ಗ್ರಾ.ಪಂ. ಭವಿಷ್ಯದ ಆವಶ್ಯಕತೆಗಳಿಗೆ ಪೂರಕವಾಗಿ ಯೋಜನೆ: ಕೆ.ಎಸ್.ಈಶ್ವರಪ್ಪ
Team Udayavani, Nov 12, 2021, 6:05 AM IST
ಮಂಗಳೂರು: ಕರಾವಳಿ ಭಾಗದ ಗ್ರಾಮ ಪಂಚಾಯತ್‌ಗಳು ಭವಿಷ್ಯದ ಆವಶ್ಯಕತೆಗಳನ್ನು ಗಮನದಲ್ಲಿಟ್ಟುಕೊಂಡು ಅವುಗಳಿಗೆ ಪೂರಕವಾಗಿ ಪರಿಣಾಮಕಾರಿಯಾದ ಯೋಜನೆಗಳನ್ನು ರೂಪಿಸುವುದು ಅಗತ್ಯ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಕರೆ ನೀಡಿದರು.
ಕರಾವಳಿ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಬ್ ಕೀ ಯೋಜನಾ ಸಬ್ ಕಾ ವಿಕಾಸ್ ಮೂಲಕ ಆರ್ಥಿಕ ಮತ್ತು ಸಾಮಾಜಿಕ ಬದಲಾವಣೆ ಕುರಿತು ಕೇಂದ್ರ ಸರಕಾರದ ಪಂಚಾಯತ್ ರಾಜ್ ಸಚಿವಾಲಯ, ಹೈದರಾಬಾದ್‌ನ ರಾಷ್ಟ್ರೀಯ ಗ್ರಾಮೀ ಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ (ಎನ್‌ಐಆರಿxಪಿಆರ್) ಹಾಗೂ ಮೈಸೂರಿನ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಸಹಯೋಗದಲ್ಲಿ ನಗರದಲ್ಲಿ ಹಮ್ಮಿಕೊಂಡಿರುವ 2 ದಿನಗಳ ಪ್ರಾದೇಶಿಕ ಕಾರ್ಯಾಗಾರವನ್ನು ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಸಂದೇಶ ನೀಡಿದರು.
ಮಳೆಗಾಲದ ಸಮಸ್ಯೆಗಳ
ನಿವಾರಣೆಗೆ ವಿಶೇಷ ಒತ್ತು
ಕೇಂದ್ರ ಸರಕಾರದ ಪಂಚಾಯತ್ ರಾಜ್ ಕಾರ್ಯದರ್ಶಿ ಸುನಿಲ್ ಕುಮಾರ್‌ಮಾತನಾಡಿ, ಕರಾವಳಿ ರಾಜ್ಯಗಳ ಗ್ರಾ.ಪಂ.ಗಳು ಪ್ರತೀ ವರ್ಷವು ಹಲವು ಸಮಸ್ಯೆಗಳನ್ನು ವಿಶೇಷವಾಗಿ ಪ್ರಾಕೃತಿಕ ವಿಕೋಪಗಳನ್ನು ಎದುರಿಸುತ್ತಿವೆ. ಮುಖ್ಯವಾಗಿ ಮಾನ್ಸೂನ್ ಕಾಲದಲ್ಲಿನ ಸಮಸ್ಯೆಗಳು, ರೋಗ-ರುಜಿನಗಳು ನಿಯಂತ್ರಿಸುವ ನಿಟ್ಟಿನಲ್ಲಿ ಒತ್ತನ್ನು ನೀಡಬೇಕೆಂದು ತಿಳಿಸಿದರು.
ಇದನ್ನೂ ಓದಿ:ನಕಲಿ ಫೇಸ್‌ಬುಕ್ ಜಾಲ: ಮಂಗಳೂರಿನ ವ್ಯಕ್ತಿ ಸೌದಿಯಲ್ಲಿ ಬಂದಿ
ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾ ಮಹಾದೇವನ್, ಕೇಂದ್ರ ಸರಕಾರದ ಪಂಚಾಯತ್ ರಾಜ್ ಸಚಿವಾಲಯದ ಜಂಟಿ ಕಾರ್ಯದರ್ಶಿ ರೇಖಾ ಯಾದವ್, ಗ್ರಾಮೀಣಾಭಿವೃದ್ದಿ ಮತ್ತು ಪಂ. ರಾಜ್‌ಇಲಾಖೆ ಆಯುಕ್ತೆ ಶಿಲ್ಪಾನಾಗ್ ಮಾತನಾಡಿದರು.ಜಿ.ಪಂ. ಸಿಇಒ ಡಾ| ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.