ಕೊನೆಗೂ ಮೂಡುಬಿದಿರೆ, ಕಡಬ ತಾಲೂಕು ಉದ್ಘಾಟನೆ
Team Udayavani, Mar 9, 2019, 12:30 AM IST
ಮೂಡುಬಿದಿರೆ/ಕಡಬ: ದಿನ ನಿಗದಿಯಾಗಿಯೂ ನಾಲ್ಕು ಬಾರಿ ಮತ್ತು ಆರು ಬಾರಿ ಮುಂದೂಡಿಕೆಯಾಗಿದ್ದ ನೂತನ ಮೂಡುಬಿದಿರೆ ಮತ್ತು ಕಡಬ ತಾಲೂಕುಗಳಿಗೆ ಕೊನೆಗೂ ಉದ್ಘಾಟನೆಯ ಭಾಗ್ಯ ಕೂಡಿಬಂದಿದೆ.
ರಾಜ್ಯ ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಅವರು ಶುಕ್ರವಾರ ಈ ಎರಡೂ ತಾಲೂಕುಗಳನ್ನು ಉದ್ಘಾಟಿಸಿದರು. ಇದಕ್ಕೂ ಮುನ್ನ ಅವರು ಎರಡೂ ತಾಲೂಕುಗಳ ಮಿನಿ ವಿಧಾನಸೌಧ ಕಟ್ಟಡಗಳಿಗೂ ಶಂಕುಸ್ಥಾಪನೆ ನೆರವೇರಿಸಿದರು.
ಮೂಡುಬಿದಿರೆಯ ಪದ್ಮಾವತಿ ಕಲಾಮಂದಿರದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ದೀಪ ಬೆಳಗಿ, ತಾಲೂಕು ನಕಾಶೆ ಮತ್ತು ಮಿನಿ ವಿಧಾನ ಸೌಧದ ಬ್ಲೂಪ್ರಿಂಟ್ ಅನಾವರಣಗೊಳಿಸುವ ಮೂಲಕ ಸಚಿವ ಆರ್.ವಿ. ದೇಶಪಾಂಡೆ ಅವರು ನೂತನ ತಾಲೂಕನ್ನು ಉದ್ಘಾಟಿಸಿದರು. ಅದಕ್ಕೂ ಮುನ್ನ ತಹಶೀಲ್ದಾರರ ಕಚೇರಿಯ ಬಳಿ 3 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಗೊಳ್ಳಲಿರುವ ನೂತನ ಮಿನಿ ವಿಧಾನಸೌಧದ ಕಾಮಗಾರಿಗೆ ಶಂಕುಸ್ಥಾಪನೆಯನ್ನು ಅವರು ನೆರವೇರಿಸಿದರು.
ಕಂದಾಯ ಇಲಾಖೆ ದಿಟ್ಟ ಹೆಜ್ಜೆ
ಕೇವಲ ಪಹಣಿ ಪತ್ರ, ಮ್ಯುಟೇಶನ್ ಎಂಟ್ರಿ, ಅಫಿದವಿತ್ ಇವಿಷ್ಟೇ ದಾಖಲೆಗಳಿದ್ದು ಭೂಪರಿವರ್ತನೆ ಸಾಧ್ಯವಾಗುವಂತಹ ಕ್ರಾಂತಿಕಾರಿ ಹೆಜ್ಜೆಯನ್ನು ಕಂದಾಯ ಇಲಾಖೆ ಇರಿಸಿದೆ. ಇಲಾಖೆಯಲ್ಲಿರುವ ಸಿಬಂದಿ ಕೊರತೆ ನಿವಾರಿಸಲು 109 ತಹಶೀಲ್ದಾರರು, 800 ಸರ್ವೇಯರ್‌ಗಳ ನೇಮಕಾತಿ ನಡೆಯಲಿದೆ. ಗ್ರಾಮಕರಣಿಕರು, ಪ್ರಥಮ, ದ್ವಿತೀಯ ದರ್ಜೆ ಗುಮಾಸ್ತರ ಹುದ್ದೆಗಳನ್ನು ತುಂಬುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ ಎಂದು ಸಚಿವ ದೇಶಪಾಂಡೆ ಮೂಡುಬಿದಿರೆ ತಾಲೂಕು ಉದ್ಘಾಟನೆಯ ಸಂದರ್ಭದಲ್ಲಿ ಪ್ರಕಟಿಸಿದರು.
