Mangaluru ವಿ.ವಿ. ಗಣೇಶೋತ್ಸವ ವಿವಾದ : ರಾಜ್ಯಪಾಲರಿಗೆ ಸಂಸದ, ಶಾಸಕರ ಮನವಿ
Team Udayavani, Sep 9, 2023, 11:57 PM IST
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಾ ಆಡಿ ಟೋರಿಯಂನಲ್ಲಿ ಗಣಪತಿ ಉತ್ಸವವನ್ನು ಆಚರಿಸುವ ವಿಚಾರದಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ ಪದ್ಧತಿಯನ್ನು ಮುಂದುವರಿಸುವುದು ಸೂಕ್ತ. ಅದರಂತೆ ಸೆ. 19ರಂದು ಮಂಗಳ ಸಭಾಂಗಣದಲ್ಲಿ ಗಣೇಶೋತ್ಸವ ನಡೆಸಲು ಅನುವು ಮಾಡಿಕೊಡಬೇಕು ಎಂದು ಕರಾವಳಿ ಸಂಸದ, ಶಾಸಕರು, ಸಿಂಡಿಕೇಟ್ ಮಾಜಿ ಸದಸ್ಯರು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿ ಮನವಿ ಮಾಡಿದರು.
2022ರ ಡಿ. 20ರಂದು ನಡೆದ ಸಿಂಡಿಕೇಟ್ ಸಭೆಯಲ್ಲಿ ಸುದೀರ್ಘ ಚರ್ಚೆ ಮಾಡಿ ಗಣೇಶೋತ್ಸವವನ್ನು ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇ ಶನಾಲಯದ ಮೂಲಕವೇ ನಡೆಸ ಬೇಕೆಂದು ನಿರ್ಣಯಿಸಲಾಗಿತ್ತು. ಆದರೆ ಮಂಗಳಾ ಆಡಿಟೋರಿಯಂನಲ್ಲಿ ಪೂಜಿಸದೆ ಸೂಕ್ತವಲ್ಲದ ಸ್ಥಳಕ್ಕೆ ಸ್ಥಳಾಂತರಿಸುವ ನಿರ್ಧಾರವು ಭಕ್ತರ ಭಾವನೆಗಳಿಗೆ ನೋವುಂಟು ಮಾಡುತ್ತದೆ ಎಂದು ತಿಳಿಸಲಾಗಿದೆ.
ಸಂಸದ ನಳಿನ್ ಕುಮಾರ್ ಕಟೀಲು, ದ.ಕ. ಮತ್ತು ಉಡುಪಿ ಜಿಲ್ಲೆಯ ಶಾಸಕರಾದ ಸುನೀಲ್ ಕುಮಾರ್, ವೇದವ್ಯಾಸ ಕಾಮತ್, ಡಾ| ವೈ. ಭರತ್ ಶೆಟ್ಟಿ, ಹರೀಶ್ ಪೂಂಜ, ಭಾಗೀರಥಿ ಮುರುಳ್ಯ, ಗುರ್ಮೆ ಸುರೇಶ್ ಶೆಟ್ಟಿ, ನಿಕಟ ಪೂರ್ವ ಸಿಂಡಿಕೇಟ್ ಸದಸ್ಯ ರಮೇಶ ಕೆ. ನಿಯೋಗದಲ್ಲಿದ್ದರು.
ವಿದ್ಯಾರ್ಥಿಗಳು ಪ್ರತೀ ವರ್ಷವು ಪಾವತಿಸುವ ಸಾಂಸ್ಕೃತಿಕ ನಿಧಿಯಲ್ಲಿ ಗಣೇಶೋತ್ಸವಕ್ಕೆ ಖರ್ಚು ಮಾಡಲು ಹಣವಿದ್ದರೂ ಹಣವಿಲ್ಲವೆಂದು ಸಮಾಜಕ್ಕೆ ತಪ್ಪು ಸಂದೇಶ ನೀಡು ತ್ತಿರುವುದು ಖಂಡನೀಯ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Cricket: ಐಪಿಎಲ್ ಹರಾಜಿನಲ್ಲಿ 574 ಕ್ರಿಕೆಟಿಗರು
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Tennis: ಏಷ್ಯಾಡ್ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್ ನಿವೃತ್ತಿ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.