ಗರಿಷ್ಠ ಸಂಖ್ಯೆಯ ವಿದ್ಯಾರ್ಥಿಗಳಿರುವ ಪುತ್ತೂರಿನ ಪ್ರಥಮ ಬೋರ್ಡ್‌ ಹೈಸ್ಕೂಲ್‌

103 ವರ್ಷಗಳ ಶಾಲೆಯಲ್ಲಿ ಈಗ 654 ಮಕ್ಕಳು

Team Udayavani, Nov 10, 2019, 5:00 AM IST

dd-20

19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು ಸುತ್ತಮುತ್ತಲಿನ ಊರುಗಳಿಗೆ ಅಕ್ಷರಶಃ ಜ್ಞಾನ ದೇಗುಲಗಳೇ ಆಗಿವೆ. ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ಇಂತಹ ಶತಮಾನದ ಹಿರಿಮೆಯ ಕನ್ನಡ ಮಾಧ್ಯಮ ಸರಕಾರಿ ಶಾಲೆಗಳನ್ನು ಗುರುತಿಸಿ ಪರಿಚಯಿಸುವ ಪ್ರಯತ್ನ ನಮ್ಮದು.

1916 ಶಾಲೆ ಆರಂಭ
ಸಮರ್ಪಕ ಸೌಲಭ್ಯಗಳು, ಐಟಿ ಮತ್ತು ಅಟೋಮೊಬೈಲ್‌ ಕಲಿಕೆಗೆ ಅವಕಾಶ

ಪುತ್ತೂರು: ಪುತ್ತೂರಿನ ಪ್ರಥಮ ಬೋರ್ಡ್‌ ಹೈಸ್ಕೂಲ್‌, ಪ್ರಸ್ತುತ ರಾಜ್ಯದಲ್ಲಿಯೇ ಗರಿಷ್ಠ ಸಂಖ್ಯೆಯ ವಿದ್ಯಾರ್ಥಿಗಳನ್ನು ಹೊಂದಿರುವ ಎರಡನೇ ಸರಕಾರಿ ಪ್ರೌಢಶಾಲೆ ಹೆಗ್ಗಳಿಕೆ, ಲಕ್ಷಾಂತರ ಮಂದಿಗೆ ಪ್ರೌಢ ವಿದ್ಯಾದಾನ ಮಾಡಿದ ಈಗಿನ ಕೊಂಬೆಟ್ಟು ಸ. ಪ.ಪೂ. ಕಾಲೇಜಿನ ಪ್ರೌಢಶಾಲೆಗಿದೆ.

1916 ಅಂದರೆ 103 ವರ್ಷಗಳಿಗೆ ಮೊದಲು ಈ ಭಾಗದ ಜನತೆ ಹೈಸ್ಕೂಲ್‌ ವಿದ್ಯಾಭ್ಯಾಸಕ್ಕಾಗಿ ಮಂಗಳೂರು, ಮಡಿಕೇರಿ ಅಥವಾ ದೊಡ್ಡ ಪಟ್ಟಣಗಳನ್ನು ಆಶ್ರಯಿಸಿದ್ದ ಸಂದರ್ಭದಲ್ಲಿ ಸಹೃದಯಿ ಸಾಧಕರು ಕಟ್ಟಿದ ಪುತ್ತೂರು ವಿದ್ಯಾವರ್ಧಕ ಸಂಘವು ಸ್ಥಾಪಿಸಿದ ಶಾಲೆ ಇದು. ಪೇಟೆಯ ಬಾಡಿಗೆ ಕಟ್ಟಡದಲ್ಲಿ ಜನ್ಮ ತಾಳಿದ ಶಾಲೆಯಲ್ಲಿ ಮೊದಲಿನ ವರ್ಷ 236 ವಿದ್ಯಾರ್ಥಿಗಳಿದ್ದರು ಎಂದು ತಿಳಿದುಬರುತ್ತದೆ. 1918-19ರಲ್ಲಿ ಕೊಂಬೆಟ್ಟು ಗುಡ್ಡದ ಮೇಲಿನ ಕಟ್ಟಡಕ್ಕೆ ಇದು ಸ್ಥಳಾಂತರಗೊಂಡಿತ್ತು. ಆರಂಭದಲ್ಲಿ ಪ್ರಾಥಮಿಕ ಹಾಗೂ ಮಾಧ್ಯಮಿಕ ಶಾಲೆ 1921 -22ರಲ್ಲಿ ದ.ಕ. ಜಿಲ್ಲಾ ಬೋರ್ಡಿಗೆ ಹಸ್ತಾಂತರವಾಗಿ ಪುತ್ತೂರು ಬೋರ್ಡ್‌ ಹೈಸ್ಕೂಲ್‌ ಎಂದು ಪರಿವರ್ತನೆಗೊಂಡಿತು. 1964-65ರಲ್ಲಿ 11ನೇ ತರಗತಿ ಆರಂಭವಾದಾಗ ಹೈಯರ್‌ ಸೆಕೆಂಡರಿ ಹಾಗೂ 1972ರಲ್ಲಿ 12ನೇ ತರಗತಿ ಆರಂಭವಾದಾಗ ಜೂನಿಯರ್‌ ಕಾಲೇಜು ಆಗಿ ಪರಿವರ್ತನೆಗೊಂಡಿತು.

