ಅಜ್ಜಿಬೆಟ್ಟು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಮಾಧ್ಯಮ

ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ಅನುಮತಿ ಪಡೆದ ಏಕೈಕ ಶಾಲೆ

Team Udayavani, May 25, 2019, 5:50 AM IST

w-4

ಬಂಟ್ವಾಳ: ಬಂಟ್ವಾಳ ಪುರಸಭಾ ವ್ಯಾಪ್ತಿಯ ಮೂರು ಗ್ರಾಮಗಳ ವ್ಯಾಪ್ತಿಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ವಿಭಾಗ ಆರಂಭಿಸಲು ಬಿ. ಮೂಡ ಗ್ರಾಮ ಅಜ್ಜಿಬೆಟ್ಟು ಸರಕಾರಿ ಹಿ.ಪ್ರಾ. ಶಾಲೆ ಸರಕಾರದ ಅನುಮತಿ ಪಡೆಯಲು ಯಶಸ್ವಿಯಾಗಿದೆ. ಅನುಮತಿ ಜತೆಗೆ ಪ್ರವೇಶ ದಾಖಲಾತಿಯೂ ಆರಂಭಗೊಂಡಿದೆ ಎಂದು ಶಾಲಾಭಿವೃದ್ಧಿ, ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಶ್ರೀಧರ ಅಮೀನ್‌ ಅಗ್ರಬೈಲು ತಿಳಿಸಿದ್ದಾರೆ.
ಮೇ 24ರಂದು ಶಾಲೆಯಲ್ಲಿ ನಡೆದ ಪೋಷಕರು ಮತ್ತು ಶಾಲಾಭಿವೃದ್ಧಿ ಸಮಿತಿಯ ಸಭೆಯಲ್ಲಿ ಮಾಹಿತಿ
ಅವರು ನೀಡಿದರು.

ಏಕೈಕ ಶಾಲೆ
ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಪಡೆಯಲು ಆಯ್ಕೆಯಾದ ಏಕೈಕ ಸರಕಾರಿ ಶಾಲೆಯಾಗಿದೆ. ನಗರ ಪ್ರದೇಶದಲ್ಲಿ ಆಂಗ್ಲ ಮಾಧ್ಯಮಕ್ಕಾಗಿ ಸಾವಿರಾರು ರೂ. ಖರ್ಚು ಮಾಡಿಕೊಂಡು ಖಾಸಗಿ ಶಾಲೆಗಳನ್ನೇ ಅವಲಂಬಿಸಬೇಕಾದ ಅನಿವಾರ್ಯ ಇರುವವರಿಗೆ ಈ ಸರಕಾರಿ ಶಾಲೆ ವರದಾನವಾಗಲಿದೆ.

ಬಿ.ಸಿ. ರೋಡ್‌ನ‌ ಪೇಟೆಯಿಂದ ಅನತಿ ದೂರದಲ್ಲಿರುವ ಈ ಶಾಲೆಯಲ್ಲಿ ಅನುಭವಿ ಅಧ್ಯಾಪಕರು ಹಾಗೂ ಕ್ರೀಯಾಶೀಲ ಗೌರವ ಶಿಕ್ಷಕರಿದ್ದಾರೆ. ಕ್ರೀಡೆ, ಯಕ್ಷಗಾನ, ನೃತ್ಯ, ಯೋಗ, ಹೊರಾಂಗಣ ಭೇಟಿ ಹಾಗೂ ಇನ್ನಿತರ ಚಟುವಟಿಕೆಗಳಿಗೆ ಹೆಚ್ಚಿನ ಅವಕಾಶ ನೀಡಲಾಗುತ್ತಿದ್ದು, ಜೀವನಾಧಾರಿತ ಕೌಶಲ್ಯಕ್ಕೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ.

ರೋಟರಿ ಕ್ಲಬ್‌ ಹಾಗೂ ದಾನಿಗಳ ಸಹಕಾರದಿಂದ ಶಾಲೆಯ ಎಲ್ಲ ತರಗತಿ ಕೊಠಡಿಗಳಿಗೆ ಟೈಲ್ಸ್‌ ಆಳವಡಿಸಿ, ಗೋಡೆಗೆ ಆಕರ್ಷಕ ಚಿತ್ತಾರಗಳಿರುವ ಪೈಟಿಂಗ್ಸ್‌ ಮಾಡಿ ನವೀಕರಿಸಲಾಗಿದೆ. ಶಾಲಾ ಆವರಣದಲ್ಲಿ ಸಿ.ಸಿ. ಕೆಮರಾಗಳನ್ನು ಆಳವಡಿಸಲಾಗಿದ್ದು, ಮಕ್ಕಳ ಸುರಕ್ಷತೆಗೆ ಹೆಚ್ಚಿನ ಮುತುವರ್ಜಿ ವಹಿಸಲಾಗುತ್ತದೆ. ಬಿಸಿ ನೀರು, ಬಿಸಿಯೂಟ, ಗಾಳಿ, ಬೆಳಕು, ಶೌಚಾಲಯ ಹಾಗೂ ಇನ್ನಿತರ ಮೂಲ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಶಾಲಾ ಆಟದ ಮೈದಾನವನ್ನು ಸರ್ವ ಋತುಗಳಲ್ಲಿಯೂ ಉಪಯೋಗಿಸುವಂತೆ ಸುಂದರಗೊಳಿಸಲಾಗುತ್ತಿದೆ.

