ಫೆ. 25ರ ಹರತಾಳಕ್ಕೆ ಜಿಲ್ಲಾ ಬಿಜೆಪಿ ಬೆಂಬಲ


Team Udayavani, Feb 23, 2017, 2:51 PM IST

bjp.jpg

ಮಂಗಳೂರು: ಕಳೆದ ಹಲವು ದಶಕದಿಂದ ನೆರೆಯ ಕೇರಳದಲ್ಲಿ ಸಂಘ ಪರಿವಾರ ಕಾರ್ಯಕರ್ತರ ಮೇಲೆ ನಿರಂತರ ಆಕ್ರಮಣಗಳ ಮೂಲಕ ನೂರಾರು ರಾಜಕೀಯ ಪ್ರೇರಿತ ಕೊಲೆ ಹಾಗೂ ಜನರನ್ನು ಹತ್ತಿಕ್ಕುವಂತಹ ರಾಜಕೀಯ ಮಾಡುತ್ತಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಮಂಗಳೂರು ಕಾರ್ಯಕ್ರಮದಲ್ಲಿ ಭಾಗವಹಿಸುವುದನ್ನು ವಿರೋಧಿಸಿ ಸಂಘ ಪರಿವಾರ ಫೆ. 25ಕ್ಕೆ ಕರೆ ನೀಡಿರುವ ದ.ಕ. ಜಿಲ್ಲಾ ಹರತಾಳಕ್ಕೆ ಜಿಲ್ಲಾ ಬಿಜೆಪಿ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ತಿಳಿಸಿದ್ದಾರೆ.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇರಳದಲ್ಲಿ 2016ರಲ್ಲಿ ಅಸ್ತಿತ್ವಕ್ಕೆ ಬಂದ ಸಿಪಿಎಂ ಹತ್ತಾರು ಹಿಂದೂ ಕಾರ್ಯಕರ್ತರನ್ನು, ಬಿಜೆಪಿ ಪ್ರಮುಖರನ್ನು ಹತ್ಯೆ ಮಾಡುವ ಮೂಲಕ ಅತ್ಯಂತ ಕೆಟ್ಟ ರಾಜಕೀಯವನ್ನು ನಡೆಸುತ್ತಿದೆ. ಆದರೆ ದ.ಕ. ಜಿಲ್ಲೆ ರಾಜಕೀಯ ಸಹಬಾಳ್ವೆಯ ಜಿಲ್ಲೆಯಾಗಿದೆ. ಇಲ್ಲಿ ಎಲ್ಲ ಪಕ್ಷದವರು ಅತ್ಯಂತ ಪ್ರೀತಿಯ ಒಡನಾಟದಿಂದ ಬದುಕುತ್ತಿದ್ದಾರೆ. ಸಹಬಾಳ್ವೆ ಇಲ್ಲಿದೆ. ಹೀಗಾಗಿ ಇಂತಹ ಸ್ಥಳಕ್ಕೆ ಕೆಟ್ಟ ರಾಜಕೀಯ ನೀತಿಗಳನ್ನು ಅನುಸರಿಸುವ ಕೇರಳ ಮುಖ್ಯಮಂತ್ರಿ ಬಂದು ರ್ಯಾಲಿಯಲ್ಲಿ ಭಾಗವಹಿಸುವುದು ಸರಿಯಲ್ಲ. ಹೀಗಾಗಿ ಬಿಜೆಪಿ ಅವರ ಭೇಟಿಗೆ ವಿರೋಧಿಸುತ್ತದೆ ಎಂದರು.

ಪಿಣರಾಯಿ ಪಾಠ ಅನಗತ್ಯ
ಕರಾವಳಿಯಲ್ಲಿ ಎಲ್ಲ ಕೋಮಿನ ಜನರು ಅತ್ಯುತ್ತಮವಾಗಿ ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಯಾವುದೇ ಕೋಮು ವಿರೋಧಿ ಚಟುವಟಿಕೆಗಳು ಇಲ್ಲಿ ನಡೆದಿಲ್ಲ. ಆದರೂ ಇದೀಗ ಕೋಮು ಸೌಹಾರ್ದ ಎಂಬ ಹೆಸರಿನಲ್ಲಿ ಮಂಗಳೂರಿನಲ್ಲಿ ರ್ಯಾಲಿ ನಡೆಸುವ ಔಚಿತ್ಯವಾದರೂ ಏನು ಎಂದು ಪ್ರಶ್ನಿಸಿದ ಮಠಂದೂರು ಅವರು, ಕೆಟ್ಟ ರಾಜಕೀಯ ನಡೆಸುತ್ತಿರುವ ಪಿಣರಾಯಿ ಅವರು ಇಲ್ಲಿಗೆ ಬಂದು ಸೌಹಾರ್ದತೆಯ ಪಾಠ ಹೇಳುವ ಅಗತ್ಯವಿಲ್ಲ ಎಂದರು.

