ಮುಳುಗಿದ ಹೊಸ್ಮಠ ಸೇತುವೆ
Team Udayavani, Jul 21, 2017, 8:05 AM IST
ಕಡಬ: ಘಟ್ಟದ ಮೇಲೆ ನಿರಂತರವಾಗಿ ಸುರಿದ ಮಳೆಯಿಂದಾಗಿ ಗುಂಡ್ಯ ಹೊಳೆಯಲ್ಲಿ ನೆರೆ ನೀರಿನ ಮಟ್ಟ ಏರಿಕೆಯಾಗಿದ್ದು, ಗುರು ವಾರ ಮಧ್ಯಾಹ್ನ ಸುಮಾರು 2 ತಾಸು ಕಡಬ ಸಮೀಪದ ಹೊಸ್ಮಠ ಸೇತುವೆ ನೀರಿನಲ್ಲಿ ಮುಳುಗಡೆಯಾಗಿ ಕಡಬದ ಮೂಲಕ ಹಾದು ಹೋಗುವ ಉಪ್ಪಿ ನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಯಲ್ಲಿ ವಾಹನ ಸಂಚಾರ ವ್ಯತ್ಯಯಗೊಂಡಿತು.
ಉಪ್ಪಿನಂಗಡಿಯಿಂದ ಕಡಬ ಮೂಲಕ ಸುಬ್ರಹ್ಮಣ್ಯಕ್ಕೆ ಸಂಚರಿಸ ಬೇಕಾದ ವಾಹನ ಗಳು ನೆಲ್ಯಾಡಿ, ಇಚ್ಲಂ ಪಾಡಿ ಮೂಲಕ ಬಳಸು ದಾರಿಯಲ್ಲಿ ಸಾಗಬೇಕಾಯಿತು. ಅಪರಾಹ್ನ 2.30ರ ವೇಳೆಗೆ ನೆರೆ ನೀರು ಸೇತುವೆಯ ಮೇಲಿ ನಿಂದ ಇಳಿದ ಬಳಿಕ ವಾಹನ ಸಂಚಾರ ಸುಗಮಗೊಂಡಿತು. ಆದರೆ ಹೊಳೆಯ ನೀರು ಸೇತುವೆಗೆ ತಾಗುತ್ತಿದ್ದು, ಮತ್ತೆ ಯಾವುದೇ ಕ್ಷಣದಲ್ಲಿ ಸೇತುವೆಯ ಮೇಲೆ ನೆರೆನೀರು ಬರುವ ಸಾಧ್ಯತೆಗಳಿವೆ.
ಈ ವರ್ಷ ಪ್ರಥಮ ಮುಳುಗಡೆ
ಕಳೆದ ಹಲವು ವರ್ಷಗಳಿಂದ ಮಳೆಗಾಲದಲ್ಲಿ ಹೊಸ್ಮಠ ಮುಳುಗು ಸೇತುವೆ ನೆರೆ ನೀರಿನಲ್ಲಿ ಮುಳುಗಡೆಯಾಗಿ ಉಪ್ಪಿನಂಗಡಿ-ಕಡಬ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರು ತೊಂದರೆ ಅನುಭವಿಸುತ್ತಲೇ ಬಂದಿದ್ದಾರೆ. ಈ ವರ್ಷದ ಮಳೆಗಾಲದಲ್ಲಿ ಹೊಸ್ಮಠ ಸೇತುವೆಗೆ ಇದು ಪ್ರಥಮ ಮುಳುಗಡೆ.
ಹೊಸ ಸೇತುವೆ ಅಪೂರ್ಣ
ಹೊಸಮಠದಲ್ಲಿ ನೂತನ ಸೇತುವೆ ನಿರ್ಮಾಣಕ್ಕಾಗಿ 7 ಕೋಟಿ 50 ಲಕ್ಷ ರೂ. ಬಿಡುಗಡೆಯಾಗಿ ಕಾಮಗಾರಿ ಪ್ರಗತಿಯಲ್ಲಿದೆ. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದಡಿಯಲ್ಲಿ ಅನುದಾನ ಮಂಜೂರಾಗಿದ್ದು ಕಾಮಗಾರಿ ನಡೆಯುತ್ತಿದೆ. ಈಗ ಇರುವ ಸೇತುವೆಗಿಂತ ಎತ್ತರದಲ್ಲಿ ಹೊಸ ಸೇತುವೆ ನಿರ್ಮಾಣವಾಗಿದೆ. 125 ಮೀ. ಉದ್ದ ಹಾಗೂ 12 ಮೀ. ಅಗಲದಲ್ಲಿ ತಡೆಬೇಲಿಯನ್ನೊಳಗೊಂಡ 6 ಪಿಲ್ಲರ್‌ಗಳ ಸುಂದರ ಸೇತುವೆ ನಿರ್ಮಾಣಗೊಂಡು ಸಾರ್ವಜನಿಕರ ಉಪ ಯೋಗಕ್ಕೆ ತೆರೆದುಕೊಳ್ಳಲಿದೆ. ಪ್ರಸ್ತುತ ಇರುವ ಸೇತುವೆಯನ್ನು ಹಾಗೆಯೇ ಉಳಿಸಿ ಕೊಂಡು ಸಂಚಾರಕ್ಕೆ ತೊಂದರೆ ಯಾಗದ ರೀತಿಯಲ್ಲಿ ಸೇತುವೆ ನಿರ್ಮಾಣ ಕಾಮಗಾರಿ ನಡೆಸಲಾಗಿದೆ. ಆದರೆ ಕಾಮಗಾರಿ ಪೂರ್ತಿಯಾಗಿಲ್ಲ. ಹೊಸ ಸೇತುವೆಯ ಎರಡೂ ಬದಿಗಳಲ್ಲಿ ಸಂಪರ್ಕ ರಸ್ತೆ ನಿರ್ಮಾಣದ ಕೆಲಸವೂ ಆಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
Sulya: ನಿಲ್ಲಿಸಿದ್ದ ಕಾರಿಗೆ ಬಸ್ ಢಿಕ್ಕಿ; ಜಖಂ
Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್ ಕೇಬಲ್ ಕಳವು
Sulya: ಆರಂತೋಡು: ಚಿಕನ್ ಸೆಂಟರ್‌ಗೆ ದಾಳಿ; ಮದ್ಯ ಅಕ್ರಮ ದಾಸ್ತಾನು ಪತ್ತೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.