Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌


Team Udayavani, Apr 26, 2024, 12:16 AM IST

1-asasas

ಬೆಳ್ತಂಗಡಿ: ಲೋಕಸಭಾ ಚುನಾವಣೆ ಪೂರ್ವಸಿದ್ಧತೆ ವೀಕ್ಷಿ ಸುವ ಸಲುವಾಗಿ ಗುರುವಾರ ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ರುವ ಎಸ್‌ಡಿಎಂ ಪ.ಪೂ. ಕಾಲೇಜಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.

ಪೋಸ್ಟಲ್‌ ಮತದಾನದ ಬಗ್ಗೆ ವಿಚಾರಣೆ ನಡೆಸಿ ಸಮಗ್ರ ಮಾಹಿತಿ ಪಡೆದರು. ಬಳಿಕ ಮಸ್ಟರಿಂಗ್‌ ಸಿದ್ಧತಾ ಕೊಠಡಿ, ಸ್ಟ್ರಾಂಗ್‌ ರೂಮ್‌ ಪರಿಶೀಲಿ ಸಿದರು. ಮೊದಲ ಬಾರಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬಂದಿಯ ಮಾಹಿತಿ ಪಡೆದರು. ಎಳನೀರು ಗುತ್ಯಡ್ಕ ಮತಗಟ್ಟೆ ಸಿಬಂದಿ ಜತೆಗೆ ಮಾತುಕತೆ ನಡೆಸಿ, ಅಲ್ಲಿನ ಗುಡ್ಡಗಾಡು ಪ್ರದೇಶದ ಬಗ್ಗೆ ಎಚ್ಚರಿಕೆ ವಹಿಸಿ, ಆರೋಗ್ಯ ವಿಚಾರವಾಗಿ ಸೂಕ್ತ ಔಷಧದ ಜತೆಗೆ ತೆರಳುವಂತೆ ಸಲಹೆ ನೀಡಿದರು.

ಬಳಿಕ ಮಾಧ್ಯಮದೊಂದಿಗೆ ಮಾತ ನಾಡಿದ ಅವರು, ದ.ಕ. ಜಿಲ್ಲೆಯಲ್ಲಿ ಮತದಾನ ಸುಸೂತ್ರವಾಗಿ ನಡೆಸುವ ಸಲುವಾಗಿ ಬೆಳ್ತಂಗಡಿ ತಾಲೂಕಿನ 200ನೇ ವಿಧಾನ ಸಭಾ ಕ್ಷೇತ್ರದಿಂದ ಪೂರ್ವತಯಾರಿ ಪರಿಶೀಲಿಸಿದ್ದೇನೆ. ಇಲ್ಲಿ 241 ಮತಗಟ್ಟೆಗಳಿದ್ದು ಪ್ರಮುಖವಾಗಿ ನಕ್ಸಲ್‌ ಭೀತಿಯುಳ್ಳ ಮತಗಟ್ಟೆ ಸಹಿತ ತೀರಾ ಹಳ್ಳಿಗಾಡು ಪ್ರದೇಶವಾದ ಬಾಂಜಾರು ಮಲೆ ಎಳನೀರು ಪ್ರದೇಶಗಳ ಮತಗಟ್ಟೆ ಕೇಂದ್ರಗಳಿಗೆ ಪ್ರತ್ಯೇಕ ಸೆಕ್ಟರ್‌ ಅಧಿಕಾರಿ ಸಹಿತ ಬಂದೋಬಸ್ತ್ಗೆ ನಿಯೋಜಿಸಲಾಗಿದೆ. ಮಹಿಳಾ ಮತದಾರರು ಹೆಚ್ಚಿರುವ ಕ್ಷೇತ್ರ ವಾಗಿರುವುದರಿಂದ ವಿಶೇಷ ಮುತು ವರ್ಜಿ ವಹಿಸಿ ಸವಲತ್ತು ಸಹಿತ ಸಖೀ ಮತಗಟ್ಟೆ ರಚಿಸಲಾಗಿದೆ ಎಂದರು.

ಸಹಾಯಕ ಚುನಾವಣಾಧಿಕಾರಿ ಕೆಂಪೇಗೌಡ ಎಚ್‌., ತಹಶೀಲ್ದಾರ್‌ ಪೃಥ್ವಿ ಸಾನಿಕಮ್‌, ಎಆರ್‌ಇಒ ಸಹಾಯಕ ಸುಭಾಷ್‌ ಜಾದವ್‌, ಮಾಸ್ಟರ್‌ ಟ್ರೇನರ್‌ಗಳಾದ ಧರಣೇಂದ್ರ ಜೈನ್‌, ಮಹೇಶ್‌ ಬೆಳಾಲು, ಅಜಿತ್‌ ಕೊಕ್ರಾಡಿ ಜತೆಗಿದ್ದರು.

ಮಜ್ಜಿಗೆ ಸವಿದ ಡಿಸಿ
ಬೆಳ್ತಂಗಡಿ ತಾಲೂಕಿನಲ್ಲಿ ನಿಯೋಜಿತ ಸಿಬಂದಿಗೆ ಪ್ರತೀ ಬಾರಿ ಆಹಾರದಲ್ಲಿ ಕೊರತೆ ಅನುಭವಿಸುತ್ತಿರುವ ಕುರಿತು ಸಿಬಂದಿ ಅಸಮಧಾನ ಹೊರಹಾಕುತ್ತಿದ್ದರು. ಕಳೆದ ವಾರ ನಡೆದ ತರಬೇತಿ ಅವಧಿಯಲ್ಲಿ ಈ ವಿಚಾರ ಗಂಭೀರ ಸ್ವರೂಪ ಪಡೆದಿತ್ತು. ಈ ಕುರಿತು ಉದಯವಾಣಿ ಗಮನ ಚೆಲ್ಲಿದ್ದರಿಂದ ಜಿಲ್ಲಾಧಿಕಾರಿಗಳ ಗಮನಕ್ಕೂ ತಲುಪಿತ್ತು. ಈ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಭೋಜನದ ವ್ಯವಸ್ಥೆ ಕುರಿತು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಮಜ್ಜಿಗೆ ಸವಿದು ಆಹಾರ ಗುಣಮಟ್ಟ ಪರಿಶೀಲಸಿದರು.

ಟಾಪ್ ನ್ಯೂಸ್

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

11

Puttur: ಎರಡು ಕಡೆ ಚಿನ್ನಾಭರಣ ಕಳವು; ಮೂವರ ಸೆರೆ

10

Sullia: ಬಸ್‌ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್‌, ಶೂ ಕಳವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

1

Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.