ಅಗ್ನಿಶಾಮಕ ಸೇವಾ ಸಪ್ತಾಹ: ಸಂಸ್ಮರಣೆ ಕವಾಯತು
ಜ್ಯೋತಿ ವೃತ್ತದಿಂದ ಪಾಂಡೇಶ್ವರದವರೆಗೆ ರ‍್ಯಾಲಿ
Team Udayavani, Apr 15, 2019, 6:20 AM IST
ಪಥಸಂಚಲನದ ಮೂಲಕ ಗಣ್ಯರಿಗೆ ಗೌರವ ಸಲ್ಲಿಸುತ್ತಿರುವ ಅಗ್ನಿಶಾಮಕ ಸಿಬಂದಿ .
ಮಹಾನಗರ: ರಾಜ್ಯ ಅಗ್ನಿಶಾಮಕ ಸೇವಾ ಇಲಾಖೆಯು ಅಗ್ನಿಶಮನಕ್ಕಿಂತ ಅಗ್ನಿ ನಿವಾರಣೆ ಉತ್ತಮ ಎಂಬ ಧ್ಯೇಯ ವಾಕ್ಯದೊಂದಿಗೆ 2019ನೇ ಸಾಲಿನ ಅಗ್ನಿಶಾಮಕ ಸೇವಾ ಸಪ್ತಾಹವನ್ನು ಎ. 14ರಿಂದ 20ರ ವರೆಗೆ ನಡೆಸಲಿದ್ದು, ಇದರ ಅಂಗವಾಗಿ ವಿದ್ಯಾ ಸಂಸ್ಥೆಗಳು, ಮಾಲ್, ಹೊಟೇಲ್, ಬ್ಯಾಂಕ್ ಹಾಗೂ ಇತರ ಸ್ಥಳಗಳಲ್ಲಿ ಅಗ್ನಿನಿವಾರಣೆ ಮತ್ತು ಅಗ್ನಿಶಾಮಕದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಕರ್ತವ್ಯದ ವೇಳೆ ಮರಣ ಹೊಂದಿರುವ ಅಗ್ನಿಶಾಮಕ ಅಧಿಕಾರಿ, ಸಿಬಂದಿಯನ್ನು ನೆನಪಿಸಿಕೊಳ್ಳುವುದು ಅಗ್ನಿಶಾಮಕ ಸೇವಾ ಸಪ್ತಾಹದ ಒಂದು ಭಾಗವಾಗಿರುದರಿಂದ ಎ. 14ರಂದು ನಗರದ ಕುಂಟಿಕಾನ ಬಳಿ ಇರುವ ಕದ್ರಿ ಅಗ್ನಿಶಾಮಕ ಠಾಣೆಯ ಆವರಣದಲ್ಲಿ ಸಂಸ್ಮರಣೆ ಕವಾಯತು ನಡೆಯಿತು.
ಎ. 20ರಂದು ಬೆಳಗ್ಗೆ 8 ಗಂಟೆಗೆ ನಗರದ ಜ್ಯೋತಿ ವೃತ್ತದಿಂದ ಟೆಲಿಕಾಂ ಹೌಸ್ ರಸ್ತೆಯಲ್ಲಿರುವ ಮಂಗಳೂರು ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಆವರಣದವರೆಗೆ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮುಖ್ಯ ಅಗ್ನಿಶಾಮಕ ಅಧಿಕಾರಿ ಅವರ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.