ಸರಕಾರಕ್ಕೆ ಹಸ್ತಾಂತರ
1975ರಲ್ಲಿ ಸರಕಾರಕ್ಕೆ ವಹಿಸಿಕೊಡುವ ತನಕ ಬೋರ್ಡಿನ ಅಧೀನದಲ್ಲೇ ಇದ್ದ ಹಿನ್ನೆಲೆಯಲ್ಲಿ ಬೋರ್ಡ್‌ ಹೈಸ್ಕೂಲ್‌ ಹೆಸರಿನಲ್ಲೇ ಈ ಶಾಲೆ ಪ್ರಖ್ಯಾತವಾಯಿತು. ರಾಯ ಬಹದ್ದೂರ್‌ ಎಂ. ರಘುನಾಥ ರಾಯರು ಈ ಶಾಲೆಯ ಮೊದಲ ಮುಖ್ಯೋಪಾಧ್ಯಾಯರು. ಅನಂತರದಲ್ಲಿ ಅನೇಕ ಪ್ರಸಿದ್ಧ ಮುಖ್ಯಶಿಕ್ಷಕರು, ಶಿಕ್ಷಕರು ಈ ಶಾಲೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ

ತಾಲೂಕು ಕ್ರೀಡಾಂಗಣ
ಶಾಲೆಗೆ ಸಂಬಂಧಪಟ್ಟಂತೆ ವಿಸ್ತಾರದ ತಾಲೂಕು ಕ್ರೀಡಾಂಗಣ ದೊಡ್ಡ ಹೆಸರನ್ನು ಪಡೆದಿದೆ. ಸಾರ್ವಜನಿಕರು ಸರಕಾರ ಹಾಗೂ ತಾಲೂಕು ಅಭಿವೃದ್ಧಿ ಸಮಿತಿ ಒಟ್ಟುಗೂಡಿ 35 ಸಾವಿರ ರೂ. ವೆಚ್ಚದಲ್ಲಿ ಈ ಕ್ರೀಡಾಂಗಣವನ್ನು ನಿರ್ಮಿಸಿದ್ದಾರೆ. ಸದ್ಯಕ್ಕೆ ಕ್ರೀಡಾಂಗಣ ಯುವಜನ ಸೇವೆ ಹಾಗೂ ಕ್ರೀಡಾ ಇಲಾಖೆ ಅಧೀನದಲ್ಲಿ ತಾಲೂಕು ಕ್ರೀಡಾಂಗಣವಾಗಿ ಗುರುತಿಸಿದ್ದು, ಅದನ್ನು ಮರಳಿ ಶಾಲೆಯ ಸ್ವಾಧೀನಕ್ಕೆ ತರುವ ಪ್ರಯತ್ನಗಳು ನಡೆದಿವೆ.

ಆರಂಭದಲ್ಲಿ 236 ವಿದ್ಯಾರ್ಥಿಗಳಿದ್ದ ಶಾಲೆ ಬೆಳ್ಳಿಹಬ್ಬವನ್ನು ಆಚರಿಸುವ ಸಮಯಕ್ಕೆ 400, ಸುವರ್ಣ ಮಹೋತ್ಸವವನ್ನು ಆಚರಿಸುವ ಸಮಯಕ್ಕೆ 800ನ್ನು ಮುಟ್ಟಿತ್ತು. 16 ವರ್ಷಗಳ ಹಿಂದೆ ಈ ಶಾಲೆಯಲ್ಲಿ 2 ಸಾವಿರ ವಿದ್ಯಾರ್ಥಿಗಳು ಎ ಯಿಂದ ಎಚ್‌ ಸೆಕ್ಷನ್‌ ತನಕ ವಿದ್ಯಾಭ್ಯಾಸ ಮಾಡುತ್ತಿದ್ದರು. ಈಗ ಶಾಲೆಯ 8-10 ಪ್ರೌಢಶಾಲಾ ವಿಭಾಗದಲ್ಲಿ 654 ವಿದ್ಯಾರ್ಥಿಗಳು ಹಾಗೂ 16 ಮಂದಿ ಶಿಕ್ಷಕರಿದ್ದಾರೆ.

