ಮಲವಂತಿಗೆ: ಕಾಡಾನೆ ದಾಳಿ, ಕೃಷಿ ಹಾನಿ
Team Udayavani, Apr 22, 2018, 11:01 AM IST
ಬೆಳ್ತಂಗಡಿ: ಕಾಡಾನೆಗಳು ತೋಟಗಳಿಗೆ ನುಗ್ಗಿ ಕೃಷಿಗೆ ಹಾನಿ ಮಾಡಿರುವ ಘಟನೆ ಗುರುವಾರ ರಾತ್ರಿ ಮಲವಂತಿಗೆ ಗ್ರಾ.ಪಂ. ವ್ಯಾಪ್ತಿಯ ಆವರನಂದಿ ಕಾಡಿನ ಬಳಿ ನಡೆದಿದೆ.
ಗುರುವಾರ ರಾತ್ರಿ ಮಳೆ ಸುರಿಯುತ್ತಿದ್ದು, 3 ಕಾಡಾನೆಗಳು ಹಾಗೂ ಒಂದು ಮರಿಯಾನೆ ಚಂದಪ್ಪ ಮಲೆಕುಡಿಯ ಅವರ ತೋಟಕ್ಕೆ ನುಗ್ಗಿದ್ದು, 70ಕ್ಕೂ ಹೆಚ್ಚು ಫಸಲಿಗೆ ಬಂದ ಅಡಿಕೆ, 5 ತೆಂಗು ಹಾಗೂ ಬಾಳೆ ಗಿಡಗಳನ್ನು ನಾಶಪಡಿಸಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಚಾರ್ಮಾಡಿ, ಭೈರತ್ತಿ, ಕುದುರೆಮುಖ ರಕ್ಷಿತಾರಣ್ಯ ಭಾಗದಲ್ಲಿ ಆನೆಗಳು ಓಡಾಡುತ್ತಿದ್ದು, ಆಗಾಗ ಕಡಿರುದ್ಯಾವರ, ಎಳನೀರು ಮೊದಲಾದೆಡೆ ದಾಳಿ ಮಾಡುತ್ತಿವೆ. 3 ತಿಂಗಳ ಹಿಂದೆಯಷ್ಟೇ ಇಲ್ಲಿ ಕಾಡಾನೆಗಳು ದಾಳಿ ಮಾಡಿದ್ದವು.
ಪ್ರಸ್ತುತ ಅವು ಸಮೀಪದ ಕಾಡಿಗೆ ಹಿಂದಿರುಗಿದ್ದು, ಮತ್ತೆ ಆಗಮಿಸುವ ಭಯದಲ್ಲಿ ಸಾರ್ವಜನಿಕರಿದ್ದಾರೆ. ಅರಣ್ಯ ಇಲಾಖೆ ಸಿಬಂದಿ ಸ್ಥಳಕ್ಕೆ ಭೇಟಿ ನೀಡಿ, ಪರಿಹಾರ ಒದಗಿಸುವ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.