ಕಡತ ವಿಲೇವಾರಿ ಸಪ್ತಾಹ : ಮೊದಲ ದಿನವೇ 3,050 ಕಡತ ವಿಲೇವಾರಿ
Team Udayavani, Jun 25, 2019, 10:18 AM IST
ಮಂಗಳೂರು: ಕಂದಾಯ ಇಲಾಖೆಯಲ್ಲಿ ಇತ್ಯರ್ಥವಾಗದೆ ಬಾಕಿ ಉಳಿದಿರುವ ಕಡತಗಳ ಶೀಘ್ರ ವಿಲೇವಾರಿಗಾಗಿ ರಾಜ್ಯಾದ್ಯಂತ “ಕಡತ ವಿಲೇವಾರಿ ಸಪ್ತಾಹ’ ಸೋಮವಾರದಿಂದ ಆರಂಭವಾಗಿದ್ದು, ಮೊದಲ ದಿನವೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 1,868 ಮತ್ತು ಉಡುಪಿ ಜಿಲ್ಲೆಯಲ್ಲಿ 1,182 ಕಡತಗಳು ವಿಲೇವಾರಿಯಾಗಿವೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಾಕಿಯಿದ್ದ 176 ಕಡತ, ಮಂಗಳೂರು ಉಪವಿಭಾಗಾಧಿಕಾರಿ ಕಚೇರಿಯ 153, ಪುತ್ತೂರು ಉಪ ವಿಭಾಗಾಧಿಕಾರಿ ಕಚೇರಿಯ 48, ಮಂಗಳೂರು ತಹಶೀಲ್ದಾರ್ ಕಚೇರಿಯ 742, ಬಂಟ್ವಾಳದ 102, ಬೆಳ್ತಂಗಡಿ 165, ಪುತ್ತೂರು 176, ಸುಳ್ಯ 151, ಮೂಡುಬಿದಿರೆ 99 ಮತ್ತು ಕಡಬದಲ್ಲಿ 56 ಕಡತಗಳು ಮೊದಲ ದಿನ ವಿಲೇವಾರಿಯಾಗಿವೆ ಎಂದು ದ.ಕ. ಪ್ರಭಾರ ಅಪರ ಜಿಲ್ಲಾಧಿಕಾರಿ ಪ್ರಸನ್ನ ಕುಮಾರ್ “ಉದಯವಾಣಿ’ಗೆ ತಿಳಿಸಿದ್ದಾರೆ.
ಸಿಬಂದಿಗೆ ಮಾರ್ಗದರ್ಶನ
ಕಡತ ವಿಲೇವಾರಿ ಸಪ್ತಾಹ ಜೂ.24ರಿಂದ ಆರಂಭವಾಗಿದ್ದು 30ರ ವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಸಾಮಾನ್ಯ ಕಡತಗಳ ಜತೆಗೆ ವಿಶೇಷವಾಗಿ ದೀರ್ಘಕಾಲದಿಂದ ಬಾಕಿ ಉಳಿದವನ್ನು ವಿಲೇವಾರಿ ಮಾಡಲಾಗುತ್ತದೆ. ಕಡತಗಳನ್ನು ಯಾವ ರೀತಿ ವಿಲೇವಾರಿ ಮಾಡಬೇಕು ಎಂಬ ಬಗ್ಗೆ ಇಲಾಖಾ ಮುಖ್ಯಸ್ಥರು, ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿ ತಮ್ಮ ಅಧೀನ ಸಿಬಂದಿಗೆ ಮಾರ್ಗದರ್ಶನ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 40,617 ಮತ್ತು ಉಡುಪಿ ಜಿಲ್ಲೆಯಲ್ಲಿ 16,347 ಕಂದಾಯ ಇಲಾಖೆಯ ಕಡತಗಳು ಇತ್ಯರ್ಥವಾಗದೆ ಬಾಕಿ ಉಳಿದಿವೆ ಎಂದು ಕಂದಾಯ ಇಲಾಖೆಯ ಮೂಲಗಳು ತಿಳಿಸಿವೆ. ರವಿವಾರವೂ ರಜೆ ಪಡೆಯದೆ ಸಿಬಂದಿ ಕಡತ ವಿಲೇವಾರಿ ಪ್ರಕ್ರಿಯೆ ನಡೆಸಲಿದ್ದಾರೆ. ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ “ಉದಯವಾಣಿ’ ಜತೆಗೆ ಮಾತನಾಡಿ, ಕಡತ ವಿಲೇವಾರಿ ಸಪ್ತಾಹ ಸೋಮವಾರದಿಂದ ಆರಂಭವಾಗಿದೆ. ಜಿಲ್ಲೆಯಲ್ಲಿ ಇತ್ಯರ್ಥವಾಗದೆ ಬಾಕಿ ಉಳಿದಿರುವ ಕಡತಗಳ ಶೀಘ್ರ ವಿಲೇವಾರಿಗಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಲಾಗಿದೆ. 30ರವರೆಗೆ ಇದು ನಡೆಯಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Mangaluru: ಪಂಪ್‌ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.