ರಾಹುಲ್ಗಾಂಧಿ ಪಿಎ ಹೆಸರಿನಲ್ಲಿ ನಕಲಿ ವ್ಯಕ್ತಿ ಕರೆ: ಶಾಸಕ ಯು.ಟಿ ಖಾದರ್ ದೂರು
Team Udayavani, Jan 2, 2023, 9:48 PM IST
ಮಂಗಳೂರು : ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಪಿಎ ಹೆಸರಿನಲ್ಲಿ ನಕಲಿ ವ್ಯಕ್ತಿಯೋರ್ವ ಮೊಬೈಲ್ ಕರೆ ಮತ್ತು ಸಂದೇಶ ಕಳುಹಿಸಿರುವ ಬಗ್ಗೆ ಶಾಸಕ ಯು.ಟಿ.ಖಾದರ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಜ.2ರಂದು ಮಧ್ಯಾಹ್ನ 1.33ರ ವೇಳೆಗೆ +8146006626 ಮೊಬೈಲ್ ಸಂಖ್ಯೆಯಿಂದ ಎರಡು ಬಾರಿ ಕರೆ ಬಂದಿತ್ತು. ಸಭೆಯೊಂದರಲ್ಲಿ ಭಾಗವಹಿಸಿದ್ದರಿಂದ ಕರೆ ಸ್ವೀಕರಿಸಿರಲಿಲ್ಲ. ಸಭೆ ಮುಗಿಸಿ ಮೊಬೈಲ್ ನೋಡುವಾಗ ಸಂದೇಶವೊಂದು ಬಂದಿತ್ತು. ಆದರಲ್ಲಿ “ಕಾನಿಷ್ಕಾ ಸಿಂಗ್, ರಾಹುಲ್ ಗಾಂಧಿ ಪಿಎ ಕರೆ ಮಾಡಿ’ ಎಂಬುದಾಗಿ ಇತ್ತು. ಟ್ರೂ ಕಾಲರ್ ಮೂಲಕ ಪರಿಶೀಲಿಸಿದಾಗ ಆ ಮೊಬೈಲ್ ಸಂಖ್ಯೆಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹೆಸರಿನಲ್ಲಿ ಸೇವ್ ಮಾಡಿರುವುದು ತಿಳಿಯಿತು. ಈ ಬಗ್ಗೆ ಮಾಹಿತಿ ಕಲೆ ಹಾಕಿದಾಗ ಇದು ನಕಲಿ ವ್ಯಕ್ತಿಯ ಹೆಸರಿನಲ್ಲಿ ಬಂದ ಕರೆ ಎಂಬುದು ಮನವರಿಕೆಯಾಗಿದೆ.
ಹಾಗಾಗಿ ಕರೆ ಮಾಡಿದವರು ಯಾರು ಮತ್ತು ಯಾಕಾಗಿ ಎಂಬ ಬಗ್ಗೆ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಯು.ಟಿ.ಖಾದರ್ ಅವರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದು ನಗರದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಉಡುಪಿ: ಬಹುಕೋಟಿ ವಂಚನೆ ಪ್ರಕರಣ… ಆರೋಪಿ 5 ದಿನ ಪೊಲೀಸ್ ಕಸ್ಟಡಿಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.