ಸಮಗ್ರ ವರದಿ ಬಳಿಕ ಪೂರ್ಣ ಕಾರ್ಯಾಚರಣೆ: ಡಿಸಿ
Team Udayavani, Jun 6, 2018, 4:02 PM IST
ಮಂಗಳೂರು: ನಗರದಲ್ಲಿ ರಾಜಕಾಲುವೆ ಒತ್ತುವರಿ ಪರಿಶೀಲನೆಗೆ ನೇಮಿಸಿರುವ ಸಮಿತಿ ಮಂಗಳವಾರ ಮಧ್ಯಾಂತರ ವರದಿ ಸಲ್ಲಿಸಿದ್ದು, ಸಮಗ್ರ ವರದಿಗೆ 15 ದಿನಗಳ ಕಾಲಾವ ಕಾಶ ಕೋರಿದೆ. ಒತ್ತುವರಿ ಗಮನಕ್ಕೆ ಬಂದಿರುವ ಪ್ರದೇಶಗಳಲ್ಲಿ ತೆರವು ಕಾರ್ಯಾಚರಣೆ ಆರಂಭ ಗೊಂಡಿದ್ದು, ಸಮಗ್ರ ವರದಿ ಬಂದ ಬಳಿಕ ಪರಿಶೀಲಿಸಿ ಪೂರ್ಣ ಪ್ರಮಾಣದ ಕಾರ್ಯಾಚರಣೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್ ತಿಳಿಸಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ವಿವರಿಸಿದ ಅವರು, ಸಮಿತಿ ಮಧ್ಯಂತರ ವರದಿಯಲ್ಲಿ ಕೆಲವು ಅಂಶಗಳನ್ನು ಉಲ್ಲೇಖೀಸಿ ಒತ್ತುವರಿ ಸಮೀಕ್ಷೆಗೆ ಸರ್ವೆಯರ್ ನೀಡುವಂತೆ ಕೋರಿದೆ. ಸಂಪೂರ್ಣ ಸಮೀಕ್ಷೆ ನಡೆಸಿ ಎರಡು ವಾರದೊಳಗೆ ಸಮಗ್ರ ವರದಿ ಸಲ್ಲಿಸುವುದಾಗಿ ತಿಳಿಸಿದೆ. ಒತ್ತುವರಿ ಗಮನಕ್ಕೆ ಬಂದಿರುವ ಪ್ರದೇಶ ಗಳಲ್ಲಿ ಮನಪಾ ಅಧಿಕಾರಿಗಳು ಈಗಾಗಲೇ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದರು.
ಉಪಗ್ರಹ ಚಿತ್ರ ಬಳಸಿಯೂ ಒತ್ತುವರಿ ಪರಿಶೀಲನೆ ನಡೆಸಲಾಗು ವುದು. 10 ವರ್ಷಗಳ ಹಿಂದಿನ ಸ್ಥಿತಿಗತಿ ಮತ್ತು ಪ್ರಸ್ತುತ ಸ್ಥಿತಿಯ ಬಗ್ಗೆ ಉಪಗ್ರಹ ಚಿತ್ರಗಳಿಂದ ಪರಿಶೀಲನೆ ನಡೆಸಿ ತೆರವು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕೆಲವು ಪ್ರದೇಶಗಳಲ್ಲಿ ಮಳೆ ನೀರಿನ ತೋಡುಗಳನ್ನು ಅವೈಜ್ಞಾನಿಕವಾಗಿ ನಿರ್ಮಿಸಿರುವುದು ಗಮನಕ್ಕೆ ಬಂದಿದೆ. ಈ ಬಾರಿ 400 ಮಿ.ಮೀ.ನಷ್ಟು ದಾಖಲೆಯ ಮಳೆಯಾಗಿದೆ. ಇದನ್ನು ಗಮನ ದಲ್ಲಿಟ್ಟು ಕೊಂಡು ಮುಂದಿನ ದಿನಗಳಲ್ಲಿ ಮಳೆಗಾಲಕ್ಕೆ ಸಂಬಂಧ ಪಟ್ಟಂತೆ ನಮ್ಮ ಯೋಜನೆಗಳನ್ನು ಹೊಂದಿಸಿಕೊಳ್ಳಬೇಕಾಗಿದೆ. ನೆರೆ ಪರಿಸ್ಥಿತಿ ಸೃಷ್ಟಿಯಾಗಲು ಕಾರಣಗಳೇನು ಎಂಬುದನ್ನು ಪತ್ತೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಮಳೆ ಹಾನಿ: ಇಂದು ಸಮಗ್ರ ವರದಿ
ನಗರದಲ್ಲಿ ಮೇ 29ರಂದು ಸುರಿದ ಭಾರೀ ಮಳೆ ಯಿಂದ ಸಂಭವಿಸಿರುವ ಹಾನಿಯ ಕುರಿತು ಸಮಗ್ರ ವರದಿ ಯನ್ನು ಜೂ. 6ರಂದು ಸರಕಾರಕ್ಕೆ ಸಲ್ಲಿಸ ಲಾಗುವುದು. ಮಳೆಯಿಂದ ಸುಮಾರು 20 ಕೋ. ರೂ. ನಷ್ಟು ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿ ಯಾಗಿದೆ. ಇದಲ್ಲದೆ ಕೈಗಾರಿಕಾ ಪ್ರದೇಶ ಗಳಲ್ಲಿ ಸಮಾರು 10 ಕೋ. ರೂ. ಹಾನಿ ಸಂಭವಿಸಿರುವುದಾಗಿ ಮಾಹಿತಿ ಬಂದಿವೆ. ಜಿಲ್ಲಾಡಳಿತ ವತಿಯಿಂದ ಮಳೆ ಸಂತ್ರಸ್ತರಿಗೆ ಪರಿಹಾರ ನೀಡುವ ಕಾರ್ಯ ಈಗಾಗಲೇ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಅಪರ ಜಿಲ್ಲಾಧಿಕಾರಿ ವೈಶಾಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.