ಕುಟ್ರಾಪ್ಪಾಡಿ ಗ್ರಾ.ಪಂ.ಗೆ ಗಾಂಧಿ ಗ್ರಾಮ ಪುರಸ್ಕಾರ


Team Udayavani, Oct 1, 2018, 11:51 AM IST

1-october-7.gif

ಕಡಬ: ನೂತನ ಕಡಬ ತಾಲೂಕಿನ ವ್ಯಾಪ್ತಿಗೆ ಬರುವ ಕುಟ್ರಾಪ್ಪಾಡಿ ಗ್ರಾಮ ಪಂಚಾಯತ್‌ 2017-18ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದೆ. ಗ್ರಾಮೀಣ ಅಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಒಟ್ಟು ಸಾಧನೆಯನ್ನು ಪರಿಗಣಿಸಿ ಪಂಚಾಯತ್‌ರಾಜ್‌ ಮತ್ತು ಗ್ರಾಮೀಣ ಅಭಿವೃದ್ಧಿ ಇಲಾಖೆಯಿಂದ ನೀಡಲಾಗುವ ಈ ಪುರಸ್ಕಾರಕ್ಕೆ ಕುಟ್ರಾಪ್ಪಾಡಿ ಗ್ರಾಮ ಪಂಚಾಯತ್‌ ಭಾಜನವಾಗಿದೆ.

ಅ. 2ರಂದು ಬೆಂಗಳೂರಿನಲ್ಲಿ ವಿಧಾನ ಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪುರಸ್ಕಾರ ಪ್ರದಾನವಾಗಲಿದೆ. ಪುರಸ್ಕಾರವು 5ಲಕ್ಷ ರೂ. ನಗದು ಬಹುಮಾನವನ್ನು ಒಳಗೊಂಡಿದೆ. ರಾಜ್ಯದ ಪ್ರತೀ ತಾಲೂಕಿನ ಒಂದು ಪಂಚಾಯತ್‌ಗೆ ಪ್ರತೀ ವರ್ಷ ಗಾಂಧಿ ಜಯಂತಿ ಸಂದರ್ಭ ಈ ಪುರಸ್ಕಾರ ನೀಡಲಾಗುತ್ತಿದೆ.

ಪಂಚಾಯತ್‌ ಸಾಧನೆ
2017-18ನೇ ಸಾಲಿನಲ್ಲಿ ಪಂಚಾಯತ್‌ ನಲ್ಲಿ ನಡೆದ ಗ್ರಾಮಸಭೆ, ವಾರ್ಡ್‌ಸಭೆ, ಸಾಮಾನ್ಯ ಸಭೆಯ ನಿರ್ಣಯಗಳ ಜಾರಿ, ಅನುದಾನಗಳ ಸಮರ್ಪಕ ಬಳಕೆ, ವೈಯಕ್ತಿಕ ಶೌಚಾಲಯಗಳ ನಿರ್ಮಾಣ, ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಒದಗಿಸಲಾದ ಪ್ರತಿಶತ ಉದ್ಯೋಗಗಳು, ಮಾನವದಿಗಳು, ಆಸ್ತಿ ನಿರ್ಮಾಣ ಮತ್ತು ಅನುದಾನ ವಿನಿಯೋಗ, ಉದ್ಯೋಗ ಖಾತರಿ ನಿಯಮಗಳಿಗನುಗುಣವಾಗಿ ನೈಸರ್ಗಿಕ ಸಂಪನ್ಮೂಲ ನಿರ್ವಹಣೆ, ವಸತಿ ಯೋಜನೆಗಳ ಅನುಷ್ಠಾನ, ನೈರ್ಮಲೀಕರಣ, 14ನೇ ಹಣಕಾಸು ಆಯೋಗ ಅನುದಾನ ವಿನಿಯೋಗ, ಶಾಸನಬದ್ಧ ಅನುದಾನ ವಿನಿಯೋಗ, ಮಾಸಿಕ ಬ್ಯಾಂಕ್‌ ಲೆಕ್ಕ, ಮರು ಹೊಂದಾಣಿಕೆ ವರದಿಯನ್ನು ಪಂಚತಂತ್ರ ತಂತ್ರಾಂಶದಲ್ಲಿ ಅಳವಡಿಸಲಾಗಿದೆ.

