ಜ.2 ರಿಂದ 12 ರವರೆಗೆ ಬೂತ್ ವಿಜಯ ಅಭಿಯಾನ: ಸುದರ್ಶನ ಮೂಡುಬಿದಿರೆ
Team Udayavani, Dec 31, 2022, 5:23 PM IST
ಮಹಾನಗರ:ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೂತ್ ಮಟ್ಟದಲ್ಲಿ ಪಕ್ಷದ ಕಾರ್ಯಕರ್ತರನ್ನು ಸಕ್ರಿಯಗೊಳಿಸುವ ಸಲುವಾಗಿ ಜನವರಿ 2 ರಿಂದ 12ರವರೆಗೆ ಬೂತ್ ವಿಜಯ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ತಿಳಿಸಿದ್ದಾರೆ.
ಮಂಗಳೂರಿನ ಅಟಲ್ ಸೇವಾ ಕೇಂದ್ರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿಯಾನದ ವೇಳೆ ಜಿಲ್ಲೆಯ ೧೮೬೧ ಬೂತ್‌ಗಳಲ್ಲಿ ಸಭೆ ನಡೆಸಲಾಗುವುದು ಎಂದರು.
ಜ. 2 ರಂದು ಬೆಳಗ್ಗೆ 10 ಗಂಟೆಗೆ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಭಿಯಾನದ ಉದ್ಘಾಟನೆಯನ್ನು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನೆರವೇರಿಸಲಿದ್ದಾರೆ.
ಅಭಿಯಾನದ ಯಶಸ್ಸಿಗೆ ಈಗಾಗಲೇ ಕೆಲಸ ಕಾರ್ಯ ಆರಂಭಗೊಂಡಿದೆ. ಬೂತ್ ಕಾರ್ಯಕರ್ತರು ಹಾಗೂ ಸಂಘಟನ ಶಕ್ತಿಯ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಽಕಾರಕ್ಕೆ ಬರಲಿದೆ ಎಂದವರು ಹೇಳಿದರು.
ಸಿದ್ಧರಾಮಯ್ಯನವರು ವಿದೂಷಕ ಎಂದ ಕೂಡಲೆ ಪಕ್ಷದ ರಾಜ್ಯಾಧ್ಯಕ್ಷ ವಿದೂಷಕರಾಗುವುದಿಲ್ಲ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಕೂಡಾ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ರನ್ನು ಮುಕ್ತ ಕಂಠದಿಂದ ಶ್ಲಾಸಿದ್ದಾರೆ. ರಾಜ್ಯವ್ಯಾಪಿ ಪಕ್ಷದ ಸಂಘಟನೆಗೆ ಅತೀ ಹೆಚ್ಚು ಸಮಯ ನೀಡಿರುವವರು ರಾಜ್ಯಾಧ್ಯಕ್ಷರು ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಸುದರ್ಶನ ಮೂಡುಬಿದಿರೆ ಉತ್ತರಿಸಿದರು.
ಗೋಷ್ಠಿಯಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಮುಖಂಡರಾದ ಕಸ್ತೂರಿ ಪಂಜ, ಜಗದೀಶ ಶೇಣವ, ರವಿಶಂಕರ ಮಿಜಾರು, ವಿಜಯ ಕುಮಾರ್ ಶೆಟ್ಟಿ, ರಣದೀಪ್ ಕಾಂಚನ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.