ಬೆಳೆ, ಉತ್ಪನ್ನಗಳ ಮಾರುಕಟ್ಟೆಗೆ ‘ಹಳ್ಳಿ ಸಂತೆ ಕಟ್ಟೆ’
ಗ್ರಾಮೀಣ ರೈತರಿಗೆ ಆಶಾದಾಯಕ
Team Udayavani, May 4, 2019, 5:50 AM IST
ಪುತ್ತೂರು: ಗ್ರಾಮಾಂತರದ ಹಳ್ಳಿಗಳಲ್ಲಿ ತರಕಾರಿಗಳು ಹಾಗೂ ಇತರ ಉತ್ಪನ್ನಗಳಿಗೆ ಸೂಕ್ತ ಹಾಗೂ ಸಮರ್ಪಕ ಮಾರುಕಟ್ಟೆ ಕಲ್ಪಿಸುವ ನಿಟ್ಟಿನಲ್ಲಿ ದ.ಕ. ಜಿ.ಪಂ. ಹಳ್ಳಿ ಸಂತೆ ಕಟ್ಟೆಗಳನ್ನು ಆರಂಭಿಸಲು ಮುಂದಾಗಿದೆ.
ಗ್ರಾಮದ ಜನರು ಹೆಚ್ಚು ಸೇರುವ ಸ್ಥಳವನ್ನು ಆಯ್ಕೆ ಮಾಡಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಮೂಲಕ ಸಂತೆ ಕಟ್ಟೆಗಳನ್ನು ನಿರ್ಮಿಸುವುದು. ಅದರ ಮೇಲುಸ್ತುವಾರಿಯನ್ನು ಸ್ಥಳೀಯ ಗ್ರಾ.ಪಂ.ಗಳು ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಪ್ರತಿ ತಾಲೂಕು ವ್ಯಾಪ್ತಿಗಳಲ್ಲಿ 4-5 ಕಡೆಗಳಲ್ಲಿ ಹಳ್ಳಿ ಸಂತೆ ಕಟ್ಟೆಗಳನ್ನು ನಿರ್ಮಿಸಬೇಕು ಎಂದು ಜಿ.ಪಂ.ನಿಂದ ತಾ.ಪಂ. ಹಾಗೂ ಗ್ರಾ.ಪಂ.ಗಳಿಗೆ ಸೂಚನೆ ನೀಡಲಾಗಿದೆ.
ಉದ್ದೇಶವೇನು ?
ಸ್ವೋದ್ಯೋಗ ಮಾಡುವ ಕೃಷಿಕರು, ಸ್ವಸಹಾಯ ಸಂಘಗಳಿಗೆ ನೆರವಾಗುವ ಉದ್ದೇಶವನ್ನಿಟ್ಟುಕೊಂಡು ಹಳ್ಳಿ ಸಂತೆ ಕಟ್ಟೆ ಯೋಜನೆಯನ್ನು ಜಾರಿಗೊಳಿಸಲು ಜಿ.ಪಂ. ಮುಂದಾಗಿದೆ. ರೈತರು ತಾವು ಬೆಳೆದ ಬೆಳೆಗಳನ್ನು ತಾವೇ ಮಾರಾಟ ಮಾಡುವ ಮೂಲಕ ಉತ್ತಮ ಮಾರುಕಟ್ಟೆಯನ್ನು ಕಂಡುಕೊಳ್ಳಬೇಕು. ಸ್ವಸಹಾಯ ಸಂಘಗಳ ಮೂಲಕ ತಯಾರಿಸಿದ ವಿವಿಧ ರೀತಿಯ ಉತ್ಪನ್ನಗಳನ್ನು ಮಾರಾಟ ಮಾಡುವ ಜತೆಗೆ ಸ್ವೋದ್ಯೋಗಕ್ಕೆ ಪ್ರೋತ್ಸಾಹ ನೀಡುವ ಉದ್ದೇಶವನ್ನು ಹೊಂದಲಾಗಿದೆ.