ಆಗಬೇಕಾಗಿರುವುದು ಏನು?
ಶಾಲೆಯ ಆವರಣಕ್ಕೆ ಸಮರ್ಪಕ ಕಾಂಪೌಂಡ್‌ ನಿರ್ಮಾಣ ಆಗಬೇಕು. ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರ ಕೊರತೆಯನ್ನು ನೀಗಿಸಬೇಕು. ಒಂದು ಭಾಗದ ಕಟ್ಟಡದಲ್ಲಿ ಬಿರುಕು ಬಿಟ್ಟಿದೆ. 650 ಮಕ್ಕಳು ಕುಳಿತುಕೊಳ್ಳುವ ಸಾಮರ್ಥ್ಯದ ಸಭಾಂಗಣ ಆಗಬೇಕು, ಹೆಚ್ಚುವರಿ ಶೌಚಾಲಯ ವ್ಯವಸ್ಥೆ ಬೇಕು ಎನ್ನುವುದು ಇಲ್ಲಿನ ಪ್ರಮುಖ ಬೇಡಿಕೆ.

ಹಂಪಿ ಕನ್ನಡ ವಿವಿ ವಿಶ್ರಾಂತ ಉಪಕುಲಪತಿ, ಶ್ರೇಷ್ಠ ವಿದ್ವಾಂಸ ಡಾ| ಬಿ.ಎ. ವಿವೇಕ್‌ ರೈ, ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯರಂತಹ ಸಾಧಕರೊಂದಿಗೆ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ ಗೋವಿಂದ ಭಟ್‌, ಸ್ವರ್ಣೋದ್ಯಮಿ ಜಿ.ಎಲ್‌. ಆಚಾರ್ಯ, ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕ ಎನ್‌. ಮುತ್ತಪ್ಪ ರೈ ಸಹಿತ ಈ ಭಾಗದ ಅನೇಕ ಸಾಧಕರು, ಗಣ್ಯರು ಬೋರ್ಡ್‌ ಹೈಸ್ಕೂಲ್‌ನಲ್ಲಿ ಶಿಕ್ಷಣ ಪಡೆದವರು.

ಪಾರಂಪರಿಕ ಕಟ್ಟಡ
ಪುತ್ತೂರು ಪರಿಸರದ ನೂರಕ್ಕೂ ಹೆಚ್ಚು ಗ್ರಾಮಗಳಿಗೆ ಏಕೈಕ ವಿದ್ಯಾಕೇಂದ್ರವಾಗಿದ್ದ ಶಾಲೆಯ ಕಟ್ಟಡ ಸಾಂಪ್ರದಾಯಿಕ ವಿಶಿಷ್ಟ ವಿನ್ಯಾಸವು ಪಾರಂಪರಿಕೆ ಮಹತ್ವ ಪಡೆದಿದ್ದು, ಜಿಲ್ಲಾ ಪ್ರವಾಸೋದ್ಯಮ ಸಮಿತಿಯು ಪಾರಂಪರಿಕೆ ಕಟ್ಟಡ ಗೌರವವನ್ನು ನೀಡಿ ಫಲಕವನ್ನು ಅಳವಡಿಸಿದೆ.

ಪೊಲೀಸ್‌ ಕೆಡೆಟ್‌: ಹೆಗ್ಗಳಿಕೆ
ಶಾಲೆ ಅಕ್ಷರ ದಾಸೋಹ, ಪ್ರಥಮ ಸರಕಾರಿ ಶಾಲೆಯ ಅಟಲ್‌ ಟಿಂಕರಿಂಗ್‌ ಲ್ಯಾಬ್‌, ಶೌಚಾಲಯ ಸಹಿತ ಎಲ್ಲ ವ್ಯವಸ್ಥೆಗಳನ್ನು ಒಳಗೊಂಡಿದೆ. ಐಟಿ ಮತ್ತು ಅಟೋಮೊಬೈಲ್‌ ವಿಷಯವನ್ನು ಐಚ್ಛಿಕವಾಗಿ ಕಲಿಯುವ ಅವಕಾಶ ಇಲ್ಲಿನ ವಿಶೇಷ. ಇಲಾಖೆಗಳಿಂದ ನಡೆಯುವ ವಿವಿಧ ಇಲಾಖೆ ಪರೀಕ್ಷೆಗಳಿಗೆ ಈ ಶಾಲೆ ಕೇಂದ್ರವಾಗಿದೆ. ಪುತ್ತೂರಿನ ಪ್ರಥಮ ಸ್ಟೂಡೆಂಟ್‌ ಪೊಲೀಸ್‌ ಕೆಡೆಟ್‌ ಆರಂಭಿಸಿದ ಹೆಗ್ಗಳಿಕೆ, ಎನ್‌ಸಿಸಿ ವ್ಯವಸ್ಥೆ ಶಾಲೆಯಲ್ಲಿದೆ. ಸತತ 7 ವರ್ಷಗಳಿಂದ ಎಸೆಸೆಲ್ಸಿಯಲ್ಲಿ ಇಲ್ಲಿನ ವಿದ್ಯಾರ್ಥಿಗಳು ಜಿಲ್ಲೆಯ ಸರಕಾರಿ ಪ್ರೌಢ ಶಾಲೆಗಳಲ್ಲೇ ಪ್ರಥಮ ಸ್ಥಾನವನ್ನು ಪಡೆಯುತ್ತಿದ್ದಾರೆ. ಹಲವು ವರ್ಷಗಳ ಹಿಂದೆಯೇ ಆಂಗ್ಲ ಮಾಧ್ಯಮವನ್ನು ಆರಂಭಿಸಿದ ಹೆಗ್ಗಳಿಕೆಯನ್ನು ಈ ಶಾಲೆ ಹೊಂದಿದೆ.

