ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ 4 ಪ್ರಥಮ ಪ್ರಶಸ್ತಿ
Team Udayavani, Jul 4, 2017, 3:20 AM IST
ಮಂಗಳೂರು: ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ 13ನೇ ವಾರ್ಷಿಕ ಸಾಮಾನ್ಯ ಸಭೆಯು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಜರಗಿತು. 2016-17ನೇ ಸಾಲಿನಲ್ಲಿ ರಾಜ್ಯದಲ್ಲಿ ಹೆಚ್ಚು ಮುದ್ರಾಂಕ ಶುಲ್ಕ ಪಡೆದು ಹಾಗೂ ಇ- ಸ್ಟ್ಯಾಪಿಂಗ್ ಪ್ರತಿಗಳನ್ನು ಮುದ್ರಿಸಿ ಮಾರಾಟ ಮಾಡಿರುವ ಸಹಕಾರ ಸಂಘಗಳನ್ನು ಈ ವೇಳೆ ಸಮ್ಮಾನಿಸಲಾಯಿತು. 2016-17ನೇ ಸಾಲಿನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಮೈಸೂರು ವಿಭಾಗ ಮಟ್ಟದಲ್ಲಿ ಮತ್ತು ದ.ಕ. ಜಿಲ್ಲಾ ಮಟ್ಟದಲ್ಲಿ ಹೆಚ್ಚು ಇ- ಸ್ಟ್ಯಾಪಿಂಗ್ ಮುದ್ರಣ ಮತ್ತು ಹೆಚ್ಚು ಮುದ್ರಾಂಕ ಶುಲ್ಕ ಸಂಗ್ರಹಣೆಯಲ್ಲಿ ಒಟ್ಟು 4 ಪ್ರಥಮ ಪ್ರಶಸ್ತಿಗಳನ್ನು ಪಡೆದುಕೊಂಡಿದೆ.
ಕರ್ನಾಟಕ ರಾಜ್ಯ ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಎಸ್. ಪಟ್ಟಣ ಶೆಟ್ಟಿ, ಬೆಂಗಳೂರಿನ ಸ್ಟಾಕ್ ಹೋಲ್ಡಿಂಗ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್‌ನ ಪ್ರಾದೇಶಿಕ ವ್ಯವಸ್ಥಾಪಕ ಎಂ. ರಾಘವೇಂದ್ರ ಸ್ವಾಮಿ, ಬೆಂಗಳೂರು ಸಹಕಾರ ಸಂಘಗಳ ಜಂಟಿ ನಿಬಂಧಕ (ಪಟ್ಟಣ ಬ್ಯಾಂಕ್‌ಗಳ ವಿಭಾಗ) ಎಂ.ಡಿ. ನರಸಿಂಹಮೂರ್ತಿ, ಮಹಾಮಂಡಳದ ಅಧ್ಯಕ್ಷ ಸಿ.ಎಂ. ಮಾರೇಗೌಡ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್, ನಿರ್ದೇಶಕ ರಮಾನಾಥ ಸನಿಲ್ ಅವರಿಗೆ ಪ್ರಶಸ್ತಿ ಹಸ್ತಾಂತರಿಸಲಾಯಿತು. ಸತತ 4 ವರ್ಷಗಳ ಇ- ಸ್ಟ್ಯಾಪಿಂಗ್ ಸೇವೆಗೆ ಪ್ರಶಸ್ತಿ ಸಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್ಗೆ ಕಾರಾಗೃಹ ಶಿಕ್ಷೆ
Parliament: ಎರಡೂ ಸದನಗಳಲ್ಲಿ ಸಂವಿಧಾನದ ಬಗ್ಗೆ ಚರ್ಚೆಗೆ ವಿಪಕ್ಷ ನಾಯಕರ ಪತ್ರ
Congress Politics: ಡಿಸಿಎಂ ಡಿ.ಕೆ.ಶಿವಕುಮಾರ್ ದಿಲ್ಲಿಗೆ ಭೇಟಿ: ಹೈಕಮಾಂಡ್ ಜತೆ ಚರ್ಚೆ
Andhra Pradesh: ಅದಾನಿ ಗ್ರೂಪ್ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?
By Election Result: ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಬಿ.ವೈ.ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.