ಸಮಸ್ಯೆಗಳಿಗೆ ಪರಿಹಾರ
ಹಾಲಿ ಹಳ್ಳಿಗಳಲ್ಲಿ ರೈತರು ಬೆಳೆದ ತರಕಾರಿ ಸಹಿತ ಇತರ ಬೆಳೆಗಳನ್ನು ಮಾರಾಟ ಮಾಡಲು ಸರಿಯಾದ ಮಾರುಕಟ್ಟೆ ಇಲ್ಲ. ಈ ಕಾರಣದಿಂದ ಬೆಳೆಗಳಿಗೆ ಸರಿಯಾದ ಬೆಲೆಯೂ ಸಿಗುತ್ತಿಲ್ಲ. ಹೆಚ್ಚಿನ ಸಂದರ್ಭಗಳಲ್ಲಿ ಮಧ್ಯವರ್ತಿಗಳನ್ನು ಆಶ್ರಯಿಸಬೇಕಾದ ಮತ್ತು ಅವರೇ ಲಾಭ ಮಾಡಿಕೊಳ್ಳುವ ಸ್ಥಿತಿ ಇದೆ. ಇದೇ ಸಮಸ್ಯೆ ಸ್ವಸಹಾಯ ಗುಂಪುಗಳಿಂದ ಸ್ವೋದ್ಯೋಗ ಪರಿಕಲ್ಪನೆಯಲ್ಲಿ ತಯಾರಿಸುವ ಉತ್ಪನ್ನಗಳಿಗೂ ಇದೆ. ಹಳ್ಳಿಗಳಲ್ಲೇ ಸಂತೆ ಕಟ್ಟೆ ರೂಪದಲ್ಲಿ ಮಾರಾಟದ ವ್ಯವಸ್ಥೆ ಆದರೆ ಇಂತಹ ಸಮಸ್ಯೆಗಳು ಪರಿಹಾರ ಕಾಣಬಹುದು.
ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಸೂಚನೆ
ಹಾಲಿ ಸರಕಾರದ ಕಡೆಯಿಂದ ಸಂತೆ ಮಾಡಿಕೊಳ್ಳುವವರಿಗೆ ಅವಕಾಶ ನೀಡಲಾಗುತ್ತಿದೆ. ಈ ಅವಕಾಶವನ್ನು ಬಳಸಿಕೊಂಡು ದ.ಕ. ಜಿ.ಪಂ. ಯೋಜನೆ ರೂಪಿಸಿದ್ದು, ಪ್ರತಿ ತಾಲೂಕುಗಳಿಗೆ ಸೂಚನೆ ನೀಡಲಾಗಿದೆ. ಕಡಬ ಹಾಗೂ ಸುಳ್ಯ ತಾಲೂಕಿನ ಸುಬ್ರಹ್ಮಣ್ಯ, ಬೆಳ್ಳಾರೆಗಳಲ್ಲಿ ಹಳ್ಳಿ ಸಂತೆ ಕಟ್ಟೆ ಮಾಡುವ ಪ್ರಕ್ರಿಯೆ ಜಾರಿಯಲ್ಲಿದೆ. ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ತಾಲೂಕಿನಲ್ಲಿ ಹಳ್ಳಿ ಸಂತೆ ಕಟ್ಟೆಗೆ ಸೂಕ್ತ ಜಾಗ ಹುಡುಕಲು ಸೂಚನೆ ನೀಡಲಾಗಿದೆ ಎಂದು ದ.ಕ. ಜಿ.ಪಂ. ಸಿಇಒ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ 20 ಹಳ್ಳಿ ಸಂತೆ ಗುರಿ
ಸ್ವೋದ್ಯೋಗ ಮಾಡಿಕೊಳ್ಳುವವರಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವ ದೃಷ್ಟಿಯಿಂದ ನರೇಗಾ ಯೋಜನೆಯಲ್ಲಿ ಹಳ್ಳಿ ಸಂತೆಕಟ್ಟೆ ನಿರ್ಮಿಸಲು ಅವಕಾಶ ಕಲ್ಪಿಸಲು ಸೂಚನೆ ನೀಡಲಾಗಿದೆ. ವರ್ಷದ ಅವಧಿಯಲ್ಲಿ ಜಿಲ್ಲೆಯಲ್ಲಿ ಸುಮಾರು 20 ಹಳ್ಳಿ ಸಂತೆ ಕಟ್ಟೆಗಳನ್ನು ರಚಿಸುವ ಗುರಿ ಇಟ್ಟುಕೊಳ್ಳಲಾಗಿದೆ.
– ಡಾ| ಸೆಲ್ವಮಣಿ ಆರ್. ಸಿಇಒ, ದ.ಕ. ಜಿ.ಪಂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.