ಸೌಹಾರ್ದಕ್ಕೆ ಒತ್ತು: ಅಬ್ದುಲ್ ರಶೀದ್
Team Udayavani, Aug 28, 2017, 7:25 AM IST
ಮಂಗಳೂರು: ಪ್ರಾಚೀನ ತುಳುನಾಡಿನಲ್ಲಿ ಪ್ರತಿಷ್ಠಿತ ಬಂಟ ಮನೆತನದ ಗುತ್ತಿನ ಚಾವಡಿಯಲ್ಲಿ ನ್ಯಾಯ ತೀರ್ಮಾನ ನಡೆಸುವ ಪದ್ಧತಿಜಾರಿಯಲ್ಲಿತ್ತು. ಗುತ್ತಿನ ಯಜಮಾನ ತೆಗೆದುಕೊಂಡ ನಿಷ್ಪಕ್ಷ ತೀರ್ಮಾನ ಸರ್ವರ ಮೆಚ್ಚುಗೆಗೆ ಪಾತ್ರವಾಗುತ್ತಿತ್ತು. ದ.ಕ. ಜಿಲ್ಲೆಯಲ್ಲಿ ಧರ್ಮ ಧರ್ಮದ ನಡುವೆ ಸೌಹಾರ್ದ ಸಂಬಂಧದ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ ಎಂದು ಉಳ್ಳಾಲ ಸಯ್ಯದ್ ಮದನಿ ದರ್ಗಾ ಸಮಿತಿ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್ ಹೇಳಿದರು.
ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಮಂಗಳೂರಿನ ಬಂಟ್ಸ್ ಹಾಸ್ಟೆಲ್‌ನ ಓಂಕಾರನಗರದಲ್ಲಿ ನಡೆಯುತ್ತಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ಧಾರ್ಮಿಕ ಸಭೆಯಲ್ಲಿ ಮುಖ್ಯ ಅತಿಥಿ
ಯಾಗಿ ಅವರು ಮಾತನಾಡಿದರು.
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಅಧ್ಯಕ್ಷ ಹಾಗೂ ಆಡಳಿತ ನಿರ್ದೇಶಕ ರಾಜ್ ಕಿರಣ್ ಜಿ. ರೈ ಮಾತನಾಡಿ, ಪ್ರಪಂಚದಾದ್ಯಂತ ಗಣೇಶನನ್ನು ಆರಾಧಿಸಲಾಗುತ್ತಿದ್ದು, ಗಣೇಶೋತ್ಸವದ ಕಾರ್ಯಕ್ರಮದಲ್ಲಿ ಸರ್ವಧರ್ಮೀಯರನ್ನು ಒಗ್ಗೂಡಿಸುವ ಮೂಲಕ ಗಣಪತಿ ಸರ್ವರೂ ಸೇರಿ ಆರಾಧಿಸುವ ದೇವರಾಗಿದ್ದಾರೆ ಎಂದು ಹೇಳಿದರು.
ಕೂಳೂರು ಚರ್ಚ್‌ನ ಧರ್ಮಗುರು ವಂ| ವಿನ್ಸೆಂಟ್ ಡಿ’ಸೋಜಾ ಮಾತನಾಡಿ, ಸಾರ್ವಜನಿಕ ಗಣೇಶೋತ್ಸವದಿಂದ ಈಶಸೇವೆ, ದೇಶಸೇವೆ ಹಾಗೂ ಕಲಾಸೇವೆ ಎಂಬ ನಾಲ್ಕು ಬಗೆಯ ಸೇವಾ ಕಾರ್ಯಗಳು ನಡೆಯುತ್ತಿರುವುದು ಪ್ರಶಂಸನೀಯ ಎಂದರು.
ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್. ಮಂಜುನಾಥ ಭಂಡಾರಿ, ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಡಾ| ಮಂಜಯ್ಯ ಶೆಟ್ಟಿ, ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಎಂ. ಸುಂದರ ಶೆಟ್ಟಿ, ಬಂಟರ ಮಾತೃ ಸಂಘದ ಪದಾಧಿಕಾರಿಗಳಾದ ವಸಂತ ಶೆಟ್ಟಿ, ರವೀಂದ್ರನಾಥ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು. ರಾಜ್ ಕಿರಣ್ ಜಿ. ರೈ, ಮಾಂಡೊವಿ ಮೋಟರ್ನ ಆಡಳಿತ ನಿರ್ದೇಶಕ ಆರೂರು ಸಂಜಯ ರಾವ್, ಮನೋಹರ ಶೆಟ್ಟಿ, ಡಾ| ಮಹಮ್ಮದ್ ಇಕ್ಬಾಲ್, ಪತ್ರಕರ್ತ ರೊನಾಲ್ಡ್ ಫೆರ್ನಾಂಡಿಸ್, ಡಾ| ಸದಾನಂದ ಪೆರ್ಲ, ಜೀವನ್‌ರಾಮ್ ಸುಳ್ಯ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು. ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಅಜಿತ್ ಕುಮಾರ್ ರೈ ಮಾಲಾಡಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ದಿವಾಕರ ಸಾಮಾನಿ ವಂದಿಸಿದರು. ಮಂಜುಳಾ ಶೆಟ್ಟಿ ಮತ್ತು ಪ್ರಕಾಶ್ ಮೇಲಾಂಟ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!
Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ
ವಿದ್ಯುತ್ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ
Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
MUST WATCH
ಹೊಸ ಸೇರ್ಪಡೆ
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.