ನಾಲ್ಕನೇ ಚಂಡಮಾರುತದ ಭೀತಿ !
Team Udayavani, Sep 22, 2018, 11:29 AM IST
ಮಹಾನಗರ: ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ಚಂಡಮಾರುತ ದುರ್ಬಲಗೊಂಡು ಪಶ್ಚಿಮದಿಂದ ವಾಯುವ್ಯ ದಿಕ್ಕಿನೆಡೆಗೆ ಸಾಗುತ್ತಿರುವಂತೆಯೇ ಅರಬಿ ಸಮುದ್ರದಲ್ಲೂ ಮೇಲ್ಮೆ„ ಸುಳಿಗಾಳಿ ಸೃಷ್ಟಿಯಾಗಿದೆ. ಸಾಂಧ್ರತೆ ಜಾಸ್ತಿಯಾದರೆ ಇದು ಚಂಡಮಾರುತವಾಗಿ ಮಾರ್ಪಾಡಾಗುವ ಸಾಧ್ಯತೆಯೂ ಇದೆ.
ಬಂಗಾಲಕೊಲ್ಲಿಯ ಚಂಡಮಾರುತದಿಂದ ರಾಜ್ಯದ ಉತ್ತರ ಒಳನಾಡಿನಲ್ಲಿ ಉತ್ತಮ ಮಳೆಯಾಗುತ್ತಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಸಹಿತ ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣ ಸೃಷ್ಟಿಯಾಗಿದ್ದು, ಮಳೆಯ ನಿರೀಕ್ಷೆಯನ್ನು ಮೂಡಿಸಿದೆ.
ಅರಬಿ ಸಮುದ್ರದಲ್ಲಿನ ಸುಳಿಗಾಳಿ ತೀವ್ರಗೊಂಡರೆ ಕರಾವಳಿಯಲ್ಲಿ ಉತ್ತಮ ಮಳೆಯಾಗುವ ಸಂಭವ ಇದೆ. ಈ ವರ್ಷದ ಮೇ 29ರಂದು ಚಂಡಮಾರುತದಿಂದಾಗಿ ಮಂಗಳೂರು ಪರಿಸರದಲ್ಲಿ ಭಾರೀ ಮಳೆಯಾಗಿತ್ತು. ಇದಾದ ಬಳಿಕ ಅಷ್ಟೊಂದು ತೀವ್ರತೆಯ ಮಳೆ ಸುರಿದಿರಲಿಲ್ಲ.
ಮೂರು ಪ್ರಬಲ ಚಂಡಮಾರುತ
ಕಳೆದ ಡಿಸೆಂಬರ್ನಿಂದ ಇಲ್ಲಿಯವರೆಗೆ ಮೂರು ಪ್ರಬಲ ಚಂಡಮಾರುತ ಕರಾವಳಿ ಮೇಲೆ ಪರಿಣಾಮ ಬೀರಿದೆ. ಅದರಲ್ಲಿಯೂ ಡಿಸೆಂಬರ್ನಲ್ಲಿ ‘ಓಖೀ’ ಹೆಸರಿನ ಚಂಡಮಾರುತ ದಕ್ಷಿಣ ಭಾರತದ ಕರಾವಳಿಯನ್ನು ಅಪ್ಪಳಿಸಿತ್ತು. ಸಾಕಷ್ಟು ಬೆಳೆನಾಶ ಹಾಗೂ ಪ್ರಾಣ ಹಾನಿಯಾಗಿತ್ತು.
ಇದಾದ ಬಳಿಕ ಮೇ ತಿಂಗಳಿನಲ್ಲಿ ‘ಸಾಗರ್’ ಹೆಸರಿನ ಮತ್ತೊಂದು ಚಂಡಮಾರುತದ ಪರಿಣಾಮದಿಂದಾಗಿ ಕರ್ನಾಟಕ ಕರಾವಳಿ ತೀರದಲ್ಲಿ ಗಾಳಿ, ಮಳೆಯಾಗಿತ್ತು. ಇದಾದ ಕೆಲವೇ ದಿನದಲ್ಲಿ ‘ಮೆಕುನು’ ಎಂಬ ಮತ್ತೊಂದು ಪ್ರಬಲ ಚಂಡಮಾರುತ ಅರಬಿ ಸಮುದ್ರದಲ್ಲಿ ಸೃಷ್ಟಿಯಾಗಿ ಒಮಾನ್ ದೇಶದಲ್ಲಿ ಸಾಕಷ್ಟು ನಷ್ಟ-ಹಾನಿಯುಂಟು ಮಾಡಿತ್ತು. ಇದರ ಪರಿಣಾಮ ಕೂಡ ಕರ್ನಾಟಕ ಕರಾವಳಿ ಪ್ರದೇಶಕ್ಕೆ ಉಂಟಾಗಿತ್ತು.
ಮಳೆ ತೀರಾ ಕಡಿಮೆ
ಕಳೆದ ವರ್ಷದ ಸೆಪ್ಟಂಬರ್ ತಿಂಗಳಿಗೆ ಹೋಲಿಕೆ ಮಾಡಿದರೆ ಈ ವರ್ಷ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗಲಿಲ್ಲ. 2017 ಸೆ. 1ರಿಂದ ಸೆ. 20ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 245.8 ಮಿ.ಮೀ. ಮಳೆಯಾಗಿತ್ತು. ಆದರೆ ಈ ವರ್ಷ ಕೇವಲ 23.6 ಮಿ.ಮೀ. ಮಳೆಯಾಗಿದೆ.
ಸಮುದ್ರದ ಮೇಲ್ಮೈ ಸುಳಿಗಾಳಿ
ಅರಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದೆ. ಇದು ತೀವ್ರಗೊಂಡಲ್ಲಿ ದ.ಕ., ಉಡುಪಿ ಸಹಿತ ಕರಾವಳಿ ಪ್ರದೇಶಗಳಲ್ಲಿ ಮಳೆಯಾಗುವ ಸಂಭವ ಇದೆ.
– ಶ್ರೀನಿವಾಸ ರೆಡ್ಡಿ, ರಾಜ್ಯ ನೈಸರ್ಗಿಕ
ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.