ಕರಾವಳಿಯಲ್ಲಿ ಗರಿಗಳ ರವಿವಾರ ಆಚರಣೆ

Team Udayavani, Apr 3, 2023, 7:37 AM IST

ಕರಾವಳಿಯಲ್ಲಿ ಗರಿಗಳ ರವಿವಾರ ಆಚರಣೆ

ಮಂಗಳೂರು/ಉಡುಪಿ: ಅವಿಭಜಿತ ದ.ಕ. ಜಿಲ್ಲೆಯಲ್ಲಿ ಗರಿಗಳ ರವಿವಾರದ ಬಲಿಪೂಜೆ ನಡೆಯಿತು.

ಮಂಗಳೂರು ನಗರದ ರೊಜಾ ರಿಯೊ ಕೆಥೆಡ್ರಲ್‌ನಲ್ಲಿ ಬಿಷಪ್‌ ರೆ|ಫಾ| ಪೀಟರ್‌ ಪಾವ್ಲ್ ಸಲ್ಡಾನ್ಹಾ ಹಾಗೂ ಉಡುಪಿಯ ಶೋಕಮಾತಾ ಇಗರ್ಜಿಯಲ್ಲಿ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ರೆ|ಫಾ| ಡಾ| ಜೆರಾಲ್ಡ್ ಐಸಾಕ್‌ ಲೋಬೊ ಅವರು ಗರಿಗಳ ರವಿವಾರದ ಬಲಿ ಪೂಜೆಯ ನೇತೃತ್ವ ವಹಿಸಿದ್ದರು.

ಯೇಸು ಕ್ರಿಸ್ತರು ತಮ್ಮ ಸಂಕಷ್ಟಗಳ ದಿನಗಳಲ್ಲೂ ಸಹನೆಯನ್ನು ಪ್ರದರ್ಶಿಸುವ ಮೂಲಕ ಸಮಾಜಕ್ಕೆ ಸಾರ್ವ ಕಾಲಿಕ ಹಾಗೂ ಅತ್ಯ ಮೂಲ್ಯ ಸಂದೇಶ ನೀಡಿದ್ದಾರೆ. ಆ ಸಂದೇಶ ನಮ್ಮೆಲ್ಲರ ಜೀವನದ ಆದರ್ಶವಾಗ ಬೇಕು. ನಮ್ಮ ಜೀವನದಲ್ಲಿ ಸಹನೆ ಹಾಗೂ ಪ್ರೀತಿ ಅತಿ ಮುಖ್ಯವಾಗಿದ್ದು, ಯೇಸುಕ್ರಿಸ್ತರು ನೀಡಿದ ಈ ಜೀವನ ಸಂದೇಶವನ್ನು ನಾವು ಅನುಸರಿಸಬೇಕು ಎಂದವರು ಸಂದೇಶ ನೀಡಿದರು.

ಎಲ್ಲ ಚರ್ಚ್‌ಗಳಲ್ಲಿ ಕ್ರೈಸ್ತ ಬಾಂಧವರು ಬೆಳಗ್ಗಿನ ಪ್ರಾರ್ಥನ ವಿಧಿಯಲ್ಲಿ ಪಾಲ್ಗೊಂಡು ತೆಂಗಿನ ಗರಿಗಳನ್ನು ಹಿಡಿದುಕೊಂಡು ಮುಖ್ಯರಸ್ತೆಗಳಲ್ಲಿ ಮೆರವಣಿಗೆ ಸಾಗಿ ಚರ್ಚ್‌ಗಳಲ್ಲಿ ಯೇಸುವಿನ ಕಷ್ಟದ ದಿನಗಳನ್ನು ನೆನಪು ಮಾಡಿಕೊಂಡು ಬಲಿಪೂಜೆಯಲ್ಲಿ ಭಾಗವಹಿಸಿದರು.

