ಅರಣ್ಯ ಹಕ್ಕು ಕಾಯಿದೆಯಡಿ ಆನ್‌ಲೈನ್‌ ಅರ್ಜಿ ಸಲ್ಲಿಕೆಗೆ ಪರದಾಟ


Team Udayavani, Jul 11, 2017, 3:15 AM IST

online.jpg

ವಿಶೇಷ ವರದಿ
ಬೆಳ್ತಂಗಡಿ: ಅರಣ್ಯ ಹಕ್ಕು ಯೋಜನೆ ಜಾರಿಗೆ ಬಂದು ವರ್ಷಗಳೇ ಕಳೆದಿವೆ.  ಆದರೆ ಅದರ ಸರಿಯಾದ ಪ್ರಯೋಜನ ಇನ್ನೂ ಅರಣ್ಯಗಳೊಳಗೆ ವಾಸಿಸುತ್ತಿರುವ ಮೂಲನಿವಾಸಿಗಳಿಗೆ ದೊರೆತಿಲ್ಲ. ತಮಗಿರುವ ಹಕ್ಕುಗಳನ್ನು ಪಡೆದುಕೊಳ್ಳಲು ಅವರು ಪಡುತ್ತಿರುವ ಪಾಡು ಹೇಳತೀರದ್ದಾಗಿದೆ. ಇದೀಗ ಅರಣ್ಯ ಹಕ್ಕು ಕಾಯ್ದೆಯಡಿಯಲ್ಲಿ ಯಾವುದೇ ಸೌಲಭ್ಯಗಳನ್ನು ಪಡೆಯಲು ಆನ್‌ಲೆ„ನ್‌ನಲ್ಲಿಯೇ  ಅರ್ಜಿಗಳನ್ನು ಸಲ್ಲಿಸಬೇಕಾಗಿದೆ. ಇದಕ್ಕಾಗಿ ಮೂಲ
ನಿವಾಸಿಗಳು ಕಚೇರಿಯಿಂದ ಕಚೇರಿಗೆ ಅಲೆಯುತ್ತಿದ್ದಾರೆ. 

ಕಚೇರಿಯಿಂದ ಕಚೇರಿಗೆ ಅಲೆದಾಟ
ಆನ್‌ಲೈನ್‌ ಅರ್ಜಿ ಸಲ್ಲಿಕೆಯ ಕಾರ್ಯ ಮಾತ್ರ ಎಲ್ಲಿಯೂ ಸಾಧ್ಯವಾಗುತ್ತಿಲ್ಲ. ಇಲಾಖೆಗಳ ಅಧಿಕಾರಿಗಳಿಗೂ ಈ ಬಗ್ಗೆ ಮಾಹಿತಿಯಿಲ್ಲವಾಗಿದೆ.  ಕಳೆದ ಮೂರು ತಿಂಗಳುಗಳಿಂದ ಸವಣಾಲು ಗ್ರಾಮದ ಇತ್ತಿಲ ಪೇಲ ರಸ್ತೆ  ಕಾಂಕ್ರೀಟ್‌ ಕಾಮಗಾರಿಗೆ ಹಾಗೂ ನಾವೂರು ಗ್ರಾಮದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಪ್ರದೇಶಕ್ಕೆ ವಿದ್ಯುತ್‌ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಲು ಮೂಲ ನಿವಾಸಿಗಳು ಕಚೇರಿಯಿಂದ ಕಚೇರಿಗೆ ಅಲೆಯುತ್ತಿದ್ದಾರೆ.  ಸವಣಾಲು ಗ್ರಾಮದ ಇತ್ತಿಲ ಪೇಲ ಪ್ರದೇಶಕ್ಕೆ ರಸ್ತೆ ಮಂಜೂರಾಗಿ ಅನುದಾನ ಬಿಡುಗಡೆಯಾಗಿ ಗುತ್ತಿಗೆದಾರರಿಗೆ ವಹಿಸಿ
ಕೊಡಲಾಗಿತ್ತು. ಆದರೆ ಅರಣ್ಯ ಇಲಾಖೆಯವರು ಕಾಮಗಾರಿಗೆ ಅವಕಾಶ ನೀಡಲಿಲ್ಲ. ಅಂದಿನಿಂದ ಅನುಮತಿಗಾಗಿ ಇಲ್ಲಿನ ಜನರು ಅಲೆಯುತ್ತಿದ್ದಾರೆ, ಯಾವುದೇ ಪ್ರಯೋಜನವಾಗಿಲ್ಲ. ಈ ನಡುವೆ ಖಾಸಗಿ ವ್ಯಕ್ತಿಯೋರ್ವ ಆನ್‌ಲೆ„ನ್‌ನಲ್ಲಿ ತಾನು ಅರ್ಜಿ ಸಲ್ಲಿಸುವುದಾಗಿಯೂ ಅದಕ್ಕೆ 30,000 ರೂ.  ಹಣ ನೀಡುವಂತೆಯೂ ಕೇಳುತ್ತಿದ್ದಾರೆ. ಸರಕಾರಿ ಅ ಧಿಕಾರಿಗಳಿಗೆ ಅರ್ಜಿ ಹೇಗೆ ಸಲ್ಲಿಸಬೇಕು ಎಂದು ತಿಳಿಯದಿರುವಾಗ ಖಾಸಗಿ ವ್ಯಕ್ತಿಗೆ ಇದು ಹೇಗೆ ಸಾಧ್ಯವಾಗುತ್ತಿದೆ ಎಂಬ ಪ್ರಶ್ನೆ ಇಲ್ಲಿನ ಜನರದ್ದಾಗಿದೆ. ಇಷ್ಟು  ಖರ್ಚುಮಾಡಿ ಅರ್ಜಿ ಸಲ್ಲಿಸುವ ಶಕ್ತಿ ನಮಗಿಲ್ಲ ಎನ್ನುತ್ತಾರೆ.

