ವೈದ್ಯರ ಮೇಲೆ ರೇಗಿದ ಜಿ.ಪಂ. ಅಧ್ಯಕ್ಷೆ: ಶಾಸಕರಿಗೆ ದೂರು
Team Udayavani, Jul 1, 2019, 5:49 AM IST
ಪುತ್ತೂರು: ಕೌಡಿಚ್ಚಾರಿನ ಅಪ್ರಾಪ್ತೆಯ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಬಾಲಕಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಶನಿವಾರ ಸಂಜೆ ಆಸ್ಪತ್ರೆಗೆ ಭೇಟಿ ನೀಡಿದ ದ.ಕ. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅವರು ಆಸ್ಪತ್ರೆಯ ಪರಿಸ್ಥಿತಿಯನ್ನು ಅವಲೋಕಿಸದೆ ತಮ್ಮನ್ನು ತತ್‌ಕ್ಷಣ ಭೇಟಿಯಾಗದ ವೈದ್ಯರನ್ನು ತರಾಟೆಗೆ ತೆಗೆದುಕೊಂಡಿರುವ ವಿಚಾರ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಸಂಜೆ ಸಮಯದಲ್ಲಿ ಆಸ್ಪತ್ರೆಗೆ ಜಿ.ಪಂ. ಅಧ್ಯಕ್ಷರು ಭೇಟಿ ನೀಡಿದ್ದಾರೆ. ವೈದ್ಯರ ಕೊರತೆ ಇರುವ ಕಾರಣ ರೋಗಿಗಳನ್ನು ಪರೀಕ್ಷಿಸುತ್ತಿದ್ದ ವೈದ್ಯರು ತಮ್ಮನ್ನು ತತ್‌ಕ್ಷಣ ಭೇಟಿಯಾಗಿಲ್ಲ ಎಂದು ಜಿ.ಪಂ. ಅಧ್ಯಕ್ಷರು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಪರಿಸ್ಥಿತಿ ಗಮನಿಸಿಲ್ಲ
ಸರಕಾರಿ ಆಸ್ಪತ್ರೆಯಲ್ಲಿ 13 ವೈದ್ಯರ ಹುದ್ದೆಗಳಿದ್ದು, 8 ವೈದ್ಯರು ಮಾತ್ರ ಇದ್ದಾರೆ. ಅದೂ ಸದ್ಯ ನಾಲ್ವರು ಮಾತ್ರ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವೈದ್ಯರ ಮೇಲೆ ಒತ್ತಡ ಇರುವುದನ್ನು ಗಮನಿಸದ ಅಧ್ಯಕ್ಷರು ಅಧಿಕಾರ ಚಲಾಯಿಸುವುದು, ರೇಗುವುದು ಸರಿಯಲ್ಲ ಎಂದು ಆಸ್ಪತ್ರೆಯ ಕೆಲವು ವೈದ್ಯರು, ಸಿಬಂದಿ ಅಲವತ್ತುಕೊಂಡಿದ್ದಾರೆ.
ಹೇಳಿಕೆ ನೀಡುವುದಿಲ್ಲ
ಈ ಹಿನ್ನೆಲೆಯಲ್ಲಿ ವೈದ್ಯರು ಜಿ.ಪಂ. ಅಧ್ಯಕ್ಷರ ವಿರುದ್ಧ ಪ್ರತಿಭಟನೆ ನಡೆಸುತ್ತಾರೆ ಎನ್ನುವ ಸುದ್ದಿ ಕೇಳಿಬಂದಿತ್ತು. ಆದರೆ ಇದನ್ನು ನಿರಾಕರಿಸಿರುವ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ| ಆಶಾ ಪುತ್ತೂರಾಯ, ನಾವು ಯಾವುದೇ ಹೇಳಿಕೆ ನೀಡುವುದಿಲ್ಲ. ಈ ಕುರಿತು ಮೌಖೀಕವಾಗಿ ಶಾಸಕರಿಗೆ ದೂರು ನೀಡಿದ್ದೇವೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್; ತಪ್ಪಿದ ಅನಾಹುತ
Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ
Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.