ರೊಜಾರಿಯೊ ಕೆಥೆಡ್ರಲ್‌ನಲ್ಲಿ ರೆ|ಫಾ| ಆಲ್ಫೆ†ಡ್‌ ಪಿಂಟೊ, ರೆ| ಸಂತೋಷ್‌ ಡಿ’ಸೋಜಾ ಹಾಗೂ ಇತರ ಗುರುಗಳು, ಉಡುಪಿಯ ಶೋಕಮಾತಾ ಇಗರ್ಜಿಯಲ್ಲಿ ಚರ್ಚ್‌ನ ಪ್ರಧಾನ ಧರ್ಮಗುರು ರೆ|ಫಾ| ಚಾರ್ಲ್ಸ್ ಮಿನೇಜಸ್‌, ಉಡುಪಿ ಧರ್ಮಪ್ರಾಂತ್ಯದ ಕುಲಪತಿ ರೆ|ಫಾ| ಡಾ| ರೋಶನ್‌ ಡಿ’ಸೋಜಾ ಮತ್ತಿತರ ಗುರುಗಳು ಉಪಸ್ಥಿತರಿದ್ದರು.

ಗರಿಗಳ ರವಿವಾರದ ಹಿನ್ನೆಲೆ
2 ಸಾವಿರ ವರ್ಷಗಳ ಹಿಂದೆ ಯೇಸು ಕ್ರಿಸ್ತರು ಬೆಥಾನಿಯಾದಿಂದ ದೇವನಗರಿ ಎಂದೇ ಹೇಳಲಾದ ಜೆರುಸಲೇಂಗೆ ಪ್ರವೇಶ ಮಾಡುವಾಗ ಅಲ್ಲಿನ ಜನರು “ಒಲಿವ್‌’ ಮರದ ಗರಿಗಳನ್ನು ಹಿಡಿದು ವೈಭವದಿಂದ ಸ್ವಾಗತಿಸಿ ಬರ ಮಾಡಿಕೊಂಡಿದ್ದರು ಎಂಬ ಉಲ್ಲೇಖ ಬೈಬಲ್‌ನಲ್ಲಿದೆ. ಪ್ರಸ್ತುತ ಇಲ್ಲಿ ಒಲಿವ್‌ ಮರದ ಗರಿಗಳ ಬದಲು ತೆಂಗಿನ ಗರಿಗಳನ್ನು ಸಾಂಕೇತಿಕವಾಗಿ ಹಿಡಿದು ಹಿಂದಿನ ಘಟನೆಯನ್ನು ಸ್ಮರಿಸಲಾಗುತ್ತದೆ. ಗರಿಗಳ ರವಿವಾರದೊಂದಿಗೆ ಕ್ರೈಸ್ತರ ಪವಿತ್ರ ಸಪ್ತಾಹ ಆರಂಭಗೊಳ್ಳುತ್ತದೆ. ಗುರುವಾರ ಯೇಸು ಕ್ರಿಸ್ತರ ಕೊನೆಯ ಭೋಜನದ ದಿನ, ಶುಭ ಶುಕ್ರವಾರ ಯೇಸು ಕ್ರಿಸ್ತರನ್ನು ಶಿಲುಬೆಗೇರಿಸಿದ ದಿನ, ಶನಿವಾರ ರಾತ್ರಿ ಈಸ್ಟರ್‌ ಹಬ್ಬದ ಜಾಗರಣೆ ಹಾಗೂ ರವಿವಾರ ಯೇಸು ಕ್ರಿಸ್ತರ ಪುನರುತ್ಥಾನದ ದಿನದ ಹಬ್ಬವನ್ನು ಆಚರಿಸಲಾಗುತ್ತದೆ.

ಟಾಪ್ ನ್ಯೂಸ್

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POLICE-5

Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

15

Mangaluru: ಚಿನ್ನದ ಬಿಸ್ಕೆಟ್‌ ಇದೆ ಎಂದು ನಂಬಿಸಿ 4 ಲಕ್ಷ ರೂ. ವಂಚನೆ

ssa

Mangaluru: ಮಾದಕ ವಸ್ತು ಸೇವನೆ; ಯುವಕ ವಶಕ್ಕೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.