Kerala “ವೆಸ್ಟ್‌ನೈಲ್’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ
Team Udayavani, May 20, 2024, 12:51 AM IST
ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶ್ಶೂರ್ ಪ್ರದೇಶದಲ್ಲಿ “ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ನಿಗಾ ವಹಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.
ಜಿಲ್ಲೆಯ ಎಲ್ಲ ವೈದ್ಯಕೀಯ ಕಾಲೇಜುಗಳಿಗೂ ಸೂಚನೆ ನೀಡಲಾಗಿದ್ದು, ಈ ರೋಗಕ್ಕೆ ಸಂಬಂಧಪಟ್ಟ ಲಕ್ಷಣ ಹೊಂದಿದ ರೋಗಿಗಳು ಚಿಕಿತ್ಸೆಗೆ ಬಂದರೆ ಮಾಹಿತಿ ನೀಡಲು ಸೂಚಿಸಲಾಗಿದೆ. ಸದ್ಯಕ್ಕೆ ದ.ಕ. ಜಿಲ್ಲೆಯಲ್ಲಿ ರೋಗ ಪತ್ತೆಯಾಗದಿದ್ದರೂ ಗಡಿಭಾಗದಲ್ಲೂ ಎಚ್ಚರ ವಹಿಸಲಾಗುತ್ತಿದೆ.
ಇಂದಿನಿಂದ ತರಬೇತಿ: ಆರೋಗ್ಯ ಇಲಾಖೆಯ ಸಿಬಂದಿಗೆ ಮೇ 20ರಿಂದ ಕೆಲವು ದಿನಗಳ ಕಾಲ ತರಬೇತಿ ನಡೆಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ ಎಂದು ಡಿಎಚ್‌ಒ ಡಾ| ಎಚ್.ಆರ್. ತಿಮ್ಮಯ್ಯ “ಉದಯವಾಣಿ’ಗೆ ತಿಳಿಸಿದ್ದಾರೆ.
ಏನಿದು ವೆಸ್ಟ್ ನೈಲ್ ಜ್ವರ ? ವೆಸ್ಟ್‌ನೈಲ್ ಸೊಳ್ಳೆಯಿಂದ ಹರಡುವ ರೋಗವಾಗಿದ್ದು, ಬಾಧಿತರಿಗೆ ಹೆಚ್ಚಾಗಿ ಜ್ವರ, ತಲೆನೋವು, ಸುಸ್ತು, ದೇಹದ ವಿವಿಧ ಭಾಗಗಳಲ್ಲಿ ನೋವು, ವಾಕರಿಕೆ, ವಾಂತಿ, ಮೂರ್ಛೆ, ಚರ್ಮದ ಮೇಲೆ ದದ್ದು, ನಡುಕ, ಕುತ್ತಿಗೆ ಬಿಗಿತ ಇತ್ಯಾದಿ ಲಕ್ಷಣ ಗೋಚರಿಸಬಹುದು ಎಂದು ವೈದ್ಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.