ಸರಕಾರಿ ಶಾಲೆಗಳ ಬಗ್ಗೆ ಒಲವು ತೋರಿ
Team Udayavani, Dec 8, 2017, 5:19 PM IST
ಕುಕ್ಕೇಡಿ : ಸರಕಾರಿ ಶಾಲೆಗಳಿಗೆ ಸರಕಾರ ಕ್ಷೀರಭಾಗ್ಯ, ಬಿಸಿಯೂಟ, ಸಮವಸ್ತ್ರ ಸೇರಿದಂತೆ ಹಲವು ಸವಲತ್ತುಗಳನ್ನು ನೀಡುತ್ತಿದೆ. ಸರಕಾರಕ್ಕೆ ಸರಕಾರಿ ಶಾಲೆಗಳಿಗೆ ಸೌಲಭ್ಯ ಕಲ್ಪಿಸಬಹುದೇ ಹೊರತು ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಲು ಸಾಧ್ಯವಿಲ್ಲ. ಅದಕ್ಕಾಗಿ ಹೆತ್ತವರು ಸರಕಾರಿ ಶಾಲೆಗಳ ಬಗ್ಗೆ ಒಲವು ತೋರಿಸಬೇಕು ಎಂದು ಮಂಗಳೂರು ದ.ಕ.ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್ ಹೇಳಿದರು. ಕುಕ್ಕೇಡಿ ಬುಳೆಕ್ಕಾರ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭದ ಉದ್ಘಾಟನೆಯನ್ನು ಗುರುವಾರ ನೆರವೇರಿಸಿ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಕುಕ್ಕೇಡಿ ಗ್ರಾ.ಪಂ. ಅಧ್ಯಕ್ಷೆ ತೇಜಾಕ್ಷಿ ವಹಿಸಿದ್ದರು. ಅಳದಂಗಡಿ ಜಿ.ಪಂ. ಸದಸ್ಯ ಶೇಖರ ಕುಕ್ಕೇಡಿ, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ಪಿ., ಬೆಂಗಳೂರು ಹೈಕೋರ್ಟ್ ನ್ಯಾಯವಾದಿ ಸ್ವರ್ಣಲತಾ ಹೆಗ್ಡೆ, ವೇಣೂರು ಲಯನ್ಸ್ ಕ್ಲಬ್ ಅಧ್ಯಕ್ಷ ನಿತೇಶ್ ಎಚ್., ಕುಕ್ಕೇಡಿ ಗ್ರಾ.ಪಂ. ಸದಸ್ಯರಾದ ಪದ್ಮನಾಭ, ಗೌರಿ, ಸರೋಜಾ, ಶ್ರೀಕ್ಷೇತ್ರ ಧ.ಗ್ರಾ.ಯೋ. ಸೇವಾ ಪ್ರತಿನಿಧಿ ಸುರೇಶ್ ಶೆಟ್ಟಿ, ಶಿಕ್ಷಣ ಇಲಾಖೆಯ ಸಿಆರ್‌ಪಿ ಆರತಿ, ಕುಕ್ಕೇಡಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾರಾಯಣ ಶೆಟ್ಟಿ, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಕೃಷ್ಣಪ್ಪ ಮೂಲ್ಯ, ಶಾಲಾ ವಿದ್ಯಾರ್ಥಿ ಸಂಘದ ನಾಯಕಿ ಹರ್ಷಿಕಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಸಮ್ಮಾನ: ಶಾಲೆಗೆ ಕಂಪ್ಯೂಟರ್ ಕೊಡುಗೆ ನೀಡಿದ ಸ್ವರ್ಣಲತಾ ವಸಂತ ಹೆಗ್ಡೆ ದಂಪತಿಯನ್ನು ವೇದಿಕೆಯಲ್ಲಿ ಸಮ್ಮಾನಿಸಲಾಯಿತು. ಎಸ್‌ಡಿಎಂಸಿ ಮಾಜಿ ಸದಸ್ಯರನ್ನು, ಬುಳೆಕ್ಕಾರ ಗೆಳೆಯರ ಬಳಗ, ಶ್ರೀ ಶಾರದಾಂಬ ಭಜನ ಮಂಡಳಿ, ಪುರುಷರ ಕಟ್ಟುವ ಬಳಗದ ಅಧ್ಯಕ್ಷರುಗಳನ್ನು ಸಮ್ಮಾನಿಸಿ ಗೌರವಿಸಲಾಯಿತು.