ಅರಣ್ಯ ಹಕ್ಕು ಕಾಯ್ದೆಯ ಸೌಲಭ್ಯಗಳು
ಬಹುತೇಕ ಆದಿವಾಸಿಗಳು ಅರಣ್ಯಗಳ ನಡುವೆಯೇ ವಾಸಿಸುತ್ತಿದ್ದಾರೆ. ಅವರಿಗೆ ಅಲ್ಲಿ ಮೂಲ ಸೌಲಭ್ಯಗಳನ್ನು ಒದಗಿಸಲು ಅರಣ್ಯ ಇಲಾಖೆ ಸದಾ ಅಡ್ಡಿಪಡಿಸುತ್ತಾ ಬಂದಿದೆ. ಇದು ಇಲಾಖೆ ಮತ್ತು ಮೂಲನಿವಾಸಿಗಳ ನಡುವೆ ಸದಾ ಘರ್ಷಣೆಗೆ ಕಾರಣವಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಹತ್ತು  ವರ್ಷಗಳ ಹಿಂದೆ ಅರಣ್ಯ ಹಕ್ಕು ಕಾಯ್ದೆಯನ್ನು ಜಾರಿಗೆ ತಂದಿತ್ತು. ಈ ಕಾಯ್ದೆಯಡಿಯಲ್ಲಿ ಮೂಲ ಸೌಲಭ್ಯಗಳನ್ನು ಪಡೆಯಲು ಅವರಿಗೆ ಅವಕಾಶ ಒದಗಿಸಿತ್ತು. ಆರಂಭದಲ್ಲಿ ಅರ್ಜಿಗಳನ್ನು ಸಂಬಂಧಪಟ್ಟ ನಮೂನೆಯಲ್ಲಿ ತುಂಬಿಸಿ ಸಲ್ಲಿಸಿದರೆ ಸಾಕಾಗುತ್ತಿತ್ತು, ಆಗ ಸುಲಭವಾಗಿ ಜನರು ತಮ್ಮ  ಅರ್ಜಿಗಳನ್ನು ಸಲ್ಲಿಸಿ ಕೆಲಸಗಳನ್ನು ಮಾಡಿಕೊಳ್ಳಲು ಸಾಧ್ಯವಾಗುತ್ತಿತ್ತು.  ಆದರೆ ಕಳೆದ ಎರಡು ವರ್ಷಗಳಿಂದ ಇದನ್ನು ಆನ್‌ಲೈನ್‌ ನಲ್ಲಿ ಸಲ್ಲಿಸುವಂತೆ ಸೂಚನೆ ಬಂದಿದೆ. ಆದರೆ ಮೂಲನಿವಾಸಿಗಳು ಇದೀಗ ತಮ್ಮ ಪ್ರದೇಶಗಳ ಅಭಿವೃದ್ಧಿ  ಕಾರ್ಯಗಳಿಗೆ ಅನುಮತಿ ಪಡೆಯಲು ಏನು ಮಾಡಬೇಕು ಎಂದು ತಿಳಿಯದೆ ಪರದಾಡುತ್ತಿದ್ದಾರೆ.

