ದುಬಾೖಯಿಂದ ಬಂದ ಪ್ರಯಾಣಿಕನಲ್ಲಿ ಜ್ವರ: ತಪಾಸಣೆ
ಮುಂಜಾಗ್ರತೆ ವಹಿಸಲು ಸೂಚನೆ
Team Udayavani, Mar 9, 2020, 6:15 AM IST
ಮಂಗಳೂರು: ದುಬಾೖಯಿಂದ ಮಂಗಳೂರಿಗೆ ರವಿವಾರ ವಿಮಾನದಲ್ಲಿ ಆಗಮಿಸಿದ ವ್ಯಕ್ತಿಯೋರ್ವರಿಗೆ ಜ್ವರ ಕಂಡು ಬಂದ ಹಿನ್ನೆಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಮುಂಜಾಗ್ರತಾ ಕ್ರಮವಾಗಿ ಅವರನ್ನು ತಪಾಸಣೆಗೆ ಒಳಪಡಿಸಿ ಅನಂತರ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತು.
ದುಬಾೖ ಸಹಿತ ಕೆಲವು ರಾಷ್ಟ್ರಗಳಲ್ಲಿ ಕೊರೊನಾ ಕಂಡುಬಂದಿರುವ ಹಿನ್ನೆಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ತಪಾಸಣ ಕಾರ್ಯ ನಡೆಯುತ್ತಿದ್ದು, ವಿದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ ಹೆಚ್ಚಿನ ನಿಗಾ ವಹಿಸಿಕೊಳ್ಳಲಾಗುತ್ತಿದೆ.
ರವಿವಾರ ಸಂಜೆ ಬಂದ ಪ್ರಯಾಣಿಕನಲ್ಲಿ ಜ್ವರ ಇದ್ದ ಕಾರಣ ಅವರನ್ನು ಹೆಚ್ಚಿನ ತಪಾಸಣೆಗೆ ನಿರ್ಧರಿಸಲಾಯಿತು. ತೀವ್ರ ನಿಗಾ ಘಟಕದಲ್ಲಿಟ್ಟು ಸಮಗ್ರ ತಪಾಸಣೆಯ ಬಳಿಕ ಆತನಲ್ಲಿ ಯಾವುದೇ ಸೋಂಕು ಕಂಡುಬರದಿದ್ದರೆ ಬಿಡುಗಡೆ ಮಾಡಲಾಗುವುದು ಎಂದು ತಿಳಿದು ಬಂದಿದೆ.
ಈ ವ್ಯಕ್ತಿಯಲ್ಲಿ ಸಾಮಾನ್ಯ ಜ್ವರ ಇದ್ದಂತಿದೆ ಆದರೂ ವರದಿ ಬರುವವರೆಗೆ ಕಾಯಲಾಗುತ್ತದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ತಪಾಸಣೆ ಮುಂದುವರಿಕೆ
ಕೊರೊನಾ ವೈರಸ್ ಹರಡದಂತೆ ದ.ಕ. ಜಿಲ್ಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳು ಮುಂದು ವರಿದಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣಾ ಕಾರ್ಯ
ನಡೆಯುತ್ತಿದ್ದು, ವಿದೇಶಗಳಿಂದ ಆಗಮಿಸುವ ಮಂದಿಗೆ ಹೆಚ್ಚಿನ ನಿಗಾ ವಹಿಸಿಕೊಳ್ಳಲಾಗಿದೆ. ನಗರದ ವಿವಿಧ ಮೆಡಿಕಲ್ ಶಾಪ್‌ಗ್ಳಲ್ಲಿ ರವಿವಾರವೂ ಮಾಸ್ಕ್ ಗಳಿಗೆ ಬೇಡಿಕೆ ಕಂಡು ಬಂದಿದ್ದು, ಮಾಸ್ಕ್ ಅಲಭ್ಯತೆ ಉಂಟಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.