ಅನೇಕ ಪ್ರಥಮಗಳ ಹೆಗ್ಗಳಿಕೆಯನ್ನು ಹೊಂದಿದ ಕೊಂಬೆಟ್ಟು ಬೋರ್ಡ್‌ ಹೈಸ್ಕೂಲ್‌, ಈಗಿನ ಸರಕಾರಿ ಪ್ರೌಢಶಾಲೆ ಎಲ್ಲ ರೀತಿಯ ಸೌಕರ್ಯಗಳನ್ನು ಹೊಂದಿದೆ. ರಾಜ್ಯದಲ್ಲಿಯೇ ದ್ವಿತೀಯ ದೊಡ್ಡ ಸರಕಾರಿ ಪ್ರೌಢಶಾಲೆ ಎಂಬ ಹೆಗ್ಗಳಿಕೆಯನ್ನು ಹೊಂದಿದೆ. ಒಂದಷ್ಟು ಸೌಕರ್ಯ, ಶಿಕ್ಷಕರ ನೇಮಕಾತಿ ಆಗಬೇಕಿದೆ.
-ಮರ್ಸಿ ಮಮತಾ ಮೋನಿಸ್‌
ಮುಖ್ಯ ಶಿಕ್ಷಕರು, ಕೊಂಬೆಟ್ಟು ಸರಕಾರಿ ಪ್ರೌಢಶಾಲೆ

ಶತಮಾನದ ಶಾಲೆ ಹೆಗ್ಗಳಿಕೆಯ ಕೊಂಬೆಟ್ಟು ಶಾಲೆ ಅದೇ ರೀತಿಯ ಸಾಧನೆಗಳೊಂದಿಗೆ ಗುರುತಿಸಿಕೊಂಡಿದೆ. ಇಲ್ಲಿನ ಅನೇಕ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಸಾಧಕರಾಗಿ ಗುರುತಿಸಿಕೊಮಡವರು ಹಾಗೂ ಗುರುತಿಸಿಕೊಳ್ಳುತ್ತಿದ್ದಾರೆ. ಶಾಲೆ ಹಾಗೂ ವಿದ್ಯಾರ್ಥಿಗಳ ಪ್ರಗತಿಯ ನಿಟ್ಟಿನಲ್ಲಿ ಪೂರಕ ಪ್ರಗತಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

-ಪಿ.ಜಿ. ಜಗನ್ನಿವಾಸ್‌ ರಾವ್‌
ಎಸ್‌ಡಿಎಂಸಿ ಕಾರ್ಯಾಧ್ಯಕ್ಷರು ಹಾಗೂ ಹಿರಿಯ ವಿದ್ಯಾರ್ಥಿ

– ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿVijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

PAK Vs SA: ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEW-SCHOOL

ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜಿಲ್ಲೆಯ ಮೊದಲ ಕ್ರಿಶ್ಚಿಯನ್‌ ಪ್ರೌಢಶಾಲೆಗೆ 121ರ ಸಂಭ್ರಮ

430514561342IMG-20191203-WA0023

ಅನಂತೇಶ್ವರ ದೇಗುಲದ ಪೌಳಿಯಲ್ಲಿ ಪ್ರಾರಂಭವಾದ ಶಾಲೆಗೆ 128ರ ಸಂಭ್ರಮ

sx-22

ಸ್ವಾತಂತ್ರ್ಯಹೋರಾಟಗಾರರನ್ನು ನೀಡಿದ ಶಾಲೆಗೆ 111 ವರ್ಷಗಳ ಸಂಭ್ರಮ

ds-24

112 ವರ್ಷ ಕಂಡಿರುವ ಮೂಡುಬಿದಿರೆಯ ಡಿ.ಜೆ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ

ds-35

ಮನೆಯ ಚಾವಡಿಯಲ್ಲಿ ಪ್ರಾರಂಭಗೊಂಡಿದ್ದ ಶಾಲೆಗೆ 105ರ ಸಂಭ್ರಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

aane

Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿVijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.