ಭರವಸೆಯಲ್ಲೇ ಉಳಿದ ಸಂತ್ರಸ್ತರ ಶಾಶ್ವತ ಪುನರ್ವಸತಿ ಕೇಂದ್ರ

Team Udayavani, Jan 9, 2017, 11:54 PM IST

Endo-Baduku-Bavane–Logo.jpg

ಆಲಂಕಾರು: ಎಂಡೋ ಸಂತ್ರಸ್ತರ ಬಾಳಲ್ಲಿ ಕೋಲ್ಮಿಂಚು ಮೂಡಿಸಬಹುದಾಗಿದ್ದ ಭರವಸೆಗೆ ನಾಲ್ಕು ವರ್ಷಗಳಾದವು. ಅದಿನ್ನೂ ಈಡೇರಿಲ್ಲ. ಆಲಂಕಾರಿನಲ್ಲಿ ಎಂಡೋ ಸಂತ್ರಸ್ತರ ಶಾಶ್ವತ ಪುನರ್‌ವಸತಿ ಕೇಂದ್ರ ನಿರ್ಮಿಸುವುದಾಗಿ ಸರಕಾರ ಹೇಳಿತ್ತು. ಈ ನಿಟ್ಟಿನಲ್ಲಿ ಸಚಿವರು, ಜನಪ್ರತಿನಿಧಿಗಳು ಹಲವು ಭರವಸೆ ನೀಡಿದರು. ಅಂದಿನ ಆರೋಗ್ಯ ಸಚಿವ ಯು.ಟಿ. ಖಾದರ್‌ ಅಧಿಕಾರ ಸ್ವೀಕರಿಸಿದ ವಾರದಲ್ಲೇ ಆಲಂಕಾರು ಗ್ರಾ.ಪಂ. ಅಧೀನದ ಜಾಗದಲ್ಲಿ ಎಂಡೋ ಸಂತ್ರಸ್ತರಿಗೆ ಶಾಶ್ವತ ಪುನರ್ವಸತಿ ಕೇಂದ್ರ ಸ್ಥಾಪನೆಗಾಗಿ ಮೀಸಲಿರಿಸಿದ್ದ ಜಾಗಕ್ಕೆ ಭೇಟಿ ನೀಡಿ, ದಾಖಲೆ ಪತ್ರಗಳನ್ನು ವೀಕ್ಷಿಸಿ ವರ್ಷದೊಳಗೆ ಆರಂಭಿಸಲಾಗುವುದು ಎಂದಿದ್ದರು. 4 ವರ್ಷಗಳಾದರೂ ಈ ಬಗ್ಗೆ ಸರಕಾರಿ ಮಟ್ಟದಲ್ಲಿ ಯಾವುದೇ ಪ್ರಕ್ರಿಯೆ ನಡೆದಿಲ್ಲ. ಈಗ ಅವರ ಸ್ಥಾನಕ್ಕೆ ರಮೇಶ್‌ ಕುಮಾರ್‌ ಬಂದಿದ್ದಾರೆ. ಆರೋಗ್ಯ ಇಲಾಖೆಯ ಆಯುಕ್ತ ಎ.ಬಿ. ಪಾಟೀಲ್‌ ಸಹ ಇದೇ ಸ್ಥಳಕ್ಕೆ ಭೇಟಿ ನೀಡಿ, ಆಲಂಕಾರನ್ನು ಕೇಂದ್ರವಾಗಿರಿಸಿ ಜಿಲ್ಲೆಗೆ ಶಾಶ್ವತ ಪುನರ್ವಸತಿ ಕೇಂದ್ರ, ಎಂಟು ಪಾಲನಾ ಕೇಂದ್ರಗಳನ್ನು ವಿವಿಧೆಡೆ ತೆರೆಯುವುದಾಗಿ ಹೇಳಿದ್ದರು, ಅದೂ ಈಡೇರಿಲ್ಲ.

