ನಕಲಿ ಚಿನ್ನ ಅಡವಿಟ್ಟು ಬ್ಯಾಂಕಿಗೆ 4.5 ಕೋ.ರೂ. ವಂಚನೆ, ದಂಪತಿ ಸೆರೆ

Team Udayavani, Jul 26, 2017, 7:40 AM IST

Arrest-Symbolic-New-600.jpg

ಮಂಗಳೂರು: ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ಸುಮಾರು 4.5 ಕೋ.ರೂ. ಬ್ಯಾಂಕಿನಿಂದ ಸಾಲ ಪಡೆದು ವಂಚಿಸಿದ ಪ್ರಕರಣ ನಗರದಲ್ಲಿ ಸಂಭವಿಸಿದೆ. ಬೊಂದೇಲ್‌ ಸಮೀಪದ ನಿವಾಸಿ ವಿದ್ಯಾನಂದ ರಾವ್‌ (59) ಮತ್ತು ಆತನ ಪತ್ನಿ ಲಲಿತಾ ರಾವ್‌ (52) ಬಂಧಿತ ಆರೋಪಿಗಳು. ನಗರದ ಫಳ್ನೀರ್‌ ಸಮೀಪದ ಕ್ಯಾಥೋಲಿಕ್‌ ಸಿರಿಯನ್‌ ಬ್ಯಾಂಕ್‌ನಲ್ಲಿ ನಕಲಿ ಚಿನ್ನ ಅಡವಿಟ್ಟು 4.5 ಕೋಟಿ ರೂ. ಸಾಲ ಪಡೆದು ವಂಚನೆ ಮಾಡಿದ್ದಾರೆ. ವಿದ್ಯಾನಂದರಾವ್‌ ಚಿನ್ನದ ಅಂಗಡಿ ಹೊಂದಿದ್ದಾನೆ. ಈತ 38 ಬಾರಿ ನಕಲಿ ಚಿನ್ನವಿಟ್ಟು ಬ್ಯಾಂಕ್‌ಗೆ ವಂಚಿಸಿದರೆ, ಆತನ ಪತ್ನಿ ಲಲಿತಾ ರಾವ್‌ 9 ಬಾರಿ ನಕಲಿ ಚಿನ್ನವಿಟ್ಟು ವಂಚಿಸಿದ್ದಾರೆ.

ಉಡುಪಿಯ ಶಿರ್ವದಲ್ಲಿ ಇತ್ತೀಚೆಗೆ ಸಹಕಾರಿ ಬ್ಯಾಂಕ್‌ ಒಂದರಲ್ಲಿ ಶಂಕರ ಆಚಾರ್ಯ ನಕಲಿ ಚಿನ್ನ ವಿಟ್ಟು  65 ಲಕ್ಷ ರೂ. ಸಾಲ ಪಡೆದು ವಂಚನೆಗೈದ ಪ್ರಕರಣ ಬಹಿರಂಗಗೊಂಡಿತ್ತು. ಈ ಘಟನೆಯಿಂದ ಎಚ್ಚೆತ್ತುಕೊಂಡ ಕ್ಯಾಥೋಲಿಕ್‌ ಸಿರಿಯನ್‌ ಬ್ಯಾಂಕಿನ ಸಿಬಂದಿ ತಮ್ಮ ಬ್ಯಾಂಕ್‌ನಲ್ಲಿ ಸಾಲಕ್ಕಾಗಿ ಅಡವಿಟ್ಟ ಚಿನ್ನಾಭರಣಗಳ ಪರಿಶೀಲನೆ ನಡೆಸುತ್ತಿದ್ದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.

ಕಂಚಿನ ಆಭರಣ ತಯಾರಿಸಿ ಚಿನ್ನದ ಲೇಪ
ಆರೋಪಿ ವಿದ್ಯಾನಂದ ರಾವ್‌ ಕಂಚಿನ ಆಭರಣ ತಯಾರಿಸಿ ಅದಕ್ಕೆ ಗೊತ್ತಾಗದಂತೆ ಸಂಪೂರ್ಣ ಚಿನ್ನದ ಲೇಪನ ಹಾಕುತ್ತಿದ್ದ. ಈ ಕೃತ್ಯ ಬ್ಯಾಂಕಿನ ಚಿನ್ನ ಪರೀಕ್ಷಕ ಮಂಜುನಾಥ್‌ ಅವರ ಗಮನಕ್ಕೂ ಬಾರದಂತೆ ಚಾಣಾಕ್ಷತನ ತೋರ್ಪಡಿಸಿದ್ದ ಎನ್ನಲಾಗಿದೆ. ಮೇಲ್ನೋಟಕ್ಕೆ ಇದು ಚಿನ್ನದ ಆಭರಣಗಳಂತೆ ಭಾಸವಾಗುತ್ತಿತ್ತು. ಇದನ್ನು ಅಡವಿಟ್ಟು ಬ್ಯಾಂಕಿನಿಂದ ಸಾಲವನ್ನು ಪಡೆಯುತ್ತಿದ್ದ. 

ಪರಿಶೀಲನೆ ವೇಳೆ ಅಡವಿಟ್ಟ ಚಿನ್ನಾಭರಣಗಳು ನಕಲಿ ಎಂದು ಗೊತ್ತಾದ ತತ್‌ಕ್ಷಣ ಜು.25ರಂದು ಬ್ಯಾಂಕ್‌ ಆಡಳಿತ ಮಂಡಳಿ ಬಂದರು ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಅಡವಿಟ್ಟಿರುವ ಚಿನ್ನದ ಕುರಿತಂತೆ ತನಿಖೆ ನಡೆಯುತ್ತಿದ್ದು, ವಂಚನೆಯ ಸಂಪೂರ್ಣ ಲೆಕ್ಕಾಚಾರ ಇನ್ನೂ ನಡೆದಿಲ್ಲ ಎಂದು ಮೂಲಗಳು ತಿಳಿಸಿವೆ. ಕಾರ್ಯಾಚರಣೆಯಲ್ಲಿ ಬಂದರು ಇನ್‌ಸ್ಪೆಕ್ಟರ್‌ ಶಾಂತರಾಮ್‌, ಸಬ್‌ಇನ್‌ಸ್ಪೆಕ್ಟರ್‌ ಮದನ್‌ ಸೇರಿದಂತೆ ಸಿಬಂದಿ ಭಾಗವಹಿಸಿದ್ದಾರೆ. ಬಂದರು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್‌’

Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್‌’

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.