ಡಿಜಿಟಲ್ ಮಾರ್ಕೆಟಿಂಗ್ ಲಾಭದ ಆಮಿಷ: 18.43 ಲಕ್ಷ ರೂ. ಕಳೆದುಕೊಂಡು ಕಂಗಾಲಾದ ವ್ಯಕ್ತಿ
Team Udayavani, Feb 17, 2023, 5:55 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ಡಿಜಿಟಲ್ ಮಾರ್ಕೆಟಿಂಗ್ ಮೂಲಕ ಹಣಗಳಿಸುವ ಆಮಿಷಕ್ಕೆ ಒಳಗಾದ ವ್ಯಕ್ತಿಯೊಬ್ಬರು ಸುಮಾರು 18.43 ಲಕ್ಷ ರೂ. ಹಣ ಕಳೆದುಕೊಂಡಿದ್ದು, ಈ ಬಗ್ಗೆ ಸೆನ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
2022 ಡಿ.14ರಂದು ಡಿಜಿಟಲ್ ಮಾರ್ಕೆಟಿಂಗ್ ಮೂಲಕ ಹಣಗಳಿಸುವ ಬಗ್ಗೆ ಅಪರಿಚಿತ ವ್ಯಕ್ತಿಯ ಸಂದೇಶ ವಾಟ್ಸಾಪ್ ಸಂದೇಶವನ್ನು ನಂಬಿದ ಅವರು ಆತ ಕಳಿಹಿಸಿದ ಟೆಲಿಗ್ರಾಂ ಚಾನಲ್ಗೆ ಸದಸ್ಯರಾಗಿದ್ದಾರೆ. ಆ ಚಾನೆಲ್ ಮೂಲಕ ವೆಬ್ಸೈಟ್ ಒಂದರಲ್ಲಿ ನೊಂದಣಿ ಮಾಡುವಂತೆ ತಿಳಿಸಿದ್ದು, ನೋಂದಣಿ ಮಾಡಿಸಿಕೊಂಡಿದ್ದಾರೆ. ಬಳಿಕ ಡಿ.18ರಂದು 9 ಸಾವಿರ ರೂ. ಪ್ರಥಮವಾಗಿ ತಮ್ಮ ಬ್ಯಾಂಕ್ ಖಾತೆಯಿಂದ ಪಾವತಿಸಿದ್ದು, ಈ ಹಣವು ವಾಪಾಸು ಬಂದಿದೆ.
ಅನಂತರ ಹಂತ ಹಂತವಾಗಿ ಹಣ ಕಳುಹಿಸುವಂತೆ ಅಪರಿಚಿತ ವ್ಯಕ್ತಿ ತಿಳಿಸಿದ್ದು, ಅವರು ಕಳುಹಿಸಿದ ಹಣ ವೆಬ್ಸೈಟ್ ಖಾತೆಯಲ್ಲಿ ದ್ವಿಗುಣಗೊಂಡಿರುವಂತೆ ಕಾಣಿಸುತ್ತಿತ್ತು. ಅದನ್ನು ನಂಬಿದ ಅವರು ಹೆಚ್ಚಿನ ಲಾಭ ಗಳಿಸುವ ಆಸೆಯಿಂದ ಒಟ್ಟು 18,43,000 ರೂ. ಹಂತ ಹಂತವಾಗಿ ಕಳುಹಿಸಿದ್ದಾರೆ. ಕೊನೆಗೆ ತಾನು ಹೂಡಿಕೆ ಮಾಡಿದ ಹಣ ಹಿಂಪಡೆಯಲು ಪ್ರಯತ್ನಿಸಿದಲ್ಲಿ ಪುನಃ ಹಣ ಪಾವತಿಸುವಂತೆ ಅಪರಿಚಿತ ವ್ಯಕ್ತಿ ತಿಳಿಸಿದ್ದಾನೆ. ಬಳಿಕ ಹೂಡಿಕೆ ಮಾಡದಿದ್ದರೂ, ಈ ವರೆಗೆ ಹಣ ಮರುಪಾವತಿ ಆಗಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ
Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.