ಅಪಾಯಕಾರಿ ಮರಗಳ ತೆರವಿಗೆ ಮುಂದಾಗದ ಅರಣ್ಯ ಇಲಾಖೆ
Team Udayavani, Jul 21, 2018, 11:15 AM IST
ಸವಣೂರು: ರಸ್ತೆ ಬದಿಯಲ್ಲಿರುವ ಅಪಾಯಕಾರಿ ಮರಗಳನ್ನು ತೆರವು ಮಾಡಲು ಅರಣ್ಯ ಇಲಾಖೆ ಮುಂದಾಗುತ್ತಿಲ್ಲ. ಅರಣ್ಯ ಇಲಾಖೆಯು ನಿರ್ಲಕ್ಷ್ಯ ವಹಿಸಿದೆ ಎನ್ನುವ ದೂರು ಕೇಳಿ ಬಂದಿದೆ. ಸವಣೂರು – ಕುಮಾರಮಂಗಲ – ಹೊಸಗದ್ದೆ – ಮಾಡಾವು ರಸ್ತೆಯುದ್ದಕ್ಕೂ ಅಲ್ಲಲ್ಲಿ ಅಪಾಯಕಾರಿ ಮರಗಳಿವೆ. ಮರಗಳು ಅಪಾಯಕಾರಿಯಾಗಿವೆ ಎಂದು ಅರಣ್ಯ ಇಲಾಖೆಗೆ ತಿಳಿದಿದ್ದರೂ ಕ್ರಮ ಕೈಗೊಳ್ಳದಿರುವ ಕುರಿತು ಸಾರ್ವಜನಿಕರು ಆಕ್ರೋಶಿತರಾಗಿದ್ದಾರೆ.
ಮನವಿಗೆ ಸ್ಪಂದನೆ ಶೂನ್ಯ!
ರಸ್ತೆಯ ಇಕ್ಕೆಲಗಳಲ್ಲಿರುವ ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆ ಹಲವು ಬಾರಿ ಗ್ರಾಮಸಭೆಗಳಲ್ಲಿ ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದೇವೆ. ಆದರೆ ಯಾವ ಮನವಿಗೂ ಅರಣ್ಯ ಇಲಾಖೆ ಸ್ಪಂದನೆ ನೀಡಿಲ್ಲ. ಮರ ಬಿದ್ದು ಅನಾಹುತವಾದರೆ ಯಾರು ಹೊಣೆ? ಎಂದು ಪ್ರಶ್ನಿಸಿರುವ ಗ್ರಾಮಸ್ಥ ಗಣೇಶ್ ಭಟ್, ವಾಸ್ತವ ಅರಿತುಕೊಂಡು ಇಲಾಖಾಧಿಕಾರಿಗಳು ಜನಸಾಮಾ ನ್ಯರ ಕೂಗಿಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದ್ದಾರೆ.
ಹಲವು ಬಾರಿ ನಿರ್ಣಯ
ರಸ್ತೆ ಬದಿಯ ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆ ಹಲವು ಗ್ರಾಮಸಭೆ, ಸಾಮಾನ್ಯ ಸಭೆಗಳಲ್ಲಿ ನಿರ್ಣಯ ಕೈಗೊಂಡು ಅರಣ್ಯ ಇಲಾಖೆಗೆ ಕಳುಹಿಸಲಾಗಿದೆ. ಆದರೆ ಇಲಾಖೆಯವರು ಅಪಾಯಕಾರಿ ಮರಗಳನ್ನು ತೆರವುಗೊಳಿಸುವ ಬದಲು ರಸ್ತೆಯಿಂದ ದೂರವಿರುವ ಮರಗಳನ್ನು ಗುರುತು ಮಾಡಿದ್ದಾರೆ. ಯಾವ ಮರ ಗಳು ಅಪಾಯಕಾರಿಯಾಗಿವೆ ಎನ್ನುವ ಬಗ್ಗೆ ಸ್ಥಳೀಯರಿಗೆ ಮಾಹಿತಿ ಇದೆ. ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ತಮಗಿಷ್ಟ ಬಂದ ಮರಗಳಿಗೆ ಗುರುತು ಹಾಕಿ ತೆರಳಿದ್ದಾರೆ ಎಂದು ಸವಣೂರು ಗ್ರಾ.ಪಂ. ಸದಸ್ಯ ಗಿರಿಶಂಕರ ಸುಲಾಯ ಅವರು ಹೇಳಿದ್ದಾರೆ.
ಪರಿಶೀಲಿಸಲಾಗುವುದು
ಈ ರಸ್ತೆಯ ಬದಿಯಲ್ಲಿರುವ ಅಪಾಯಕಾರಿ ಮರಗಳನ್ನು ತೆರವುಗೊಳಿಸುವ ಕುರಿತು ಯಾವುದೇ ಅರ್ಜಿಗಳು ಬಂದಿಲ್ಲ. ಅರ್ಜಿ ಬಂದ ಬಳಿಕ ಪರಿಶೀಲಿಸಿ ಅಪಾಯಕಾರಿ ಮರಗಳನ್ನು ಗುರುತಿಸಿ ತೆರವುಗೊಳಿಸಲಾಗುವುದು.
– ಕುಮಾರಸ್ವಾಮಿ ವಲಯ
ಅರಣ್ಯಾಧಿಕಾರಿ ನರಿಮೊಗರು
ಅವಘಡಕ್ಕೆ ಮುನ್ನ ತೆರವುಗೊಳಿಸಿ
ಮರ ಬಿದ್ದು ಅಪಾಯ ಸಂಭವಿಸುವ ಮೊದಲು ತೆರವುಗೊಳಿಸಬೇಕು. ಕೆಲವು ದಿನಗಳ ಹಿಂದೆ ಕುಂಜಾಡಿಯಲ್ಲಿ ರಿಕ್ಷಾದ ಮೇಲೆ ಮರ ಬಿದ್ದು ರಿಕ್ಷಾ ಹಾನಿಗೊಳಗಾಗಿದೆ. ಭಾರೀ ಅನಾ ಹುತ ತಪ್ಪಿ ಹೋಗಿತ್ತು. ಮುಕ್ಕೂರು ಬಳಿ ರಸ್ತೆಗೆ ಮರ ಬಿದ್ದು ರಸ್ತೆ ತಡೆ ಉಂಟಾಗಿತ್ತು. ಕುಮಾರಮಂಗಲ-ಮಾಡಾವು ರಸ್ತೆಯಲ್ಲಿ ವಾಹನ ಚಲಾಯಿಸುವುದೇ ಸವಾಲಿನ ಕೆಲಸ ಎನ್ನುವಂತಾಗಿದೆ.
– ಶರೀಫ್ ಕುಂಡಡ್ಕ
ಸ್ಥಳೀಯ ನಿವಾಸಿ
ವಿಶೇಷ ವರದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.