![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 8, 2019, 2:31 PM IST
ಬಂಟ್ವಾಳ: ಪಶ್ಚಿಮಘಟ್ಟ ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದ ಜೀವನದಿ ನೇತ್ರಾವತಿಯಲ್ಲಿ ನೀರಿನ ಮಟ್ಟ ಗುರುವಾರ ಏಕಾಏಕಿ ಹೆಚ್ಚಾಗಿದೆ. ಸದ್ಯಕ್ಕೆ ತುಂಬೆಯಲ್ಲಿ ನೇತ್ರಾವತಿ ನದಿ ನೀರಿನ ಮಟ್ಟ 8.7 ಮೀಟರ್ ಗಳಷ್ಟಿದೆ. ಇಲ್ಲಿ ನದಿಯ ಅಪಾಯದ ಮಟ್ಟ 9 ಮೀಟರ್ ಗಳಾಗಿದೆ.
ನೇತ್ರಾವತಿ ನೆರೆಯಿಂದಾಗಿ ಬಂಟ್ವಾಳ ನಗರ ಸೇರಿದಂತೆ ಅಜಿಲಮೊಗರು, ಸರಪಾಡಿ, ಕಡೇಶಿವಾಲಯ, ಬರಿಮಾರು, ನಾವೂರು, ನರಿಕೊಂಬು, ತುಂಬೆ ಮೊದಲಾದ ಗ್ರಾಮಗಳ ತಗ್ಗು ಪ್ರದೇಶಗಳು ಜಲಾವೃತವಾಗಿದೆ.
ಬಹುತೇಕ ಕಡೆ ಅಡಿಕೆ ತೋಟ, ಭತ್ತದ ಗದ್ದೆಗಳಿಗೆ ನೀರು ನುಗ್ಗಿದೆ. ಕೆಲವೊಂದೆಡೆ ರಸ್ತೆಗಳಲ್ಲಿ ನೀರು ನಿಂತಿದೆ. ನೆರೆಬಾಧಿತ ಪ್ರದೇಶ ಪಾಣೆಮಂಗಳೂರಿನ ಆಲಡ್ಕದಲ್ಲಿ ಸುಮಾರು 15 ಮನೆಗಳ ನಿವಾಸಿಗಳನ್ನು ಈಗಾಗಲೇ ಸುರಕ್ಷಿತ ಭಾಗಗಳಿಗೆ ಸ್ಥಳಾಂತರ ಮಾಡಲಾಗಿದೆ.
ಜಕ್ರಿಬೆಟ್ಟು, ಕಂಚಿಗಾರಪೇಟೆ, ಆಲಡ್ಕ, ಅಜಿಲಮೊಗರು, ಸರಪಾಡಿ ಭಾಗಗಳಲ್ಲಿ ನದಿ ನೀರು ರಸ್ತೆಗೆ ಬಂದ ಕಾರಣ ಈ ಭಾಗಗಳಲ್ಲಿ ವಾಹನ ಮತ್ತು ಜನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.