ಫಾ| ಮಾಡ್ತ ಅವರಿಗೆ “ಕೊಂಕಣಿ ಕುಟಮ್ ಸಾಹಿತ್ಯ ಪ್ರಶಸ್ತಿ’
Team Udayavani, Jul 6, 2018, 9:46 AM IST
ಮಂಗಳೂರು: ಕೊಂಕಣಿ ಕುಟಮ್ ಬಹ್ರೈನ್ ನೀಡುವ 2018ನೇ ಸಾಲಿನ “ಕೊಂಕಣಿ ಕುಟಮ್ ಬಹ್ರೈನ್ ಪ್ರಶಸ್ತಿ’ಗೆ ನಿಘಂಟು ರಚನಾಕಾರ, ಶಿಕ್ಷಣ ತಜ್ಞ ಫಾ| ಪ್ರಶಾಂತ್ ಮಾಡ್ತ ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆಯ ಸಂಚಾಲಕ ರಿಚರ್ಡ್ ಮೊರಾಸ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಜು. 28ರಂದು ಸಂಜೆ 6.30ಕ್ಕೆ ಬೆಂದೂರ್ ಸೈಂಟ್ ಸೆಬಾಸ್ಟಿಯನ್ ಪ್ಲಾಟಿನಂ ಜುಬಿಲಿ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಸಾಹಿತಿ ಜಯಂತ ಕಾಯ್ಕಿಣಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕೊಂಕಣಿ ಕವಿ ಮೆಲ್ವಿನ್ ರೋಡ್ರಿಗಸ್ ಅತಿಥಿಗಳಾಗಿ ಭಾಗವಹಿಸುವರು. ಪ್ರಶಸ್ತಿ 50,000 ರೂ. ನಗದು ಒಳಗೊಂಡಿದೆ ಎಂದರು.
ಮೂಲತಃ ಸುಳ್ಯದವರಾದ ಪ್ರಶಾಂತ್ ಮಾಡ್ತ ಯೇಸು ಸಭೆಯ ಧರ್ಮಗುರುವಾಗಿದ್ದಾರೆ. ಕನ್ನಡ ಪ್ರಾಧ್ಯಾಪಕ, ಸಂತ ಅಲೋಶಿಯಸ್ ಕಾಲೇಜಿನ ಮಾಜಿ ಪ್ರಾಂಶುಪಾಲರು. ಪ್ರಸ್ತುತ ಬೆಂಗಳೂರಿನ ಸೈಂಟ್ ಜೋಸೆಫ್ಸ್ ಕಾಲೇಜ್ ಆಫ್ ಕಾಮರ್ಸ್ ಆಡಳಿತಾಧಿಕಾರಿಯಾಗಿದ್ದಾರೆ. ಕೊಂಕಣಿ ಪಿಕೊಳಿಂ (ಹತ್ತು ಸಾವಿರ ಪಡೆನುಡಿಗಳ ಕೋಶ), ಪದನಿ (ಕನ್ನಡದ ಸಮಾನಾರ್ಥಕ, ವಿರುದ್ಧಾರ್ಥಕ ಥೆಸಾರಸ್) ಹಾಗೂ ಕೊಂಕಣಿ ಥೆಸಾರ್ (ಸಮಾನಾರ್ಥಕ ಪದಕೋಶ) ಪ್ರಕಟಿಸಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಸಂಘಟಕ ಟೈಟಸ್ ನೊರೋನ್ಹಾ, ಕಾರ್ಯಕಾರಿ ಸಮಿತಿ ಸದಸ್ಯರಾದ ಸ್ಟಾನಿ ಲೋಬೋ, ಸಿರಿಲ್ ಜಿ. ಸಿಕ್ವೇರ, ವಿಕ್ಟರ್ ಮಥಾಯಸ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.