ಆಂಗ್ಲ ಭಾಷಾ ಸಂವಹನ ತರಗತಿಗೆ ಚಾಲನೆ
Team Udayavani, Jul 5, 2017, 3:40 AM IST
ಬೆಳ್ತಂಗಡಿ: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಆಂಗ್ಲ ಭಾಷಾ ಸಂವಹನಕ್ಕಾಗಿ ವಿಶೇಷ ತರಗತಿಗಳಿಗೆ ಚಾಲನೆ ನೀಡಲಾಯಿತು. ಬೆಳಾಲು ಗ್ರಂಥಾಲಯದ ಗ್ರಂಥಪಾಲಕ ಡೀಕಯ್ಯ ಗೌಡ ಕಾರ್ಯಕ್ರಮ ಉದ್ಘಾಟಿಸಿ, ವ್ಯವಹಾರಕ್ಕಾಗಿ ಆಂಗ್ಲ ಭಾಷೆ ಅನಿವಾರ್ಯ. ಆದರೆ ಆಂಗ್ಲ ಭಾಷಾ ಕಲಿಕೆಯ ನೆಪದಲ್ಲಿ ಶಿಕ್ಷಣವು ವ್ಯಾಪಾರೀಕರಣವಾಗಿರುವುದು ಮೌಲಿಕ ಶಿಕ್ಷಣದ ಕುಸಿತಕ್ಕೆ ಕಾರಣ. ಈ ಹಿನ್ನೆಲೆಯಲ್ಲಿ ಬೆಳಾಲಿನಂತಹ ಹಳ್ಳಿ ಪ್ರದೇಶದಲ್ಲಿ ಕಲಿಸುವುದಕ್ಕೆ ವಿಶೇಷ ಪ್ರಯತ್ನ ಈ ಪ್ರೌಢಶಾಲೆಯಲ್ಲಿ ನಿರಂತರ ನಡೆಯುತ್ತಿರುವುದು ಶ್ಲಾಘನೀಯ ಎಂದವರು ತಿಳಿಸಿದರು.
ಶಾಲಾ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಮಾರ್ಗದರ್ಶಿ ಶಿಕ್ಷಕ ಜಗದೀಶ್ ನಿರ್ದೇಶನದಲ್ಲಿ ಕಾರ್ಯಕ್ರಮ ಜರಗಿತು. ಶಿಕ್ಷಕರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಆಂಗ್ಲ ಭಾಷೆಯಲ್ಲಿ ಕಿರು ಪ್ರಹಸನ ನಡೆಯಿತು. ಪವಿತ್ರಾ, ಪೌಝಿಯಾ, ದೇವಿಕಾ, ತೃಪ್ತಿ, ಶಿಲ್ಪಾ, ರಚನಾ ನಿರ್ವಹಿಸಿದರು. ಮೋಕ್ಷಾ ಸ್ವಾಗತಿಸಿ, ಅಮೃತೇಶ್ ವಂದಿಸಿದರು. ರೇಶ್ಮಾ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.