ರಾಜಕೀಯ ಚುನಾವಣೆಗೆ ಮಾತ್ರ ಸೀಮಿತವಾಗಿರಲಿ, ಅಭಿವೃದ್ಧಿಗೆ ಎಲ್ಲರೂ ಜತೆಯಾಗಿ ಕೆಲಸ ಮಾಡಬೇಕು ಎಂಬುದನ್ನು ಅವಿಭಜಿತ ದ.ಕ. ಜಿಲ್ಲೆಯವರು ತೋರಿಸಿ ಕೊಟ್ಟಿದ್ದಾರೆ. ಆ ಪರಂಪರೆ ಇಂದಿಗೂ ಮುಂದುವರಿದಿದೆ ಎಂದು ದೇಶಪಾಂಡೆ ಮೆಚ್ಚುಗೆ ವ್ಯಕ್ತಪಡಿಸಿದರು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಉಮಾನಾಥ ಕೋಟ್ಯಾನ್ ವಹಿಸಿದ್ದರು. ಸಚಿವ ಯು.ಟಿ. ಖಾದರ್ ಉಪಸ್ಥಿತರಿದ್ದರು.
ಮಿನಿ ವಿಧಾನಸೌಧಕ್ಕೆ
10 ಕೋ.ರೂ.
ಕಡಬದಲ್ಲಿ, ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ಫಲಕ ಅನಾವರಣ ನಡೆಸುವ ಮೂಲಕ ಸಚಿವ ದೇಶಪಾಂಡೆ ಅವರು ತಾಲೂಕನ್ನು ಉದ್ಘಾಟಿಸಿದರು. 10 ಕೋಟಿ ರೂ. ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಮಿನಿ ವಿಧಾನಸೌಧಕ್ಕೆ ಶಂಕುಸ್ಥಾಪನೆ ನಡೆಸಿದರು. ಬಳಿಕ ಸಮುದಾಯ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿರುವ ಕಡಬದ ಸರಕಾರಿ ಆಸ್ಪತ್ರೆಗೆ 4.85 ಕೋಟಿ ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ ನೂತನ ಕಟ್ಟಡದ ಉದ್ಘಾಟನೆ ನಡೆಯಿತು. ಹೊಸಮಠ ಮತ್ತು ಬಿಳಿನೆಲೆ-ನೆಟ್ಟಣ ನಡುವೆ ನಿರ್ಮಾಣಗೊಂಡಿರುವ ನೂತನ ಸೇತುವೆಗಳನ್ನೂ ಉದ್ಘಾಟಿಸಲಾಯಿತು.
ಆರಂಭಿಕ ಹಂತವಾಗಿ ತಾಲೂಕಿಗೆ 2 ಕೋಟಿ ರೂ. ಬಿಡುಗಡೆಯಾಗಿದೆ. ಎಲ್ಲ ಇಲಾಖೆಗಳು ಒಂದೇ ಸೂರಿನಡಿ ಬರಲು ಮಿನಿ ವಿಧಾನಸೌಧ ನಿರ್ಮಾಣಕ್ಕೆ 10 ಕೋಟಿ ರೂ. ಬಿಡುಗಡೆಯಾಗಿದೆ. ಇನ್ನೂ ಹೆಚ್ಚಿನ ಅನುದಾನ ಒದಗಿಸಲು ಸರಕಾರ ಬದ್ಧವಾಗಿದೆ. ಸ್ಥಳೀಯ ಶಾಸಕರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯ ಚಟುವಟಿಕೆಗಳನ್ನು ಮಾಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
MUST WATCH
ಹೊಸ ಸೇರ್ಪಡೆ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.