ಮಂಗಳೂರಿನ ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ: ಸಂತ್ರಸ್ತೆ-ವಕೀಲರ ಆಡಿಯೋ ವೈರಲ್
Team Udayavani, Oct 19, 2021, 10:09 AM IST
ಮಂಗಳೂರು: ಮಂಗಳೂರಿನ ಲೋಕಾಯುಕ್ತ ವಿಭಾಗದ ವಿಶೇಷ ಸರಕಾರಿ ಅಭಿಯೋಜಕ ಕೆ.ಎಸ್.ಎನ್ ರಾಜೇಶ್ ಅವರು ಕಾನೂನು ವಿದ್ಯಾರ್ಥಿನಿಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿದ್ಯಾರ್ಥಿನಿ ಕಳೆದ ಆ.8 ರಂದು ಕೆ.ಎಸ್.ಎನ್ ರಾಜೇಶ್ ಅವರ ಕರಂಗಲ್ಪಾಡಿಯ ಕಚೇರಿಯಲ್ಲಿ ತರಬೇತಿಗಾಗಿ ಸೇರಿದ್ದರು. ಆಗ ರಾಜೇಶ್ ಯುವತಿಯನ್ನು ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಳ್ಳಲು ಒತ್ತಾಯಿಸುತ್ತಿದ್ದರು. ಸೆ.25 ರಂದು ಚೇಂಬರ್ ಒಳಗೆ ಕರೆದು ಅಸಭ್ಯವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ರಾಜೇಶ್ ಲೋಕಾಯುಕ್ತದಲ್ಲಿ ದಾಖಲಾಗುವ ಭ್ರಷ್ಟಾಚಾರ ಪ್ರಕರಣಗಳಲ್ಲಿ ವಿಶೇಷ ಸರಕಾರಿ ಅಭಿಯೋಜಕರಾಗಿ ಕಳೆದ ಕೆಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು.
ಇದನ್ನೂ ಓದಿ:ಮೋದಿ ಹೆಬ್ಬೆಟ್ಟ್ ಗಿರಾಕಿ ಎಂದ ಕಾಂಗ್ರೆಸ್ ಟ್ವೀಟ್ ಗೆ ಡಿಕೆ ಶಿವಕುಮಾರ್ ವಿಷಾದ
ಎರಡು ದಿನಗಳ ಹಿಂದೆ ರಾಜೇಶ್ ಮತ್ತು ವಿದ್ಯಾರ್ಥಿನಿ ಮಾತನಾಡಿದ್ದು ಎನ್ನಲಾದ ಫೋನ್ ಕರೆಯ ಆಡಿಯೋ ಹರಿದಾಡಿತ್ತು. ಆರೋಪಗಳನ್ನು ರಾಜೇಶ್ ನಿರಾಕರಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.