Mangaluru; ಪಾನ್ಕಾರ್ಡ್ ಅಪ್ಡೇಟ್ ಹೆಸರಲ್ಲಿ ವಂಚನೆ
Team Udayavani, Aug 29, 2023, 11:42 PM IST
ಮಂಗಳೂರು: ಪಾನ್ಕಾರ್ಡ್ ಅಪ್ಡೇಟ್ ಹೆಸರಿನಲ್ಲಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.
ರವಿವಾರದಂದು ದೂರುದಾರರಿಗೆ ಅಪರಿಚಿತ ವ್ಯಕ್ತಿ 918374917353 ಸಂಖ್ಯೆಯಿಂದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಹೆಸರಿನಲ್ಲಿ ಸಂದೇಶದ ಲಿಂಕ್ ಕಳುಹಿಸಿದ್ದ. ದೂರುದಾರರು ಅದನ್ನು ಒತ್ತಿ ಅದರಲ್ಲಿ ಕೇಳಲಾದ ಮಾಹಿತಿಯನ್ನು ತುಂಬಿಸಿದ್ದರು. ಕೂಡಲೇ ಕರೆ ಮಾಡಿದ ಅಪರಿಚಿತ ವ್ಯಕ್ತಿ ಆತನನ್ನು ಬ್ಯಾಂಕ್ ಅಧಿಕಾರಿಯೆಂದು ಪರಿಚಯಿಸಿ ದೂರುದಾರರ ಪಾನ್ಕಾರ್ಡ್ ಅಪ್ಡೇಟ್ಗೆ ಮಾಹಿತಿ ನೀಡುವಂತೆ ಕೇಳಿದ.
ದೂರುದಾರರು ಅದನ್ನು ನಂಬಿ ಮಾಹಿತಿ ನೀಡಿದರು. ಒಟಿಪಿ ಕೂಡ ನೀಡಿದರು. ಅನಂತರ ಅವರ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಖಾತೆಯಿಂದ ಹಂತ ಹಂತವಾಗಿ 6,21,082 ರೂ. ವರ್ಗಾಯಿಸಿಕೊಂಡು ವಂಚಿಸಲಾಗಿದೆ. ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.