ಅರಣ್ಯ ಸಂರಕ್ಷಣೆ ಅಗತ್ಯ: ರಮೇಶ್
Team Udayavani, Aug 11, 2017, 8:45 AM IST
ಪುಂಜಾಲಕಟ್ಟೆ : ಬಂಟ್ವಾಳ ತಾಲೂಕು, ಮಣಿನಾಲ್ಕೂರು ಗ್ರಾಮದ ಮುಲ್ಕಾಜೆಮಾಡದಲ್ಲಿ ಓಂ ಶಕ್ತಿ ಫ್ರೆಂಡ್ಸ್ ವತಿಯಿಂದ ಅರಣ್ಯ ಇಲಾಖೆಯ ಸಹಭಾಗಿತ್ವದೊಂದಿಗೆ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ ನಡೆಯಿತು.
ಬಂಟ್ವಾಳ ವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್ ಸಸಿ ನೆಟ್ಟು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಅರಣ್ಯ ರಕ್ಷಣೆ , ವನಮಹೋತ್ಸವದ ಮಹತ್ವವನ್ನು ವಿವರಿಸಿದರು.
ಸ್ಥಳೀಯ ಪ್ರಮುಖ ರಮೇಶ್ ವಗ್ಗ ಅತಿಥಿಯಾಗಿ ಮಾತನಾಡಿ ಅರಣ್ಯ ಸಂರಕ್ಷಣೆ ಕೇವಲ ಸರಕಾರದ ಮತ್ತು ಅಧಿಕಾರಿಗಳ ಕೆಲಸವಾಗಿರದೆ, ಅದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. ಹಸಿರು ಕ್ರಾಂತಿಯ ಹರಿಕಾರ ಮಂಗಳೂರಿನ ಮಾಧವ ಉಳ್ಳಾಲ್ ಮತ್ತು ಸಾಲುಮರದ ತಿಮ್ಮಕ್ಕರಂತಹವರು ಹಳ್ಳಿ ಹಳ್ಳಿಗಳಲ್ಲಿ ನಿರ್ಮಾಣವಾಗಬೇಕು. ನಮ್ಮ ಸುತ್ತಮುತ್ತಲಿನ ಪರಿಸರದ ರಕ್ಷಣೆಗೆ ಮುಂದಾಗದಿದ್ದಲ್ಲಿ ಮುಂದಿನ ಪೀಳಿಗೆಯು ಮರ ಗಿಡಗಳನ್ನು ಕೇವಲ ಪುಸ್ತಕ ಇಲ್ಲವೆ ಪತ್ರಿಕೆಗಳಲ್ಲಿ ನೋಡಬೇಕಾದ ಪರಿಸ್ಥಿತಿ ಎದುರಾಗಬಹುದು . ಅರಣ್ಯ ಸಂರಕ್ಷಣೆ ಮಾಡುವುದರೊಂದಿಗೆ ಉತ್ತಮ ಆರೋಗ್ಯಯುತ ವಾತಾವರಣ ನಿರ್ಮಿಸಬೇಕು ಮತ್ತು ಅರಣ್ಯಕ್ಕೆ ಮಾರಕ ವಾಗುತ್ತಿರುವ ಕಲ್ಲಿನ ಕೋರೆಗಳನ್ನು ಅರಣ್ಯ ಪ್ರದೇಶದಲ್ಲಿ ನಿಷೇಧಿಸುವ ನಿಟ್ಟಿನಲ್ಲಿ ಸರಕಾರವು ಗಮನಹರಿಸಬೇಕು ಎಂದು ಒತ್ತಾಯಿಸಿದರು.
ಓಂ ಶಕ್ತಿ ಫ್ರೆಂಡ್ಸ್ ಅಧ್ಯಕ್ಷ ಸಿ. ಡೊಂಬಯ್ಯ ನಾಯ್ಕ, ಅರಣ್ಯ ಅಧಿಕಾರಿ ಲಕ್ಷ್ಮೀನಾರಾಯಣ್ ಉಪಸ್ಥಿತರಿದ್ದರು. ಸಂಘದ ಸದಸ್ಯ ನಿತೀಶ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Sullia: ಬಿಎಸ್ಸೆನ್ನೆಲ್ ಟವರ್‌ಗೆ ಸೋಲಾರ್ ಪವರ್!
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
ಧರ್ಮಾಧಿಕಾರಿ ಡಾ| ಹೆಗ್ಗಡೆ ಸರ್ವಜನರ ವಿಕಾಸಕ್ಕೆ ಸಾಕ್ಷಿ
MUST WATCH
ಹೊಸ ಸೇರ್ಪಡೆ
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.