ಅಪಾಯಕರ ಕಾಲುಸಂಕ ಪಟ್ಟಿ ಸಿದ್ಧ; ಮಳೆಗಾಲಕ್ಕೆ ಮುನ್ನ ಪರ್ಯಾಯ ವ್ಯವಸ್ಥೆಗೆ ಸಿದ್ಧತೆ

Team Udayavani, Nov 28, 2022, 7:13 AM IST

ಅಪಾಯಕರ ಕಾಲುಸಂಕ ಪಟ್ಟಿ ಸಿದ್ಧ; ಮಳೆಗಾಲಕ್ಕೆ ಮುನ್ನ ಪರ್ಯಾಯ ವ್ಯವಸ್ಥೆಗೆ ಸಿದ್ಧತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 55 ಕಾಲುಸಂಕಗಳು ಅಪಾಯಕರ ಸ್ಥಿತಿಯಲ್ಲಿವೆ, ಕಾಲು ಸಂಕಗಳನ್ನು ಒಟ್ಟು 3,136 ವಿದ್ಯಾರ್ಥಿಗಳು ಉಪಯೋಗಿಸುತ್ತಿದ್ದಾರೆ.

ಕಳೆದ ಆಗಸ್ಟ್‌ನಲ್ಲಿ ಭಾರೀ ಮಳೆಯ ಸಂದರ್ಭ ಬೈಂದೂರಿನ ಬೀಜಮಕ್ಕಿಯಲ್ಲಿ ವಿದ್ಯಾರ್ಥಿನಿ ಸನ್ನಿಧಿ ಕಾಲುಸಂಕದಿಂದ ಜಾರಿಬಿದ್ದು ಮೃತಪಟ್ಟ ಹಿನ್ನೆಲೆಯಲ್ಲಿ ಸರಕಾರ ವಿವಿಧ ಜಿಲ್ಲೆಗಳಲ್ಲಿರುವ ಕಾಲುಸಂಕಗಳನ್ನು ಪಟ್ಟಿ ಮಾಡುವಂತೆ ಶಿಕ್ಷಣ ಇಲಾಖೆ ಹಾಗೂ ತಾ.ಪಂ. ಮುಖ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿತ್ತು.

ಎರಡು ತಿಂಗಳುಗಳಲ್ಲಿ ಸಮೀಕ್ಷೆಯನ್ನು ಪೂರ್ಣ ಗೊಳಿಸಲಾಗಿದೆ. ತಿಂಗಳ ಹಿಂದೆಯೇ ಸಮೀಕ್ಷೆ ನಡೆಸಲಾಗಿದ್ದರೂ ಮಾಹಿತಿ ಸರಿ ಇಲ್ಲ ಎಂಬ ಕಾರಣಕ್ಕೆ ಮರು ಸಮೀಕ್ಷೆ ನಡೆಸಲಾಗಿತ್ತು.

ಈ ಕುರಿತು ಉದಯವಾಣಿಗೆ ಲಭ್ಯ ಮಾಹಿತಿಯಂತೆ ಜಿಲ್ಲೆಯಲ್ಲಿ ಒಟ್ಟು 338 ಕಾಲು ಸಂಕಗಳಿವೆ.

ಇದರಲ್ಲಿ 227ರಷ್ಟು ಮರದ ಸಂಕಗಳು. 111 ಇತರ ಸಂಕಗಳು. ಹಿಡಿದುಕೊಳ್ಳಲು ಆಧಾರ ಇರುವಂತಹ ಕಾಲುಸಂಕಗಳು 290. ಆಧಾರ ಇಲ್ಲದವು 48 ಇವೆ. 283 ಸಂಕಗಳು ಸದೃಢವಾಗಿದ್ದರೆ 55 ಸದೃಢವಲ್ಲ.

ಪುತ್ತೂರಿನಲ್ಲಿ ಅತ್ಯಧಿಕ
ಜಿಲ್ಲೆಯಲ್ಲಿ ಕಾಲಸಂಕಗಳು ಅತ್ಯಧಿಕ ಇರುವುದು ಪುತ್ತೂರು ತಾಲೂಕಿನಲ್ಲಿ, 2ನೇ ಸ್ಥಾನದಲ್ಲಿ ಬೆಳ್ತಂಗಡಿ ಇದೆ. ಅಚ್ಚರಿ ಎಂದರೆ ಪುತ್ತೂರು ತಾಲೂಕಿನಲ್ಲಿ ಇರುವ ಎಲ್ಲ 156 ಕಾಲುಸಂಕಗಳೂ ಮರದ್ದೇ ಆಗಿವೆ ಎನ್ನುತ್ತದೆ ಸಮೀಕ್ಷೆ. ಈ ಸಂಕಗಳನ್ನು 2,182 ವಿದ್ಯಾರ್ಥಿಗಳು ಬಳಸುತ್ತಾರೆ.

ಬೆಳ್ತಂಗಡಿ ತಾಲೂಕಿನಲ್ಲಿ 43 ಮರದ ಹಾಗೂ 45 ಇತರ ಕಾಲುಸಂಕಗಳಿವೆ. ಆಧಾರ ಇಲ್ಲದ ಕಾಲು ಸಂಕಗಳು 37. ಕನಿಷ್ಠ ಕಾಲುಸಂಕ ಇರುವುದು ಮಂಗ ಳೂರು ನಗರ ಉತ್ತರದಲ್ಲಿ. ಇಲ್ಲಿ ಕೇವಲ 2 ಮರದ ಹಾಗೂ ಒಂದು ಕಾಂಕ್ರೀಟ್‌ ಕಾಲುಸಂಕ ಇದೆ.