ಸ್ವಂತ ಸಂಪನ್ಮೂಲ ಸಂಗ್ರಹಣೆ, ಪಂಚಾಯತ್‌ನ ವಿವಿಧ ಸ್ಥಾಯಿ ಸಮಿತಿಗಳನ್ನು ಹಾಗೂ ಉಪ ಸಮಿತಿಗಳನ್ನು ರಚಿಸಿರುವುದು, ಅದರ ನಡಾವಳಿಗಳಿಗಳನ್ನು ಪಂಚತಂತ್ರ ತಂತ್ರಾಂಶದಲ್ಲಿ ಅಳವಡಿಸಿರುವುದು, ಗ್ರಾಮಸಭೆಗಳ ವಿಡಿಯೋ ಚಿತ್ರೀಕರಣ ಮತ್ತು ನಡಾವಳಿಗಳನ್ನು ಪಂಚತಂತ್ರ ತಂತ್ರಾಂಶದಲ್ಲಿ ಅಳವಡಿಸಿರುವುದು, ಜನರಿಗೆ ನೀಡಿರುವ ಸೇವೆಗಳನ್ನು ಪರಿಗಣಿಸಿ ಗ್ರಾಮ ಪಂಚಾಯತ್‌ಗಳನ್ನು ಗಾಂಧಿಗ್ರಾಮ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತಿದೆ. ಮೊದಲಾದ ಸಾಧನೆಗಳನ್ನು ಗಮನಿಸಿದ ಇಲಾಖೆಯು ಈ ಪ್ರಶಸ್ತಿಯನ್ನು ಪ್ರಕಟಿಸಿದೆ.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ವಿಜೇತ ಪಂಚಾಯತ್‌ನ ಅಧ್ಯಕ್ಷರು ಹಾಗೂ ಅಭಿವೃದ್ಧಿ ಅಧಿಕಾರಿ ಹಾಜರಿದ್ದು ಪ್ರಶಸ್ತಿ ಸ್ವೀಕರಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸೂಚನೆ ನೀಡಿದೆ.

ಪ್ರಶಸ್ತಿ ಸ್ಪೂರ್ತಿ ತಂದಿದೆ
ಅನುದಾನಗಳನ್ನು ಸರಕಾರದ ಮಾರ್ಗಸೂಚಿಯಂತೆ ಸಮರ್ಪಕ ರೀತಿಯಲ್ಲಿ ಬಳಸಿಕೊಂಡು ಗ್ರಾಮದ ಅಭಿವೃದ್ಧಿ ಮಾಡಲಾಗಿದೆ. ಮುಖ್ಯವಾಗಿ ಪಂಚಾಯತ್‌ ಅಧ್ಯಕ್ಷರು, ಸದಸ್ಯರು, ಸಿಬಂದಿ ಹಾಗೂ ಗ್ರಾಮಸ್ಥರ ಸಂಘಟಿತ ಮುತುವರ್ಜಿಯಿಂದಾಗಿ ಅಭಿವೃದ್ಧಿ ಕಾರ್ಯಗಳನ್ನು ನಡೆಸಿರುವುದು ಪ್ರಶಸ್ತಿ ಲಭಿಸಲು ಪೂರಕವಾಗಿತ್ತು. ಪ್ರಶಸ್ತಿಯು ಇನ್ನಷ್ಟು ಉತ್ತಮ ಕೆಲಸ ಮಾಡಲು ಸ್ಫೂರ್ತಿಯಾಗಿದೆ.  
ವಿಲ್ಫ್ರೆಡ್  ಲಾರೆನ್ಸ್‌ ರೋಡ್ರಿಗಸ್‌ ಪಿಡಿಒ,
  ಕುಟ್ರಾಪ್ಪಾಡಿ ಗ್ರಾ.ಪಂ.

ಹೆಮ್ಮೆ ತಂದಿದೆ
ಗಾಂಧಿ ಗ್ರಾಮ ಪುರಸ್ಕಾರಕ್ಕೆ ತಾಲೂಕಿನಿಂದ ಈ ಬಾರಿ ಕುಟ್ರಾಪ್ಪಾಡಿ ಗ್ರಾಮ ಪಂಚಾಯತ್‌ ಆಯ್ಕೆಗೊಂಡಿರುವುದು ಗ್ರಾಮದ ಜನತೆ ಹಾಗೂ ಪಂಚಾಯತ್‌ ಗೆ ಹೆಮ್ಮೆಯ ವಿಷಯವಾಗಿದೆ. ಪಂಚಾಯತ್‌ನಲ್ಲಿ ಆಡಳಿತಾತ್ಮಕವಾಗಿ ಉತ್ತಮ ಕೆಲಸಗಳು ನಡೆದು ಜನರ ಸಮಸ್ಯೆಗಳಿಗೆ ಶೀಘ್ರ ಸ್ಪಂದನೆ ದೊರೆತಿದೆ. ಪಂಚಾಯತ್‌ನ ಅಧಿಕಾರಿ ವರ್ಗ ಹಾಗೂ ಆಡಳಿತ ಮಂಡಳಿಯ ಹೊಂದಾಣಿಕೆ, ಜನರ ಸಹಕಾರದಿಂದಾಗಿ ಉತ್ತಮ ಕೆಲಸಗಳು ನಡೆದು ಪ್ರಶಸ್ತಿ ದೊರೆತಿದೆ.
– ಜಾನಕಿ ಸುಂದರ ಗೌಡ
ಅಧ್ಯಕ್ಷರು, ಕುಟ್ರಾಪ್ಪಾಡಿ ಗ್ರಾ.ಪಂ.

ಟಾಪ್ ನ್ಯೂಸ್

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

20-

Burhan Wani; ಬುರ್ಹಾನ್‌ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್‌

19-

IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು

18-

Formula E race; ಫಾರ್ಮುಲಾ-ಇ ರೇಸ್‌ ಪ್ರಕರಣ: ಕೆಟಿಆರ್‌ ಮೇಲೆ ಎಸಿಬಿ ಎಫ್ಐಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.