ಪಾಲೋಳಿ ಸೇತುವೆಗೆ 23.38 ಕೋಟಿ ರೂ. ಅಂದಾಜುಪಟ್ಟಿ


Team Udayavani, Nov 18, 2018, 10:56 AM IST

18-november-3.gif

ಕಡಬ : ಕುಮಾರಧಾರಾ ಹೊಳೆಗೆ ಕಡಬ ಗ್ರಾಮದ ಪಿಜಕಳದ ಪಾಲೋಳಿಯಲ್ಲಿ ಸರ್ವಋತು ಸೇತುವೆ ನಿರ್ಮಿಸಬೇಕೆಂಬ ಗ್ರಾಮಸ್ಥರ ಬೇಡಿಕೆ ಕೊನೆಗೂ ಸರಕಾರದ ಹಂತಕ್ಕೆ ತಲುಪಿದೆ. ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ ಅವರ ಸೂಚನೆಯಂತೆ ಶಾಶ್ವತ ಸೇತುವೆ ನಿರ್ಮಾಣಕ್ಕೆ 23.38 ಕೋಟಿ ರೂ.ಗಳ ಅಂದಾ ಜುಪಟ್ಟಿ ತಯಾರಿಸಲಾಗಿದ್ದು, ಸರಕಾರದ ಆಡಳಿತಾತ್ಮಕ ಅನುಮೋದನೆಗೆ ಕಳುಹಿಸಿಕೊಡಲಾಗಿದೆ.

ಪಾಲೋಳಿಯಲ್ಲಿ ಸರ್ವಋತು ಸೇತುವೆ ನಿರ್ಮಾಣವಾಗ ಬೇಕೆಂಬುದು 30 ವರ್ಷಗಳ ಬೇಡಿಕೆ. ಸ್ಥಳೀಯರು ಸೇರಿಕೊಂಡು ಸಂಘಟನಾತ್ಮಕವಾಗಿ ಹೋರಾಟ ರೂಪಿಸುವ ಸಲುವಾಗಿ ನಿವೃತ್ತ ಶಿಕ್ಷಕ ಸಾಂತಪ್ಪ ಗೌಡ ಪಿಜಕಳ ಅವರ ಅಧ್ಯಕ್ಷತೆಯಲ್ಲಿ ಪಾಲೋಳಿ ಕುಮಾರಧಾರಾ ಶಾಶ್ವತ ಸೇತುವೆ ಹೋರಾಟ ಸಮಿತಿ ರಚಿಸಿ, ಹೋರಾಟ ಆರಂಭಿಸಿದ್ದರು. ಕಡಬದ ರಾಜಕೀಯ ಮುಂದಾಳು, ಜಿಲ್ಲಾ ಪರಿಷತ್‌ ಮಾಜಿ ಸದಸ್ಯ ಸಯ್ಯದ್‌ ಮೀರಾ ಸಾಹೇಬ್‌ ಅವರು ಲೋಕೋಪಯೋಗಿ ಸಚಿವರನ್ನು ಭೇಟಿ ಮಾಡಿ, ಪಾಲೋಳಿ ಸೇತುವೆ ನಿರ್ಮಾಣದ ಅಗತ್ಯವನ್ನು ಮನವರಿಕೆ ಮಾಡಿಕೊಟ್ಟ ಪರಿಣಾಮ ಗ್ರಾಮಸ್ಥರ ಹೋರಾಟಕ್ಕೆ ಸರಕಾರದ ಮಟ್ಟದಲ್ಲಿ ಪ್ರಥಮ ಸ್ಪಂದನೆ ಲಭಿಸಿದೆ.

ಬೇಸಗೆಯಲ್ಲಿ ತಾತ್ಕಾಲಿಕ ಸೇತುವೆಗೆ ಮೊರೆ
ಕೆಲವು ವರ್ಷಗಳಿಂದ ಊರವರೇ ಸೇರಿಕೊಂಡು ಶ್ರಮದಾನದ ಮೂಲಕ ಇಲ್ಲಿ ತಾತ್ಕಾಲಿಕ ನೆಲೆಯ ಸೇತುವೆ ನಿರ್ಮಾಣ ಮಾಡುತ್ತಿದ್ದಾರೆ. 4 ವರ್ಷಗಳ ಹಿಂದೆ ದಾನಿಗಳ ಆರ್ಥಿಕ ನೆರವಿನಿಂದ ಎಡಮಂಗಲ ಹಾಗೂ ಪಿಜಕಳ ಪರಿಸರದ ಜನರ ಶ್ರಮದಾನದ ಫಲವಾಗಿ 120 ಮೀ. ಉದ್ದ, 10 ಮೀ. ಆಗಲದ ಸೇತುವೆ ನಿರ್ಮಿಸಲಾಗಿತ್ತು. ಆದರೆ ಮಳೆಗಾಲದಲ್ಲಿ ನೀರಿನ ಹೊಡೆತಕ್ಕೆ ಸಿಲುಕಿ ಕೊಚ್ಚಿಹೋಗುವ ಸೇತುವೆಯನ್ನು ಪ್ರತೀ ಬೇಸಗೆಯಲ್ಲಿ ಊರವರು ಪುನರ್‌ ನಿರ್ಮಾಣ ಮಾಡಿ ಉಪಯೋಗಿಸುತ್ತಿದ್ದಾರೆ. 