ಶಿಕ್ಷಣ ಇಲಾಖೆಯು ಅತ್ಯುತ್ತಮ ಶಾಲೆಗಳ ಪಟ್ಟಿಯಲ್ಲಿ ಈ ಶಾಲೆಯನ್ನು ಗುರುತಿಸಿದೆ. ಆಂಗ್ಲ ಹಾಗೂ ಕನ್ನಡ ಮಾಧ್ಯಮಕ್ಕೆ ಸೇರಲು ಇಲ್ಲಿ ಮುಕ್ತ ಅವಕಾಶವಿದೆ. ಸರಕಾರದಿಂದ ಉಚಿತವಾಗಿ ಬಿಸಿಯೂಟ, ಉಪಾಹಾರ, ಹಾಲು, ಸಮವಸ್ತ್ರ , ಶೂ-ಸಾಕ್ಸ್‌, ಪಠ್ಯ ಪುಸ್ತಕ ನೀಡಲಾಗುತ್ತಿದೆ. ಹಳೆ ವಿದ್ಯಾರ್ಥಿಗಳು ಹಾಗೂ ಇತರ ವಿದ್ಯಾಭಿಮಾನಿಗಳ ಸಹಕಾರದಿಂದ ಬರೆಯುವ ಪುಸ್ತಕಗಳು, ಬೆಲ್ಟ್, ಗುರುತಿನ ಚೀಟಿ ಇತ್ಯಾದಿಗಳನ್ನು ಒದಗಿಸಲಾಗುತ್ತಿದೆ.

80 ವರ್ಷಗಳ ಇತಿಹಾಸ ಹೊಂದಿದೆ. ಈ ಶಾಲೆಯಲ್ಲಿ
ಕಳೆದ 3 ವರ್ಷಗಳಿಂದ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷಣ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗಿದ್ದು, 6 ಹಾಗೂ 7ನೇ ತರಗತಿಯಲ್ಲಿ ಆಂಗ್ಲ ಮಾಧ್ಯಮವನ್ನು ಆರಂಭಿಸಲಾಗಿದೆ. ಇದೀಗ 1ರಿಂದ 5ನೇ ತರಗತಿಯವರೆಗೂ ಆಂಗ್ಲ ಮಾಧ್ಯಮಕ್ಕೆ ಸರಕಾರ ವಿಶೇಷ ಅನುಮತಿ ನೀಡಿರುವುದರಿಂದ ಈ ಪ್ರದೇಶದ ಬಡ ಹಾಗೂ ಮಧ್ಯಮ ವರ್ಗದವರಿಗೆ ಬಹಳಷ್ಟು ಅನುಕೂಲವಾಗಿದೆ. ಈ ಶಾಲಾ ಆವರಣದೊಳಗಿರುವ 8ರಿಂದ 10ನೇ ತರಗತಿವರೆಗಿನ ಪ್ರೌಢಶಾಲೆಗೆ ಕೂಡ ಕಳೆದ 2 ವರ್ಷಗಳಿಂದ ಆಂಗ್ಲ ಮಾಧ್ಯಮ ವಿಭಾಗ ಆರಂಭಿಸಲು ಅನುಮತಿ ದೊರಕಿರುತ್ತದೆ. ಎಲ್‌ಕೆಜಿ, ಯುಕೆಜಿ ಹಾಗೂ 1ರಿಂದ 10ನೇ ತರಗತಿವರೆಗೆ ಆಂಗ್ಲ ಆಥವಾ ಕನ್ನಡ ಮಾಧ್ಯಮಗಳನ್ನು ಆಯ್ದುಗೊಳ್ಳಲು ಇಲ್ಲಿ ಮುಕ್ತ ಅವಕಾಶವಿರುತ್ತದೆ ಎಂದು ಶಾಲಾಭಿವೃದ್ಧಿ, ಮೇಲುಸ್ತು ವಾರಿ ಸಮಿತಿ ಅಧ್ಯಕ್ಷ ಶ್ರೀಧರ ಅಮೀನ್‌ ಅಗ್ರಬೈಲು ತಿಳಿಸಿದ್ದಾರೆ.

ಟಾಪ್ ನ್ಯೂಸ್

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

dw

Puttur: ಕೆರೆಗೆ ಬಿದ್ದು ವ್ಯಕ್ತಿ ಸಾವು

1(1)

Vitla: ನಾಲ್ಕೂ ದಿಕ್ಕಿನಿಂದ ಬರುವ ರಸ್ತೆಗಳಲ್ಲಿ ಗುಂಡಿಯೋ ಗುಂಡಿ

Aranthodu: ಕಾನೂನು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Aranthodu: ಕಾನೂನು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Untitled-5

Puttur: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

16

Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್‌ಗೆ ದಂಡ

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.