ಫೆ. 24ರಂದು ಬೆಳಗ್ಗೆ 10ಕ್ಕೆ ಮಂಗಳೂರಿನ ಅಂಬೇಡ್ಕರ್‌ ಸರ್ಕಲ್‌ನಿಂದ ಬೃಹತ್‌ ರ್ಯಾಲಿ ವಿಎಚ್‌ಪಿ/ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಕೇಂದ್ರ ಮೈದಾನಕ್ಕೆ ತೆರಳಲಿದೆ. ಅದಕ್ಕೂ ಬಿಜೆಪಿ ಪೂರ್ಣ ಬೆಂಬಲ ನೀಡಲಿದೆ. ಹಾಗೂ ಜಿಲ್ಲೆಯ ಮೂಲೆ ಮೂಲೆಗಳಿಂದ ಬಿಜೆಪಿ ಕಾರ್ಯಕರ್ತರು ಇದರಲ್ಲಿ ಭಾಗವಹಿಸಲಿದ್ದಾರೆ. ಫೆ. 25ರಂದು ಹರತಾಳ ನಡೆಯಲಿದೆ. ಅಮಾಯಕ ಮಹಿಳೆಯರನ್ನು ಸಮಾವೇಶಕ್ಕೆ ಕರೆತರುವ ತಂತ್ರಗಾರಿಕೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಮ್ಮ ಕಾರ್ಯಕರ್ತರು ಅರಿವು ಮೂಡಿಸುವ ಪ್ರಯತ್ನ ನಡೆಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಪ್ರಮುಖರಾದ ಎನ್‌. ಯೋಗೀಶ್‌ ಭಟ್‌, ಮೋನಪ್ಪ ಭಂಡಾರಿ, ಜಿತೇಂದ್ರ ಕೊಟ್ಟಾರಿ, ಬೃಜೇಶ್‌ ಚೌಟ, ಕಿಶೋರ್‌ ರೈ, ಭಾಸ್ಕರಚಂದ್ರ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Shrigeri-Mutt

Suvarna Bharathi Mahotsava: ಶೃಂಗೇರಿಯಲ್ಲಿ ದಾಖಲೆ ಬರೆದ ತ್ರಿವೇಣಿ ಸ್ತೋತ್ರ ಪಠಣ

1-tunel

ನಾಳೆ ಕಾಶ್ಮೀರದ ಸೋನಾ ಮಾರ್ಗ್‌ ಸುರಂಗ ಉದ್ಘಾಟನೆ

Basanagowda-Yatnal

ರಾಜ್ಯದಲ್ಲಿ ಹೊಂದಾಣಿಕೆ ರಾಜಕೀಯ ಮಾಡಿಕೊಳ್ಳದ 4-5 ಜನರೇ ಟಾರ್ಗೆಟ್: ಯತ್ನಾಳ್

BBK11: ಮಾನಸಿಕವಾಗಿ ತುಂಬಾ ಕುಗ್ಗಿ ಹೋಗಿದ್ದೇನೆ.. ಕಿಚ್ಚನ ಮುಂದೆ ಕಣ್ಣೀರಿಟ್ಟ ಭವ್ಯ

BBK11: ಮಾನಸಿಕವಾಗಿ ತುಂಬಾ ಕುಗ್ಗಿ ಹೋಗಿದ್ದೇನೆ.. ಕಿಚ್ಚನ ಮುಂದೆ ಕಣ್ಣೀರಿಟ್ಟ ಭವ್ಯ

GTD

JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್‌

Kapil-Mishra

Delhi Polls: ಮಾಜಿ ಸಿಎಂ ಪುತ್ರ ಸೇರಿ 29 ಅಭ್ಯರ್ಥಿಗಳ ಬಿಜೆಪಿಯ 2ನೇ ಪಟ್ಟಿ ಬಿಡುಗಡೆ

Indi-Alliaince

Fight Alone: ಮಹಾರಾಷ್ಟ್ರದಲ್ಲೂ ಇಂಡಿಯಾ ಕೂಟದಲ್ಲಿ ಅಪಸ್ವರ; ಎಂವಿಎ ಮೈತ್ರಿ ಮುಕ್ತಾಯ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

ಕಂಬಳಕ್ಕೆ ನೆರವು: ಇಂದು ಸಿಎಂಗೆ ಅಹವಾಲು

Mangaluru ಕಂಬಳಕ್ಕೆ ನೆರವು: ಇಂದು ಸಿಎಂಗೆ ಅಹವಾಲು

ವಿಶಿಷ್ಟ ವಿಚಾರ ಚಿಂತನ ಮಂಥನ : ಮಂಗಳೂರು ಲಿಟ್‌ಫೆಸ್ಟ್‌ ಇಂದಿನಿಂದ

ವಿಶಿಷ್ಟ ವಿಚಾರ ಚಿಂತನ ಮಂಥನ: ಮಂಗಳೂರು ಲಿಟ್‌ಫೆಸ್ಟ್‌ ಇಂದಿನಿಂದ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Shrigeri-Mutt

Suvarna Bharathi Mahotsava: ಶೃಂಗೇರಿಯಲ್ಲಿ ದಾಖಲೆ ಬರೆದ ತ್ರಿವೇಣಿ ಸ್ತೋತ್ರ ಪಠಣ

Covid 2

HMPV; ಗುಜರಾತ್‌, ಅಸ್ಸಾಂನಲ್ಲಿ ತಲಾ 1 ಕೇಸು ಪತ್ತೆ

1-bang

ಹವಾಮಾನ ಇಲಾಖೆಗೆ 150: ಕಾರ್ಯಕ್ರಮಕ್ಕೆ ಬರಲ್ಲ ಬಾಂಗ್ಲಾ

1-tunel

ನಾಳೆ ಕಾಶ್ಮೀರದ ಸೋನಾ ಮಾರ್ಗ್‌ ಸುರಂಗ ಉದ್ಘಾಟನೆ

1-mnk

ಮಾಲ್‌ಗೆ ನುಗ್ಗಿ ಯುವತಿ ಚಪ್ಪಲಿ ಕಿತ್ತುಕೊಂಡ ಕೋತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.