ಅಂದು ಆರೋಗ್ಯ ಸಚಿವರಾಗಿದ್ದಾಗ ಯು.ಟಿ. ಖಾದರ್‌ ಆಲಂಕಾರಿನಲ್ಲಿ ಎಂಡೋ ಸಂತ್ರಸ್ತರ ಶಾಶ್ವತ ಪುನರ್ವಸತಿ ಕೇಂದ್ರಕ್ಕಾಗಿ ಮೀಸಲಿಟ್ಟ ಜಾಗದಲ್ಲಿ ದಾಖಲೆ ಪತ್ರಗಳನ್ನು ವೀಕ್ಷಿಸುತ್ತಿರುವುದು.

ಓರ್ವರ ಭರವಸೆಯಲ್ಲ
ಬೆಳ್ತಂಗಡಿ, ಸುಳ್ಯ, ಬಂಟ್ವಾಳ ತಾಲೂಕುಗಳಲ್ಲದೇ, ಪುತ್ತೂರು ತಾಲೂಕಿನ 31 ಗ್ರಾಮ ಗಳಲ್ಲಿ ಎಂಡೋ ಸಿಂಪಡನೆಯಾಗಿತ್ತು. ಇದರಿಂದ ನೊಂದವರಿಗೆ ಸೂಕ್ತ ಪರಿಹಾರ ದೊರಕಿಸಲು ಕೊಕ್ಕಡದಲ್ಲಿ ಎಂಡೋ ಸಂತ್ರಸ್ತರ ಹೋರಾಟ ಸಮಿತಿಯೊಂದು ಅಸ್ತಿತ್ವಕ್ಕೆ ಬಂದು ಅಂದಿನ ಮುಖ್ಯಮಂತ್ರಿ ಧರಂ ಸಿಂಗ್‌ ಅವರಿಗೆ ಮನವಿ ನೀಡುತ್ತಾ ಬಂದಿತ್ತು. ಈ ವಿಚಾರ ವಿಧಾನಸಭೆಯಲ್ಲಿ ಪ್ರತಿಧ್ವನಿಸಿತು. ಆಗ ವಿಧಾನಪರಿಷತ್‌ ಸದಸ್ಯರಾಗಿದ್ದ ಶೋಭಾ ಕರಂದ್ಲಾಜೆ ಕೊಕ್ಕಡಕ್ಕೆ ಭೇಟಿ ನೀಡಿ ಸರಕಾರಕ್ಕೆ ವರದಿ ನೀಡಿದರು. ಈ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ನಿಡ್ಲೆ, ಪಟ್ರಮೆ, ಕೊಕ್ಕಡ ಗ್ರಾಮಗಳ ಮತ್ತು ಆಲಂಕಾರು ಗ್ರಾಮದ ಬುಡೇರಿಯಾದ ರಾಜೀವಿ ಕುಟುಂಬ ಸೇರಿದಂತೆ 211 ಕುಟುಂಬಗಳ 213 ಮಂದಿಗೆ ತಲಾ 50 ಸಾವಿರದಂತೆ ಪರಿಹಾರ ಧನ ಹಾಗೂ ಮಾಶಾಸನ ವಿತರಿಸಲಾಗಿತ್ತು.

– ಸದಾನಂದ ಆಲಂಕಾರು

ಇದನ್ನೂ ಓದಿ:

► ಎಂಡೋ ಪೀಡಿತ ಕುಟುಂಬದ್ದು ಬದುಕು ಅಲ್ಲ; ಅದು ಬವಣೆ!: http://bit.ly/2jcQis0
► ‘ಹಳೆಯ ಔಷಧವನ್ನೇ ಸದ್ಯಕ್ಕೆ ಮುಂದುವರಿಸಿ’: http://bit.ly/2jr8en7
► ಇನ್ನೂ ಬಾರದ ಶಾಶ್ವತ ಪುನರ್‌ವಸತಿ ಕೇಂದ್ರ: http://bit.ly/2is2W6M

ಟಾಪ್ ನ್ಯೂಸ್

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

Congress-Symbol

Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

Modi-Tour

Mann Ki Baat: ಮೈಸೂರಿನ ‘ಅರ್ಲಿ ಬರ್ಡ್‌’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

Congress-Symbol

Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.