ಪ್ರಯೋಗ, ಅನುಭವ ವಿನಿಮಯದಿಂದ ಕೃಷಿಗೆ ಭವಿಷ್ಯ
Team Udayavani, Dec 1, 2017, 7:34 AM IST
ಮೂಡಬಿದಿರೆ: “ಕೃಷಿಯಲ್ಲಿ ಪ್ರಯೋಗಾತ್ಮಕ ಚಿಂತನೆಗಳನ್ನು ಅಳವಡಿಸಿಕೊಳ್ಳುವ ಜತೆಗೆ ಅನುಭವ ವಿನಿಮಯ ಮಾಡಿ ಕೊಂಡಾಗ ಮಾತ್ರ ಕೃಷಿ ರಂಗ ಬೆಳಗಲು ಸಾಧ್ಯ’ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ಅಭಿಪ್ರಾಯಪಟ್ಟರು.
ಮೂಡಬಿದಿರೆ ವಿದ್ಯಾಗಿರಿಯಲ್ಲಿ 14ನೇ ವರ್ಷದ “ಆಳ್ವಾಸ್ ನುಡಿಸಿರಿ’ ನಾಡುನುಡಿ ಸಂಸ್ಕೃತಿ ಸಮ್ಮೇಳನದಂಗವಾಗಿ, ಮುಂಡ್ರುದೆ ಗುತ್ತು ರಾಮಮೋಹನ ರೈ ಆವರಣದಲ್ಲಿ ಸಜ್ಜುಗೊಂಡ ಆಳ್ವಾಸ್ ಕೃಷಿ ಸಿರಿ-2017ರ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಪಂಚದೀವಟಿಗೆಗಳನ್ನು ಬೆಳಗಿಸಿದ ಅವರು ಮಾತನಾಡಿದರು.
ಶಾಸಕ, ಮಾಜಿ ಸಚಿವ ಅಭಯಚಂದ್ರ ಅವರು ತೆಂಗು ಹೂವನ್ನು ಅರಳಿಸಿ ಕೃಷಿಸಿರಿಗೆ ಸಾಂಪ್ರದಾಯಿಕವಾಗಿ ಚಾಲನೆ ನೀಡಿದರು.
ಸೂಕ್ತ ಪರಿಹಾರ ಕಂಡುಕೊಳ್ಳಬೇಕು
“ಹಿಂದಿನ ಹಾಗೂ ಇಂದಿನ ಕೃಷಿ ವ್ಯವಸ್ಥೆ ಯಲ್ಲಿ ಅಜಗಜಾಂತರವಿದೆ. ಕೃಷಿಯಲ್ಲಿ ಲಾಭವೂ ಇದೆ, ನಷ್ಟವೂ ಇದೆ. ಎಷ್ಟೋ ಸಲ ನಾವು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗದೆ ತೀವ್ರ ನಷ್ಟವನ್ನು ಅನುಭವಿಸುವಂತಾಗುತ್ತದೆ. ಇದಕ್ಕೆ ಸೂಕ್ತ ಪರಿಹಾರವನ್ನು ಕಂಡುಕೊಳ್ಳಬೇಕಾಗಿದೆ’ ಎಂದು ಅಭಯಚಂದ್ರ ಹೇಳಿದರು.
ಲಕ್ಷಾಂತರ ರೈತರ ಆತ್ಮಹತ್ಯೆ
ಮುಖ್ಯಅತಿಥಿ, ಕೃಷಿ ಬೆಲೆ ಆಯೋಗದ ಅಧ್ಯಕ್ಷ ಪ್ರಕಾಶ್ ಕಮ್ಮರಡಿ ಕೃಷಿ ಕ್ಷೇತ್ರ ಎದು ರಿಸುತ್ತಿರುವ ಬಿಕ್ಕಟ್ಟುಗಳನ್ನು ವಿಶ್ಲೇಷಿಸಿದರು. “ಕಳೆದ 10 ವರ್ಷಗಳಲ್ಲಿ ಲಕ್ಷಾಂತರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಿಕ್ಕಟ್ಟಿನ ಬಗ್ಗೆ ಸೂಕ್ತ ಸಂಶೋಧನೆಗಳಾಗಬೇಕಿದೆ. ನಮ್ಮ ರೈತಾಪಿ ವರ್ಗದಲ್ಲಿರುವ ಭರ ವಸೆಯ ಕೊರತೆ ನೀಗ ಬೇಕಾಗಿದೆ. ಇಂದು ಸರಕಾರ ರೈತರ ಆದಾಯವನ್ನು ದ್ವಿಗುಣಗೊಳಿಸು ತ್ತೇವೆಂದರೂ ರೈತರು ಅದರಿಂದ ಉತ್ತೇಜಿತರಾಗಿಲ್ಲ’ ಎಂದು ಪ್ರಕಾಶ್ ಕಮ್ಮರಡಿ ಅವರು ವಿಷಾದಿಸಿದರು.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಪ್ರಸ್ತಾವನೆಗೈದರು.
ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ, ಸಂಸ್ಥೆಯ ಟ್ರಸ್ಟಿ ಜಯಶ್ರೀ ಅಮರನಾಥ ಶೆಟ್ಟಿ, ಕಸಾಪ ರಾಜ್ಯ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯದ ಡೀನ್ ಡಾ| ವೇಣು ಗೋಪಾಲ್, ಪಶುಸಂಗೋಪನಾ ಇಲಾಖೆಯ ಡಾ| ಆನಂದ, ಮೂಡಬಿದಿರೆಯ ಕೃಷಿ ವಿಚಾರ ವಿನಿಮಯ ಕೇಂದ್ರದ ಅಧ್ಯಕ್ಷ ರಾಜವರ್ಮ ಬೈಲಂಗಡಿ, ದಕ್ಷಿಣ ಕನ್ನಡ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಶಿರ್ತಾಡಿ ಸಂಪತ್ ಸಾಮ್ರಾಜ್ಯ, ಕರ್ನಾಟಕ ರಾಜ್ಯ ರೈತ ಸಂಘದ ವಲಯಾಧ್ಯಕ್ಷ ಧನಕೀರ್ತಿ ಬಲಿಪ ಉಪಸ್ಥಿತರಿದ್ದರು.
ಬೆಂಬಲ ಬೆಲೆಗೆ ಕಾನೂನಿನ ಚೌಕಟ್ಟು ಇಲ್ಲ ?
ರೈತರ ಹಿತರಕ್ಷಣೆಗಾಗಿ ಸರಕಾರ ಬೆಂಬಲ ನೀಡುತ್ತದೆ. ಆದರೆ ಈ ಬೆಂಬಲ ಬೆಲೆಗೆ ಕಾನೂನಿನ ಯಾವುದೇ ಚೌಕಟ್ಟಿಲ್ಲ. ಇದೇ ಪರಿಸ್ಥಿತಿ ಮುಂದು ವರಿದರೆ ರೈತರು ಭವಿಷ್ಯದಲ್ಲಿ ಕೃಷಿ ಯನ್ನು ಕೈಬಿಡುವ ಅಪಾಯ ಕಾದಿದೆ.
ಪ್ರಕಾಶ್ ಕಮ್ಮರಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train: ಮುರುಡೇಶ್ವರ ಎಕ್ಸ್‌ಪ್ರೆಸ್ ಸಮಯ ಬದಲಾವಣೆ ಬೇಡ
Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.