ಈ ಬಾರಿ ಮತ್ತೆ ಶ್ರಮದಾನದ ಮೂಲಕ ಹಾನಿಯಾಗಿರುವ ತಾತ್ಕಾಲಿಕ ಸೇತುವೆಯ ದುರಸ್ತಿಗೆ ಸಿದ್ಧತೆಗಳು ನಡೆಯುತ್ತಿವೆ.

ಕಡಬ-ಎಡಮಂಗಲ ಸುಲಭ ದಾರಿ
ಪಾಲೋಳಿ ಮತ್ತು ಎಡಮಂಗಲ ಪೇಟೆಯ ನಡುವೆ ಇರುವುದು ಕೇವಲ 2 ಕಿ.ಮೀ. ಗಳ ಅಂತರ. ಆದರೆ ಕುಮಾರಧಾರಾ ನದಿ ಹರಿಯುತ್ತಿರುವುದರಿಂದ ಪಾಲೋಳಿ – ಪಿಜಕ್ಕಳದ ಜನರು ಎಡಮಂಗಲವನ್ನು ತಲುಪಬೇಕಾದರೆ ಕಡಬ- ಕೋಡಿಂಬಾಳ-ಪುಳಿಕುಕ್ಕು ಮೂಲಕ 15 ಕಿ.ಮೀ.ಗಳಷ್ಟು ದೂರ ಸುತ್ತುಬಳಸಿ ಪ್ರಯಾಣಿಸಬೇಕಿದೆ. ಸಮರ್ಪಕ ಬಸ್‌ ಸೌಕರ್ಯ ಇಲ್ಲದ ಕಾರಣ ಸುಲಭದ ದಾರಿಯಲ್ಲ. ಪಾಲೋಳಿಯಲ್ಲಿ ಸೇತುವೆ ನಿರ್ಮಾಣವಾದರೆ ಕಡಬದಿಂದ ಕೇವಲ 5 ಕಿ.ಮೀ. ಸಂಚರಿಸಿ ಎಡಮಂಗಲ ತಲುಪಬಹುದು.

 ಹೆಚ್ಚು ಅನುಕೂಲ
ನೂತನವಾಗಿ ಆಸ್ತಿತ್ವಕ್ಕೆ ಬಂದಿರುವ ಕಡಬ ತಾಲೂಕಿನ ವ್ಯಾಪ್ತಿಗೆ ಎಡಮಂಗಲ, ಎಣ್ಮೂರು, ದೋಳ್ಪಾಡಿ, ಚಾರ್ವಾಕ ಹಾಗೂ ಕಾಣಿಯೂರು ಗ್ರಾಮಗಳು ಸೇರ್ಪಡೆಯಾಗಿದ್ದು, ತಾಲೂಕು ಕೇಂದ್ರ ಕಡಬವನ್ನು ತಲುಪಲು ಪಾಲೋಳಿ ಮಾರ್ಗ ಹತ್ತಿರದ ದಾರಿಯಾಗಿದೆ. ಇಲ್ಲಿ ಕುಮಾರಧಾರೆಗೆ ಶಾಶ್ವತ ಸೇತುವೆ ನಿರ್ಮಾಣವಾಗಬೇಕು. ಶಾಶ್ವತ ಸೇತುವೆ ನಿರ್ಮಾಣವಾದರೆ ಎರಡೂ ಬದಿಯ ಜನರಿಗೆ ಅನುಕೂಲವಾಗಲಿದೆ.
– ಚಂದ್ರಶೇಖರ ಮರಕ್ಕಡ, 
ಎಡಮಂಗಲ

ಅಂದಾಜುಪಟ್ಟಿ ಸಲ್ಲಿಕೆ
ಪಾಲೋಳಿ ಸೇತುವೆ ನಿರ್ಮಾಣಕ್ಕೆ ಅಂದಾಜುಪಟ್ಟಿ ತಯಾ ರಿಸಿ ಸರಕಾರಕ್ಕೆ ಕಳುಹಿಸಲಾಗಿದೆ. ಹಣಕಾಸು ಇಲಾಖೆಯಿಂದ ಅನುಮೋದನೆಯಾದ ಬಳಿಕ ಸರಕಾರದಿಂದ ಆಡಳಿತಾತ್ಮಕ ಅನುಮೋದನೆ ಸಿಕ್ಕಿ ಬಜೆಟ್‌ನಲ್ಲಿ ಅನುದಾನ ಇರಿಸಿದ ಮೇಲೆ ಟೆಂಡರ್‌ ಪ್ರಕ್ರಿಯೆ ನಡೆಯಬೇಕು. ಈ ಎಲ್ಲ ಪ್ರಕ್ರಿಯೆಗಳಿಗೆ ಸಾಕಷ್ಟು ಸಮಯಾವಕಾಶ ಅಗತ್ಯ.
-ಪ್ರಮೋದ್‌ಕುಮಾರ್‌ ಕೆ.ಕೆ.
ಪಿಡಬ್ಲ್ಯೂಡಿ ಎಇ, ಪುತ್ತೂರು

ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

POLICE-5

Malpe: ಜುಗಾರಿ ಅಡ್ಡೆಗೆ ದಾಳಿ, ವಶಕ್ಕೆ

POlice

Malpe: ಜೂಜಾಟ; 12 ಮಂದಿ ಅಂದರ್‌; ಪ್ರಕರಣ ದಾಖಲು

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.