18 ಸಾವಿರ ಭಕ್ತರಿಗೆ ಶೇಷವಸ್ತ್ರ ವಿತರಣೆ
ಕಟೀಲಿನಲ್ಲಿ ಸಂಭ್ರಮದ ಲಲಿತಾ ಪಂಚಮಿ
Team Udayavani, Oct 4, 2019, 4:40 AM IST
ಕಟೀಲು ದೇವಸ್ಥಾನದಲ್ಲಿ ಲಲಿತಾ ಪಂಚಮಿ ಅಂಗವಾಗಿ ಶ್ರೀ ದೇವರ ಶೇಷವಸ್ತ್ರ ವಿತರಿಸಲಾಯಿತು.
ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ಗುರುವಾರ ಲಲಿತಾ ಪಂಚಮಿಯ ಆರಾಧನೆ ನಡೆದಿದ್ದು, ಸುಮಾರು 18 ಸಾವಿರ ಮಹಿಳೆಯರಿಗೆ ಶ್ರೀ ದೇವರ ಶೇಷ ವಸ್ತ್ರದ ವಿತರಣೆ ಮಾಡಲಾಯಿತು.
ಅನ್ನಪ್ರಸಾದ ಹಾಗೂ ಶೇಷವಸ್ತ್ರ ಪಡೆಯಲು ಸಮರ್ಪಕ ಸರದಿಸಾಲಿನ ವ್ಯವಸ್ಥೆ ಮಾಡಲಾಗಿತ್ತು. ಬಸ್ ನಿಲ್ದಾಣ ಪರಿಸರ, ಕುದುರು ಪ್ರದೇಶ ಹಾಗೂ ಸೇತುವೆಯ ಮೇಲೆ ಪ್ರತ್ಯೇಕ ಸಾಲುಗಳಿದ್ದವು. ದೇವರ ದರ್ಶನ ಹಾಗೂ ಅನ್ನಪ್ರಸಾದ ವಿತರಣೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು.
ಭದ್ರತಾ ವ್ಯವಸ್ಥೆಗೆ 100 ಪೊಲೀಸರನ್ನು ನಿಯೋಜಿಸಲಾಗಿತ್ತು. ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕ ವೃಂದದ 300 ಮಂದಿ ಸ್ವಯಂ ಸೇವಕರಿದ್ದರು. 30 ಸಾವಿರಕ್ಕೂ ಹೆಚ್ಚು ಮಂದಿಗೆ ಅನ್ನಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರು ಗುತ್ತು, ಮೊಕ್ತೇಸರ ವಾಸುದೇವ ಆಸ್ರಣ್ಣ, ಲಕ್ಷ್ಮೀನಾರಾಯಣ ಆಸ್ರಣ್ಣ, ಅನಂತ ಪದ್ಮನಾಭ ಆಸ್ರಣ್ಣ, ಅರ್ಚಕ ಹರಿನಾರಾಯಣದಾಸ ಆಸ್ರಣ್ಣ , ಸುಧೀರ್ ಶೆಟ್ಟಿ ಕೊಡೆತ್ತೂರು ಗುತ್ತು, ಬಿಪಿನ್ ಚಂದ್ರ ಶೆಟ್ಟಿ, ದೇವಸ್ಥಾನದ ಪ್ರಬಂಧಕ ತಾರಾನಾಥ ಶೆಟ್ಟಿ, ಭೋಜನ ಶಾಲೆಯ ವ್ಯವಸ್ಥಾಪಕ ರಘುನಾಥ ಶೆಟ್ಟಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navratri Special: ರಕ್ಕಸಿ ಹಿಡಿಂಬೆಯ ನಿಷ್ಕಲ್ಮಶ ಪ್ರೀತಿಗೆ ಯಾವ ಹೆಸರು ಕೊಡಲಿ
Navratri Special: ತಾಯ್ತನದ ಭಾವ ಎನ್ನುವುದು ಹೆಣ್ಣಿಗೆ ಮಾತ್ರ ಸೀಮಿತವೇ?
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?
Navaratri Special: ನಮ್ಮೊಳಗಿನ ರಾವಣನ ಸುಡುವುದೆಂತು…?
MUST WATCH
ಹೊಸ ಸೇರ್ಪಡೆ
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.