಉಳ್ಳಾಲ ತಾಲೂಕಿನ ನರಿಂಗಾನದ ಲವ-ಕುಶ ಜೋಡುಕರೆ ಕಂಬಳ ಸಮಿತಿ ಆಶ್ರಯದಲ್ಲಿ ನರಿಂಗಾನದ ಮೋರ್ಲ ಬೋಳದಲ್ಲಿ ನಡೆದ ದ್ವಿತೀಯ ವರ್ಷದ ಹೊನಲು ಬೆಳಕಿನ ಲವ-ಕುಶ ಜೋಡುಕರೆ “ನರಿಂಗಾನ ಕಂಬಳ್ಳೋತ್ಸ’ವದಲ್ಲಿ ಭಾಗವಹಿಸಿ ಮಿತ್ತಕೋಡಿ ಶರತ್ ಕಾಜವ ವೇದಿಕೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿ, ಮಂಗಳೂರಿನ ಕಂಬಳವನ್ನು ಬೆಂಗಳೂರಿನಲ್ಲಿ ಆಯೋಜನೆ ಮಾಡಿದಾಗ ಕ್ರೀಡಾ ಇಲಾಖೆ 1 ಕೋಟಿ ರೂ. ಕೊಟ್ಟದೆ.
ಕರಾವಳಿಯಲ್ಲಿ ನಡೆಯುವ ಕಂಬಳಕ್ಕೂ ಪ್ರೋತ್ಸಾಹ ನೀಡಲು ಸಿದ್ಧವಿದೆ ಎಂದರು. ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮಾತನಾಡಿ ಎಲ್ಲ ಜಾತಿ, ಧರ್ಮದವರು ಸೇರಿ ಮಾಡುವ ಸಾರ್ವಜನಿಕ ಕಂಬಳವಾಗಿದ್ದು, ಇದು ಸೌಹಾರ್ದದ ಪ್ರತೀಕವಾಗಿದೆ ಎಂದರು.
ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು. ಟಿ. ಖಾದರ್ ರವರ ಮಂಗಳೂರು ವಿಧಾನಸಭಾ ಕ್ಷೇತ್ರದ ನರಿಂಗಾನ ಗ್ರಾಮದಲ್ಲಿ ಆಯೋಜಿಸಿದ್ದ ನರಿಂಗಾನ ಕಂಬಳೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ತುಳುನಾಡಿನ ಜನಪ್ರಿಯ ಕೋಣಗಳ ಕಂಬಳ ಕ್ರೀಡೆಯನ್ನು ವೀಕ್ಷಿಸಿದೆ.
ಈ ಸಂಧರ್ಭದಲ್ಲಿ ಸಭಾಧ್ಯಕ್ಷರಾದ ಯು. ಟಿ ಖಾದರ್ ರವರು, ಮಾಜಿ ಸಚಿವ ರಮಾನಾಥ್… pic.twitter.com/B2AWUPsmPG
— B Nagendra (@BNagendraINC) January 13, 2024
ಮಾಜಿ ಸಚಿವ ರಮಾನಾಥ ರೈ, ವಿಧಾನಸಭಾ ಸದಸ್ಯ ಹರೀಶ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಕ್ರೀಡಾ ಕಮಿಷನರ್ ಶಶಿಕುಮಾರ್, ಕಣಚೂರು ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ| ಯು. ಕಣಚೂರು ಮೋನು, ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ, ಇಂಟಕ್ ರಾಜ್ಯಾಧ್ಯಕ್ಷ ರಾಕೇಶ್ ಮಲ್ಲಿ, ದ.ಕ.ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ, ಮಂಜನಾಡಿ ದರ್ಗಾ ಅಧ್ಯಕ್ಷ ಅಬ್ದುಲ್ ಅಜೀಝ್ ಮೈಸೂರು ಬಾವಾ, ದ.ಕ. ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪ್ಪಾಡಿ, ಮುಂಬಯಿಯ ಉದ್ಯಮಿ ವಿವೇಕ್ ಶೆಟ್ಟಿ ಬೊಲ್ಯಗುತ್ತು, ದೇರಳಕಟ್ಟೆಯ ದ ಕಂಫರ್ಟ್ಸ್ ಇನ್‌ನ ಚಂದ್ರಹಾಸ ಶೆಟ್ಟಿ, ರಕ್ಷಿತ್ ಶಿವರಾಮ್, ಮೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕಿ ಡಿ. ಪದ್ಮಾವತಿ, ಕಟಪಾಡಿ ಕಂಬಳದ ರೋಹಿತ್ ಹೆಗ್ಡೆ ಭಾಗವಹಿಸಿದ್ದರು.
ಗೌರವ
ಈ ಸಂದರ್ಭದಲ್ಲಿ ಪಜೀರುಗೇದಗೆ ಬೈಲ್‌ನಲ್ಲಿ ಲವ – ಕುಶ ಕಂಬಳವನ್ನು 25 ವರ್ಷಗಳ ಕಾಲ ಮುನ್ನಡೆಸಿದ ಮಿತ್ತಕೋಡಿ ವೆಂಕಪ್ಪ ಕಾಜವ ಮತ್ತು ಉಮೇಶ್ ಮಹಾಬಲ ಶೆಟ್ಟಿ ಮಾಣಿ ಸಾಗು ಅವರನ್ನು ಗೌರವಿಸಲಾಯಿತು.
ಕಂಬಳ ಸಮಿತಿ ಕಾರ್ಯಾಧ್ಯಕ್ಷ ಪ್ರಶಾಂತ್ ಕಾಜವ ಸ್ವಾಗತಿಸಿದರು. ನವಾಝ್ ನರಿಂಗಾನ ಮತ್ತು ಜೋಸೆಫ್ ಕುಟಿನ್ಹ ಸಮ್ಮಾನ ಪತ್ರ ವಾಚಿಸಿದರು. ಸತೀಶ್ ಕುಮಾರ್ ಪುಂಡಿಕಾç ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.