![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 30, 2018, 5:05 PM IST
ಉಪ್ಪಿನಂಗಡಿ: ಇಲ್ಲಿನ ಕೂಡೇಲು ಬಳಿಯ ನೇತ್ರಾವತಿ ನದಿ ಕಿನಾರೆಯಲ್ಲಿರುವ ವಿಜಯ -ವಿಕ್ರಮ ಜೋಡುಕರೆಯಲ್ಲಿ ಫೆ.
24ರಂದು 33ನೇ ವರ್ಷದ ಹೊನಲು ಬೆಳಕಿನ ಕಂಬಳ ನಡೆಸಲು ನಿರ್ಧರಿಸಲಾಗಿದ್ದು, ಸಮಿತಿಗಳನ್ನು ರಚಿಸಲಾಗಿದೆ.
ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ವಿಜಯ-ವಿಕ್ರಮ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ರೈ ಕೋಡಿಂಬಾಡಿ, ವಾರದೊಳಗೆ ಕರೆ ನಿರ್ಮಾಣ ಕಾರ್ಯ ಪೂರ್ಣಗೊಳಿಸಿ, ಕುದಿ ಓಡಿಸಲು ಕಂಬಳದ ಕೋಣಗಳಿಗೆ ಅನುವು ಮಾಡಿ ಕೊಡಬೇಕು. ಕಂಬಳ ಆರಂಭಕ್ಕೆ ಮೊದಲು ಉಪ್ಪಿನಂಗಡಿಯ ಶ್ರೀ ಸಹಸ್ರ ಲಿಂಗೇಶ್ವರ – ಮಹಾಕಾಳಿ ದೇವಾಲಯದ ವಠಾರದಿಂದ ಕಂಬಳದ ಕರೆಗೆ ಕಲ್ಕಡ್ಕದ ಗೊಂಬೆ ಕುಣಿತ, ಕೀಲು ಕುದುರೆ ಹಾಗೂ ಬ್ಯಾಂಡ್ ವಾದ್ಯಗಳೊಂದಿಗೆ ಕಂಬಳದ ಕೋಣಗಳನ್ನು ಮೆರವಣಿಗೆಯಲ್ಲಿ ಕರೆ ತರಬೇಕು. ಈ ಬಾರಿ 150 ಜೊತೆ ಕೋಣಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದರು.
ವಿಜಯ- ವಿಕ್ರಮ ಜೋಡುಕರೆ ಕಂಬಳ ಸಮಿತಿಯ ಗೌರವಾಧ್ಯಕ್ಷ ಉಮೇಶ್ ಶೆಣೈ ನಂದಾವರ, ಪ್ರಧಾನ ಕಾರ್ಯದರ್ಶಿ ಬೆಳ್ಳಿಪ್ಪಾಡಿ ಕೈಪ ಕೇಶವ ಭಂಡಾರಿ, ಕೋಶಾಧಿಕಾರಿ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಕಾರ್ಯದರ್ಶಿ ಚಂದ್ರಶೇಖರ ಮಡಿವಾಳ, ಉಪಾಧ್ಯಕ್ಷರಾದ ವಿಠಲ ಶೆಟ್ಟಿ ಕೊಲ್ಲೊಟ್ಟು, ರಾಮಚಂದ್ರ ಮಣಿಯಾಣಿ, ನಿರಂಜನ್ ರೈ ಮಠಂತಬೆಟ್ಟು, ಹರಿಶ್ಚಂದ್ರ ಇಳಂತಿಲ, ನ್ಯಾಯವಾದಿ ಅನಿಲ್ ಕುಮಾರ್ ಉಪ್ಪಿನಂಗಡಿ, ವಾರಿಸೇನ ಜೈನ್, ಕೃಷ್ಣ ಪ್ರಸಾದ್ ಬೊಳ್ಳಾವು, ದಿಲೀಪ್ ಕರಾಯ, ಗಂಗಾಧರ ರೈ ಮಠಂತಬೆಟ್ಟು, ಕೇಶವ ರಂಗಾಜೆ, ಮುನೀರ್ ದಾವೂದ್, ಆದರ್ಶ ಶೆಟ್ಟಿ ಕಜೆಕ್ಕಾರ್, ಶ್ರೀನಿವಾಸ ಬೊಳ್ಳಾವು, ಕಿರಣ್ ಗೌಂಡತ್ತಿಗೆ, ಮೋಹನ್ ಪಕಳ, ರೋಹನ್ ಮೊಂತೇರೋ ಮಾತನಾಡಿ ಸಲಹೆ- ಸೂಚನೆ ನೀಡಿದರು.
ಒಂದು ಲಕ್ಷ ಜನ ಸೇರುವ ನಿರೀಕ್ಷೆ
ಕಂಬಳ ಕೋಣಗಳಿಗೂ ವಿಶ್ರಾಂತಿಗೆ ವ್ಯವಸ್ಥೆ ಮಾಡಬೇಕು. ಒಂದು ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, ಎಲ್ಲರೂ ಸುಲಲಿತವಾಗಿ ಕಂಬಳ ವೀಕ್ಷಣೆಗೆ ಆಸನ ವ್ಯವಸ್ಥೆ ಮಾಡಬೇಕು ಎಂದು ಅಶೋಕ್ ಕುಮಾರ್ ರೈ ಹೇಳಿದರು.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.