ನಿರೀಕ್ಷೆ ಹುಸಿಯಾಗಿದೆ
ಕಳೆದ ಮೂರು ನಾಲ್ಕು ತಿಂಗಳುಗಳಿಂದ ಆನ್‌ಲೆ„ನ್‌  ಅರ್ಜಿ ಸಲ್ಲಿಸುವುದಕ್ಕಾಗಿ ಓಡಾಡುತ್ತಿದ್ದೇನೆ. ಆದರೆ ಯಾರಿಗೂ ಅರ್ಜಿ ಸಲ್ಲಿಸುವುದು ಹೇಗೆಂದೇ ತಿಳಿದಿಲ್ಲ . ನಮ್ಮ  ಪ್ರದೇಶಗಳಿಗೂ ರಸ್ತೆ, ವಿದ್ಯುತ್‌ ಬೇಕು ಎಂಬುದು ನಮ್ಮ ಕನಸು.  ಅರಣ್ಯ ಹಕ್ಕು ಯೋಜನೆಯಲ್ಲಿ ಅದು ಸಾಧ್ಯವಾಗಬಹುದು ಎಂದು ನಂಬಿದ್ದೆವು. ಆದರೆ ಇದೀಗ ಆ ನಿರೀಕ್ಷೆಯೂ ಹುಸಿಯಾಗುತ್ತಿದೆ,  ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಳ್ಳಬೇಕು.

-ಜಯಾನಂದ ಪಿಲಿಕಳ , ಸವಣಾಲು

ಮಾತುಕತೆ ನಡೆಸಿ ಸಮಸ್ಯೆ ಪರಿಹಾರ 
ಆನ್‌ಲೈನ್‌ ಅರ್ಜಿ ಸಲ್ಲಿಕೆಯ ಸಮಸ್ಯೆ ಗಮನಕ್ಕೆ ಬಂದಿದೆ. ಈ ಬಗ್ಗೆ ಹಿರಿಯ ಅ ಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದೇನೆ. ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಅ ಧಿಕಾರಿಗಳೊಂದಿಗೂ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸಿ ಒಂದೆರಡು ದಿನಗಳಲ್ಲಿಯೇ ಆನ್‌ಲೆ„ನ್‌ ಅರ್ಜಿ ಸಲ್ಲಿಸಲು ವ್ಯವಸ್ಥೆ ಮಾಡುತ್ತೇವೆ.
– ಮೋಹನ್‌ಕುಮಾರ್‌, 
ಸಮಾಜ ಕಲ್ಯಾಣ ಅಧಿಕಾರಿ ಬೆಳ್ತಂಗಡಿ.

ಟಾಪ್ ನ್ಯೂಸ್

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

IPL Mega Auction: 2008-2024.. Here is the list of the most expensive players in each auction

IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ

Eye Surgeries: ಪದವಿ ಪೂರ್ಣಗೊಳಿಸದೆ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ…

Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

lakxmi

Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kambala

Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

IPL Mega Auction: 2008-2024.. Here is the list of the most expensive players in each auction

IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

16-uv-fusion

Discipline: ಬದುಕಿನಲ್ಲಿ ಶಿಸ್ತಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.