Congress ಸರಕಾರದ ವಿರುದ್ಧ “ಫ್ರೀ ಸಾಕಪ್ಪ ಅಭಿವೃದ್ಧಿ ಮಾಡಪ್ಪ’ ಅಭಿಯಾನ
Team Udayavani, Jan 7, 2024, 11:25 PM IST
ಮಂಗಳೂರು: ರಾಜ್ಯದಲ್ಲಿ ಏಳು ತಿಂಗಳಿಂದ ಒಂದು ಅಭಿವದ್ಧಿ ಕೆಲಸವೂ ನಡೆದಿಲ್ಲ. ಸರಕಾರದ ಖಜಾನೆ ಖಾಲಿಯಾಗಿದ್ದು, ಲೋಕಸಭಾ ಚುನಾವಣೆ ಬಳಿಕ ಈ ಎಲ್ಲ ಉಚಿತ ಯೋಜನೆಗಳು ಸ್ಥಗಿತಗೊಳ್ಳಲಿದೆ. ಆದ್ದರಿಂದ ರಾಜ್ಯ ಸರಕಾರದ ವಿರುದ್ಧ “ಫ್ರೀ ಸಾಕಪ್ಪ… ಅಭಿವೃದ್ಧಿ ಮಾಡಪ್ಪ…’ ಅಭಿಯಾನ ನಡೆಸಲಾಗುವುದು ಎಂದು ವಿಧಾನಸಭಾ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ವಿಧಾನಸಭಾ ವಿಪಕ್ಷ ನಾಯಕರಾದ ಬಳಿಕ ದ.ಕ. ಜಿಲ್ಲೆಗೆ ಭೇಟಿ ನೀಡಿದ ಅವರು, ರವಿವಾರ ಮಂಗಳೂರಿನ ಜಿಲ್ಲಾ ಬಿಜೆಪಿ ಚುನಾವಣ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ರಾಜ್ಯದ ಆರ್ಥಿಕ ಪರಿಸ್ಥಿತಿ ಇತರ ರಾಜ್ಯಗಳಿಗಿಂತ ಮುಂದೆ ಇತ್ತು. ಆದರೆ ಈಗ ಸಂಪೂರ್ಣವಾಗಿ ಹದಗೆಟ್ಟಿದ್ದು, ಸಾಲ ಮಾಡಿ ಬಜೆಟ್ ಮಂಡಿಸಬೇಕಾದ ಪರಿಸ್ಥಿತಿ ಇದೆ. ಯಾವುದೇ ಸ್ಕಾಲರ್‌ಶಿಪ್‌ಗ್ಳು ವಿದ್ಯಾರ್ಥಿಗಳಿಗೆ ಸಿಗುತ್ತಿಲ್ಲ. ಪ್ರತಿಭಟನೆಗಳು ಹೆಚ್ಚಾಗಿವೆ. 550ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಕುಟುಂಬಕ್ಕೆ ಪರಿಹಾರ ನೀಡಲೂ ಸರಕಾರದಲ್ಲಿ ದುಡ್ಡಿಲ್ಲ. ಸರಕಾರದ ಈ ದಯನೀಯ ಪರಿಸ್ಥಿತಿ ಜನರಿಗೆ ಮನದಟ್ಟು ಮಾಡುವ ಲೋಕಸಭೆಯಲ್ಲಿ ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸಬೇಕು. ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಹತ್ತಿಕ್ಕಲು ಇದಕ್ಕಿಂತ ಉತ್ತಮ ಅವಕಾಶ ಬೇರೆ ಇಲ್ಲ. ದೇಶಕ್ಕಾಗಿ ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂದರು.
ಇಡೀ ದೇಶವೇ ರಾಮ ಮಂದಿರದ ಪ್ರತಿಷ್ಠಾಪನೆಯ ಸಂಭ್ರಮಾಚರಣೆ ಯಲ್ಲಿದೆ. ಆದರೆ ಕಾಂಗ್ರೆಸ್‌ನವರಿಗೆ ಮಾತ್ರ ಇದನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈಗಾಗಲೇ ನಡೆದ 8 ಸರ್ವೇ ಯಲ್ಲೂ ಬಿಜೆಪಿಗೆ ಅತ್ಯಧಿಕ ಲೋಕಸಭಾ ಸ್ಥಾನ ದೊರೆಯಲಿದೆ ಎಂದು ವರದಿ ಬಂದಿದೆ. ಇದರ ಭಯವೂ ಕಾಂಗ್ರೆಸ್‌ಗೆ ಕಾಡುತ್ತಿದೆ. ಇದಕ್ಕಾಗಿ ಕರಸೇವಕರನ್ನು ಜೈಲಿಗೆ ಹಾಕುತ್ತಿದ್ದು, ಇನ್ನೊಂದೆಡೆ ಪಿಎಫ್‌ಐ ಕೆಎಫ್‌ಡಿಯಂತಹ ಸಂಘಟನೆಗಳು ಸಂಘಟನೆಗಳ ಬಗ್ಗೆ ಮೃದುಧೋರಣೆಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದರು.
ಬಿಜೆಪಿ ರಾಜ್ಯ ಉಪಾಧ್ಯಕ್ಷ ಭೈರತಿ ಬಸವರಾಜ್, ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ, ಶಾಸಕರಾದ ವೇದವ್ಯಾಸ ಕಾಮತ್, ಡಾ| ವೈ. ಭರತ್ ಶೆಟ್ಟಿ, ಪ್ರತಾಪಸಿಂಹ ನಾಯಕ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಉಪಸ್ಥಿತರಿದ್ದರು.
ರವಿಶಂಕರ್ ಮಿಜಾರು ಸ್ವಾಗತಿಸಿದರು. ಕಸ್ತೂರಿ ಪಂಜ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್
Sadalwood: ಶ್ರೀಮುರಳಿ ಬರ್ತ್‌ಡೇಗೆ ಎರಡು ಚಿತ್ರ ಘೋಷಣೆ
ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ. ಪೊಲೀಸ್ ವಶಕ್ಕೆ
Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.