DK: ತ್ಯಾಜ್ಯ ಸಮಸ್ಯೆಗೆ ದ.ಕ. ಜಿಲ್ಲಾಡಳಿತದ ಪರಿಹಾರ ಯೋಜನೆ
ನಗರ ಸ್ಥಳೀಯ ಸಂಸ್ಥೆಯಲ್ಲೂ ಎಂಆರ್‌ಎಫ್ ಘಟಕ
Team Udayavani, Oct 1, 2023, 2:21 AM IST
ಮಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ತ್ಯಾಜ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಉದ್ಯುಕ್ತವಾಗಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತವು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಮಗ್ರ ಘನ ತ್ಯಾಜ್ಯ ನಿರ್ವಹಣ ಕೇಂದ್ರ (ಮೆಟೀರಿಯಲ್ ರಿಕವರಿ ಫೆಸಿಲಿಟಿ-ಎಂಆರ್‌ಎಫ್) ಘಟಕ ಗಳನ್ನು ನಿರ್ಮಿಸಲು ಮುಂದಾಗಿದೆ.
ಗ್ರಾಮೀಣಾಭಿವೃದ್ಧಿ ಇಲಾಖೆ ಯಡಿ ಎಂಆರ್‌ಎಫ್ ಘಟಕ ಜಿಲ್ಲೆಯ ಎಡಪದವಿನಲ್ಲಿ ಈಗಾ ಗಲೇ ಕಾರ್ಯಾ ಚರಿಸುತ್ತಿದೆ. ಬಂಟ್ವಾಳ, ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕುಗಳಲ್ಲಿಯೂ ಸಿದ್ಧವಾಗು ತ್ತಿದ್ದು ಶೀಘ್ರ ಕಾರ್ಯಾ ರಂಭಿಸಲಿವೆ. ಆದರೆ ಪೌರಾಡಳಿತ ಇಲಾಖೆ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಯ ಯಾವುದೇ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಘಟಕಗಳಿಲ್ಲ.
ಮಂಗಳೂರು ನಗರಕ್ಕೆ ಹತ್ತಿರವಿರುವ ನಗರ ಸ್ಥಳೀಯ ಸಂಸ್ಥೆ ಗಳಲ್ಲಿ ಸಂಗ್ರಹಿಸಲಾದ ತ್ಯಾಜ್ಯವನ್ನು ಮಹಾನಗರ ಪಾಲಿಕೆಯ ಪಚ್ಚನಾಡಿ ತಾಜ್ಯ ವಿಲೇವಾರಿ ಘಟಕಕ್ಕೆ ಸಾಗಿಸಲಾಗುತ್ತಿದೆ. ಉಳ್ಳಾಲ ನಗರಸಭೆ, ಸೋಮೇಶ್ವರ ಪುರಸಭೆ, ಕೋಟೆಕಾರು ಪಟ್ಟಣ ಪಂಚಾಯತ್‌ಗಳಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಗಳ ರಚನೆಯಾಗಿಲ್ಲ. ಪ್ರಯತ್ನ ನಡೆಯು ತ್ತಿದ್ದರೂ ಜಮೀನು ಅಂತಿಮವಾಗಿಲ್ಲ. ಇದು ತಾಜ್ಯ ವಿಲೇವಾರಿ ಪ್ರಕ್ರಿಯೆಗೆ ಅಡ್ಡಿಯಾಗಿದ್ದು, ಮನೆ, ಅಂಗಡಿ, ಹೊಟೇಲ್‌ಗಳ ತ್ಯಾಜ್ಯ ರಸ್ತೆ ಬದಿಯಲ್ಲಿ ಸಂಗ್ರಹಗೊಂಡು ನಗರದ ಸೌಂದರ್ಯಕ್ಕೆ ಅಡ್ಡಿಯಾಗಿದೆ.