ವಿವಿಧ ಆಟೋಟಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಪುರಿಯ ಮಾಲಾಡಿ ಹಾಲು ಉ.ಸ. ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಧ್ವಜಾರೋಹಣ ನೆರವೇರಿಸಿದರು. ಶಾಲಾ ಶಿಕ್ಷಕ ವೃಂದ, ಎಸ್‌ಡಿಎಂಸಿ ಸದಸ್ಯರು ಹಾಗೂ ಹಳೆವಿದ್ಯಾರ್ಥಿ ಸಂಘದ ಸದಸ್ಯರು ಸಹಕರಿಸಿದರು. ಮುಖ್ಯ ಶಿಕ್ಷಕ ಭಾಸ್ಕರ ವರದಿ ವಾಚಿಸಿದರು. ಶಿಕ್ಷಕಿ ಗೀತಾ ಕೆ. ಸ್ವಾಗತಿಸಿ, ಶಿಕ್ಷಕಿ ತುಳಸಿ ವಂದಿಸಿದರು. ಶಿಕ್ಷಕ ಸತೀಶ್ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.
ಸಮುದಾಯದ ಸಹಭಾಗಿತ್ವ ಅಗತ್ಯ
ಇಂಗ್ಲಿಷ್ ಮಾಧ್ಯಮ ಶಾಲೆಗಳ ಹಾವಳಿಯಿಂದ ಸರಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಕಡಿಮೆಯಾಗುತ್ತಿದೆ. ಸರಕಾರಿ ಅನುದಾನದಿಂದ ಮಾತ್ರ ಶಾಲೆಗಳನ್ನು ಬಲಪಡಿಸಲು ಸಾಧ್ಯವಿಲ್ಲ. ಇದಕ್ಕೆ ಸಮುದಾಯದ ಸಹಭಾಗಿತ್ವವೂ ಅಗತ್.
ಶಾಹುಲ್ ಹಮೀದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ಅನಾಥ ಸ್ಥಿತಿಯಲ್ಲಿ ಎರಡು ಬೈಕ್; ವಶಕ್ಕೆ ಪಡೆದುಕೊಂಡ ಪೊಲೀಸರು
Bantwal: ಬೀದಿ ಬದಿ ವ್ಯಾಪಾರ ಸ್ಥಳಾಂತರ
Dharmasthala: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಛಲವಾದಿ ನಾರಾಯಣಸ್ವಾಮಿ ಕುಟುಂಬ ಭೇಟಿ
Uppinangady:ಪ್ರಿ ವೆಡ್ಡಿಂಗ್ ಶೂಟಿಂಗ್‌ಗೆ ತೆರಳುತ್ತಿದ್ದಾಗ ಅಪಘಾತ:ಭಾವಿ ವಧು-ವರರಿಗೆ ಗಾಯ
Sullia: ಬಿದ್ದು ಸಿಕ್ಕಿದ್ದ ಚಿನ್ನದ ಸರವನ್ನು ಹಿಂದಿರುಗಿಸಿದ ಬಸ್ ಮಾಲಕರು
MUST WATCH
ಹೊಸ ಸೇರ್ಪಡೆ
Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು
Puttur: ಅನಾಥ ಸ್ಥಿತಿಯಲ್ಲಿ ಎರಡು ಬೈಕ್; ವಶಕ್ಕೆ ಪಡೆದುಕೊಂಡ ಪೊಲೀಸರು
ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ
Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ
Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.