“ಸರಕಾರದ ಸೌಲಭ್ಯ ಸದುಪಯೋಗವಾಗಲಿ’

Team Udayavani, Aug 22, 2017, 6:45 AM IST

1808ble19ph.jpg

ಬೆಳ್ತಂಗಡಿ: ಇಂದಿನ ದಿನಗಳಲ್ಲಿ ಶಿಕ್ಷಣ ಪಡೆಯಲು ಸರಕಾರದಿಂದ ಸಾಕಷ್ಟು ಪ್ರೋತ್ಸಾಹ ಹಾಗೂ ಸೌಲಭ್ಯ ದೊರೆಯುತ್ತಿದ್ದು ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಉನ್ನತ ಶಿಕ್ಷಣ ಪಡೆಯುವವರ ಸಂಖ್ಯೆ ಕಡಿಮೆಯಿದ್ದು, ಸರಕಾರ ಇದಕ್ಕೆ ನೆರವು ನೀಡುತ್ತಿದೆ. ಉತ್ತಮ ಶಿಕ್ಷಣವನ್ನು ಪಡೆದು ಸಮಾಜದಲ್ಲಿ ಉನ್ನತ ಸ್ಥಾನ ಹೊಂದಲು ವ್ಯಕ್ತಿತ್ವ ವಿಕಸನಗಳಂತಹ  ತರಬೇತಿ ಕಾರ್ಯಕ್ರಮಗಳು ಸಹಕಾರಿ ಎಂದು ಬೆಳ್ತಂಗಡಿ ತಾ.ಪಂ. ಅಧ್ಯಕ್ಷೆ ದಿವ್ಯಜ್ಯೋತಿ ಹೇಳಿದರು.

ಅವರು ದ.ಕ. ಜಿಲ್ಲಾ ಮಲೆಕುಡಿಯ ಸಂಘದ ಪ್ರಧಾನ ಕಚೇರಿ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಶಿವಗಿರಿಯಲ್ಲಿ ಕರ್ನಾಟಕ ರಾಜ್ಯ ಮಲೆಕುಡಿಯ ಸಂಘ ಹಾಗೂ ವಿಶ್ವ ಚೇತನ ಪ್ರತಿಷ್ಠಾನ ತುಮಕೂರು ಇದರ ಆಶ್ರಯದಲ್ಲಿ ನಡೆದ ವಿಶೇಷ ವ್ಯಕ್ತಿತ್ವ ವಿಕಸನ ಶಿಬಿರವನ್ನು ವಿದ್ಯಾರ್ಥಿನಿಗೆ ಪುಸ್ತಕ ಹಸ್ತಾಂತರಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.

ಅಣ್ಣಪ್ಪ ಎನ್‌. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಲೆಕುಡಿಯ ಸಂಘವು ಸಮುದಾಯದ ಏಳ್ಗೆಗಾಗಿ ಶ್ರಮಿಸಲಿದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸಾಕಷ್ಟು ತರಬೇತಿಗಳನ್ನು ಪಡೆದುಕೊಳ್ಳಬೇಕು ಎಂದರು.

ವ್ಯಕ್ತಿತ್ವ ವಿಕಸನ ತರಬೇತಿದಾರ ತುಮಕೂರಿನ ವಿಶ್ವ ಚೇತನ ಪ್ರತಿಷ್ಠಾನದ ಅಧ್ಯಕ್ಷ ಪಿ.ಎಂ. ಪ್ರಸನ್ನಕುಮಾರ್‌ ವಿದ್ಯಾರ್ಥಿಗಳಿಗೆ ಕಲಿಕಾ ಕೌಶಲ ಹಾಗೂ ವ್ಯಕ್ತಿತ್ವ ವಿಕಸನದ ಬಗ್ಗೆ ತರಬೇತಿ ನೀಡಿದರು.

ಮುಖ್ಯ ಅತಿಥಿಯಾಗಿ ಪತ್ರಕರ್ತ ಅಶ್ರಫ್‌ ಅಲಿಕುಂಞಿ  ಭಾಗವಹಿಸಿದ್ದರು.ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಸಂಜೀವ ಕುಲ್ಲಾಜೆ, ಜಿಲ್ಲಾ ಕಾರ್ಯದರ್ಶಿ ಹಾಗೂ ತಾ.ಪಂ. ಸದಸ್ಯ ಜಯರಾಮ ಆಲಂಗಾರು, ತಾಲೂಕು ಸಮಿತಿಯ ಅಧ್ಯಕ್ಷ ನೋಣಯ್ಯ ಮಚ್ಚಿನ ಮೊದಲಾದವರು ಉಪಸ್ಥಿತರಿದ್ದರು.ವಿದ್ಯಾರ್ಥಿಗಳು, ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಲಾಯಿತು.

ತಾಲೂಕು ಸಮಿತಿಯ ಉಪಾಧ್ಯಕ್ಷೆ  ಸುಜಾತಾ ಸ್ವಾಗತಿಸಿ ರಾಜ್ಯ ಮಲೆಕುಡಿಯ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ್‌ ಈದು  ಪ್ರಸ್ತಾವಿಸಿದರು.ತಾಲೂಕು ಸಮಿತಿ ಪ್ರಧಾನ ಕಾರ್ಯದರ್ಶಿ ಹರೀಶ್‌ ವಂದಿಸಿದರು. ಕೋಶಾಧಿಕಾರಿ ಮೋಹನ್‌ ಎಸ್‌.ನಿಡ್ಲೆ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

11

Puttur: ಎರಡು ಕಡೆ ಚಿನ್ನಾಭರಣ ಕಳವು; ಮೂವರ ಸೆರೆ

10

Sullia: ಬಸ್‌ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್‌, ಶೂ ಕಳವು

2(1

Kumbra ಜಂಕ್ಷನ್‌ನಲ್ಲಿ ಈಗ ಸೆಲ್ಫಿ ಪಾಯಿಂಟ್‌ ಆಕರ್ಷಣೆ!

1

Belthangady: ಕಾನನ ವಾಸಿಗಳಿಗೆ ಮೆಸ್ಕಾಂ ಬೆಳಕು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.