ಆದ್ದರಿಂದ ತ್ಯಾಜ್ಯ ವಿಲೇ ವಾರಿ ಮೂಲಕ ಕಸದ ಸಮಸ್ಯೆಯನ್ನು ಸ್ವಲ್ಪ ಮಟ್ಟಿಗೆ ನಿವಾರಿಸಲು ಉದ್ದೇಶಿ ಸಲಾಗಿದೆ. ಆ ಹಿನ್ನೆಲೆಯಲ್ಲಿ ಕಾರ್ಕಳ ನಿಟ್ಟೆಯಲ್ಲಿರುವ ಯಶಸ್ವಿಯಾಗಿ ಕಾರ್ಯಾಚರಿಸುತ್ತಿರುವ ರಾಜ್ಯದ ಮೊದಲ ಎಂಆರ್‌ಎಫ್ ಘಟಕಕ್ಕೆ ಅಧಿಕಾರಿಗಳು, ಎಂಜಿನಿಯರ್‌ಗಳು ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಬಳಿಕ ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯತ್‌ಗಳಲ್ಲಿ ಸಂಗ್ರಹವಾಗುವ ತಾಜ್ಯದ ಪ್ರಮಾಣಕ್ಕೆ ಅನುಗುಣವಾಗಿ ಘಟಕ ನಿರ್ಮಾಣವಾಗಲಿದೆ.
ಉಡುಪಿ ನಗರಸಭೆ ವ್ಯಾಪ್ತಿಯಲ್ಲಿದೆ
ಉಡುಪಿ ಜಿಲ್ಲೆಯಲ್ಲಿ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಈಗಾಗಲೇ ಮಿನಿ ಎಂಆರ್‌ಎಫ್‌ಗಳನ್ನು ನಿರ್ಮಿಸಿ ಘನ ತ್ಯಾಜ್ಯವನ್ನು ವ್ಯವಸ್ಥಿತವಾಗಿ ವಿಲೇವಾರಿ ಮಾಡಲಾಗುತ್ತಿದೆ. ಪ್ರಸ್ತುತ ಸ್ವಸಹಾಯ ಸಂಘಗಳ ಮೂಲಕ 7 ಘಟಕಗಳು ಕಾರ್ಯಾಚರಿಸುತ್ತಿವೆ. ಉಡುಪಿ ನಗರಸಭೆ ಹೊರತು ಪಡಿಸಿ ಬೇರೆ ಪುರಸಭೆ, ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಎಂಆರ್‌ಎಫ್ ಘಟಕಗಳಿಲ್ಲ ಎಂದು ಪೌರಾಯುಕ್ತ ರಾಯಪ್ಪ “ಉದಯವಾಣಿ’ಗೆ ತಿಳಿಸಿದ್ದಾರೆ.
ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಎಂಆರ್‌ಎಫ್ ಘಟಕಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಈಗಾಗಲೇ ಕಾರ್ಕಳ ನಿಟ್ಟೆಯಲ್ಲಿ ಕಾರ್ಯಾಚರಿಸುತ್ತಿರುವ ಘಟಕ್ಕೆ ಎಂಜಿನಿಯರ್‌ಗಳು, ಅಧಿಕಾರಿಗಳು ಭೇಟಿ ನೀಡಿ ಕಾರ್ಯಾಚರಣೆಯನ್ನು ಅವಲೋಕಿಸಲಿದ್ದಾರೆ. ಜಾಗದ ಲಭ್ಯತೆ, ಅನುದಾನ ಮೊದಲಾದವುಗಳನ್ನು ಅವಲಂಬಿಸಿ ಘಟಕ ನಿರ್ಮಿಸಲಾಗುವುದು.
– ಅಭಿಷೇಕ್ ವಿ., ಯೋಜನಾ ನಿರ್ದೇಶಕರು, ದ.ಕ. ಜಿಲ್ಲಾ ನಗರಾಭಿವೃದ್ಧಿ ಕೋಶ
ಭರತ್ ಶೆಟ್ಟಿಗಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Puttur: ಎರಡು ಕಡೆ ಚಿನ್ನಾಭರಣ ಕಳವು; ಮೂವರ ಸೆರೆ
Sullia: ಬಸ್ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್, ಶೂ ಕಳವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.