ಬಹುತೇಕ ಮರದ ಕಾಲುಸಂಕಗಳನ್ನು ಸ್ಥಳೀ ಯರೇ ನಿರ್ಮಿಸಿರುತ್ತಾರೆ, ಅನೇಕ ಕಾಂಕ್ರೀಟ್‌ ಕಾಲು ಸಂಕಗಳನ್ನು 5 ವರ್ಷ ಹಿಂದೆ ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಿಸಲಾಗಿತ್ತು.

ಹಿಂದಿನ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಈ ಮಾಹಿತಿ ಸಂಗ್ರಹಕ್ಕೆ ಸೂಚಿಸಿದ್ದರು. ಪ್ರಸ್ತುತ ಜಿ.ಪಂ. ನಿಂದ ಮುಂದಿನ ಮಳೆಗಾಲದೊಳಗೆ ಅಪಾಯ ಕಾರಿ ಕಾಲುಸಂಕ ಸುಧಾರಣೆ ಬಗ್ಗೆ ವರದಿ ಕೇಳಲಾಗಿದೆ.

ಗ್ರಾಮಬಂಧು ಯೋಜನೆ
ಇಷ್ಟೇ ಅಲ್ಲದೆ ಲೋಕೋಪಯೋಗಿ ಇಲಾಖೆ ಮುಖಾಂತರ ಯಾವೆಲ್ಲ ಕಡೆಗಳಲ್ಲಿ ಕಾಲುಸಂಕ ಇಲ್ಲವೋ ಅಲ್ಲಿ ಸಂಕ ನಿರ್ಮಾಣವನ್ನು “ಗ್ರಾಮಬಂಧು’ ಯೋಜನೆಯಡಿ ಕೈಗೆತ್ತಿ ಕೊಳ್ಳಲಾಗಿದೆ. 33.65 ಕೋಟಿ ರೂ. ಮೊತ್ತದ ಈ ಯೋಜನೆ ಯಡಿ 234 ಕಾಲುಸಂಕ ಆಯ್ಕೆ ಮಾಡಿಕೊಳ್ಳಲಾಗಿದೆ. 60 ಪೂರ್ಣಗೊಂಡಿದ್ದರೆ 167 ಪ್ರಗತಿಯಲ್ಲಿವೆ. ಇನ್ನೂ 7 ವಿವಿಧ ಹಂತಗಳಲ್ಲಿವೆ ಎಂದು ದ.ಕ. ಜಿಲ್ಲಾ ಲೋಕೋಪಯೋಗಿ ಕಾರ್ಯಪಾಲಕ ಎಂಜಿನಿಯರ್‌ ಯಶವಂತ್‌ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲೆಷ್ಟು?
ಉಡುಪಿ ಜಿಲ್ಲೆಯಲ್ಲಿ ಕಾಲುಸಂಕ ಆವಶ್ಯಕತೆ ಹಿನ್ನೆಲೆಯಲ್ಲಿ ಗ್ರಾ.ಪಂ.ಗಳಲ್ಲಿ ವಿಶೇಷ ಗ್ರಾಮ ಸಭೆ ನಡೆಸಿ ಶಿಫಾರಸು ಪಡೆಯಲಾಗಿತ್ತು. ಮನ ರೇಗಾ ಯೋಜನೆಯೊಳಗೆ ಕಾಲುಸಂಕಗಳ ಕ್ರಿಯಾ ಯೋಜನೆಯನ್ನೂ ಸೇರಿಸಿ ಅನುಮೋದನೆ ಪಡೆಯ ಲಾಗಿದೆ. ಕೆಲಸ ಶೀಘ್ರ ಆರಂಭವಾಗಲಿದೆ ಎಂದು ಉಡುಪಿ ಜಿ.ಪಂ. ಸಿಇಒ ಪ್ರಸನ್ನ ಹೇಳಿದ್ದಾರೆ.

ಜಿಲ್ಲೆಯಲ್ಲಿನ ಕಾಲುಸಂಕಗಳ ಪಟ್ಟಿ ಮಾಡಲಾಗಿದೆ. ಇದರಲ್ಲಿ ಒಂದಷ್ಟು ಅಪಾಯಕಾರಿ ಕಾಲುಸಂಕ ಗಳೂ ಇವೆ. ಅವುಗಳಿಗೆ ಪರ್ಯಾಯ ವೇನು ಎಂಬ ಬಗ್ಗೆ ವರದಿ ಕೇಳಲಾಗಿದೆ, ಮುಂದಿನ ಮಳೆಗಾಲದೊಳಗೆ ಕ್ರಮ ಕೈಗೊಳ್ಳು ವಂತೆ ಎಂಜಿನಿಯರಿಂಗ್‌ ವಿಭಾಗಕ್ಕೆ ಸೂಚಿಸಲಾಗಿದೆ.
-ಡಾ| ಕುಮಾರ್‌, ಸಿಇಒ, ದ.ಕ. ಜಿ.ಪಂ.

-ವೇಣುವಿನೋದ್‌ ಕೆ.ಎಸ್‌.

ಟಾಪ್ ನ್ಯೂಸ್

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.