ಟ್ಯಾಂಕರ್ ಗೆ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ
Team Udayavani, Jan 30, 2019, 11:52 AM IST
ತಲಪಾಡಿ: ಅನಿಲ ಸಾಗಾಟದ ಟ್ಯಾಂಕರಿನ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ತಲಪಾಡಿ ಸಮೀಪದ ಕೆ.ಸಿ ರೋಡು ಸಮೀಪ ನಡೆದಿದೆ. ಆದರೆ ಚಾಲಕನ ಸಮಯಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದೆ.
ಮಂಗಳೂರಿನ ಬೈಕಂಪಾಡಿ ಎಂಆರ್ ಪಿಎಲ್ ನಿಂದ ಕೊಯಮತ್ತೂರಿಗೆ ಅನಿಲ ಸಾಗಾಟ ನಡೆಸುತ್ತಿದ್ದ ಟ್ಯಾಂಕರ್ ನಲ್ಲಿ ಇಂಜಿನ್ ಗೆ ತಲಪಾಡಿ ಕೆ.ಸಿ.ರೋಡ್ ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಟ್ಯಾಂಕರ್ ಚಾಲಕ ಕೃಷ್ಣರಾಜ್ ತಕ್ಷಣ ಟ್ಯಾಂಕರ್ ನಿಲ್ಲಿಸಿದ್ದ, ನಂತರ ಅಗ್ನಿ ಶಾಮಕ ದಳ ಹಾಗು ಸ್ಥಳೀಯರು ಸೇರಿ ಬೆಂಕಿ ನಂದಿಸಿದ್ದಾರೆ. ಈ ಮೂಲಕ ಆಗಬಹುದಾದ ದೊಡ್ಡ ಅನಾಹುತ ತಪ್ಪಿದೆ.
ಗ್ಯಾಸ್ ಸೋರಿಕೆಯಿಂದ ಬೆಂಕಿ ಎಂದು ಗಾಬರಿಗೊಂಡ ವಾಹನ ಸವಾರರು, ಸ್ಥಳೀಯರಲ್ಲಿ ಆತಂಕದಿಂದ ರಸ್ತೆ ಪಥ ಬದಲಿಸಿದರು . ಸ್ಟಳಕ್ಕೆ ಆಗಮಿಸಿದ ಉಳ್ಳಾಲ ಪೊಲೀಸರು, ಯಾವುದೇ ಆತಂಕವಿಲ್ಲದೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಚಲಿಸಲು ಜನರಿಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.