Ganesh Chaturthi ಕರಾವಳಿಯಾದ್ಯಂತ ಗಣೇಶ ಹಬ್ಬಕ್ಕೆ ಸಕಲ ತಯಾರಿ
ಇಂದು ಗೌರಿ ತೃತೀಯ, ನಾಳೆ ಗಣೇಶ ಚತುರ್ಥಿ ಹಬ್ಬ ಆಚರಣೆ
Team Udayavani, Sep 18, 2023, 7:00 AM IST
ಮಂಗಳೂರು/ಉಡುಪಿ: ಕರಾವಳಿಯಾದ್ಯಂತ ಗಣೇಶ ಚತುರ್ಥಿ ಸಂಭ್ರಮಕ್ಕೆ ಸರ್ವ ಸಿದ್ಧತೆ ಭರದಿಂದ ನಡೆದಿದ್ದು, ಸೋಮವಾರ ಗೌರಿ ಹಬ್ಬ ಹಾಗೂ ಮಂಗಳವಾರ ಗಣೇಶ ಹಬ್ಬ ಆಚರಣೆಯಾಗಲಿದೆ.
ಗಣೇಶನ ವಿಗ್ರಹಗಳ ತಯಾರಿ ಕೆಲಸಗಳು ಬಹುತೇಕ ಪೂರ್ಣಗೊಂಡು ಸಾರ್ವಜನಿಕವಾಗಿ ಗಣೇಶ ಮೂರ್ತಿ ಗಳನ್ನು ಪ್ರತಿಷ್ಠಾಪಿಸಲು ಭರ್ಜರಿ ಸಿದ್ಧತೆ ನಡೆಯುತ್ತಿದೆ. ವೈಭವದಿಂದ ಗಣೇಶೋತ್ಸವ ಆಚರಣೆಗೆ ಉಡುಪಿ, ದಕ್ಷಿಣ ಕನ್ನಡ ಮತ್ತು ಕಾಸರಗೋಡು ಹಾಗೂ ಕೊಡಗು ಜಿಲ್ಲೆಯಾದ್ಯಂತ ತಯಾರಿ ನಡೆಯುತ್ತಿದ್ದು, ವ್ಯಾಪಾರ ಚಟುವಟಿಕೆ ಕೂಡ ಬಿರುಸುಗೊಂಡಿದೆ. ಸಾರ್ವಜನಿಕ ಗಣೇಶೋತ್ಸವ ಸಮಿತಿ ಗಳಿಂದ ಗಣೇಶೋತ್ಸವ ಆಚರಣೆ ಪೆಂಡಾಲ್ ನಿರ್ಮಾಣ ಕಾರ್ಯ ಸಹಿತ ವಿವಿಧ ತಯಾರಿಯಲ್ಲಿ ತೊಡಗಿಸಿ ಕೊಂಡಿದ್ದಾರೆ.
ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಉಭಯ ಜಿಲ್ಲೆಯ ವಿವಿಧ ಕಡೆ ಹೊರ ಜಿಲ್ಲೆಯ ಹೂವಿನ ವ್ಯಾಪಾರಿಗಳು ಬೀಡುಬಿಟ್ಟಿದ್ದು ಹೂವಿನ ವ್ಯಾಪಾರ ರವಿವಾರವೇ ಬಿರುಸಿನಿಂದ ನಡೆಯಿತು. ಕಬ್ಬು ವ್ಯಾಪಾರ ಜೋರಾಗಿ ನಡೆಯುತ್ತಿದೆ. ಹೊರ ಜಿಲ್ಲೆಗಳ ಕಬ್ಬು ಬೆಳೆಗಾರರು ಉಡುಪಿ, ಮಂಗಳೂರು ನಗರದ ವಿವಿಧೆಡೆ ಕಬ್ಬು ಮಾರಾಟದಲ್ಲಿ ತೊಡಗಿದ್ದಾರೆ.
ತೆನೆ ಹಬ್ಬ
ರವಿವಾರ ಕರಾವಳಿಯ ಕೆಲವೆಡೆ ತೆನೆ ಹಬ್ಬವನ್ನು ಆಚರಿಸಲಾಯಿತು.
ಮದ್ಯ ಮಾರಾಟ ನಿಷೇಧ
ಉಡುಪಿ: ಚೌತಿ ಪ್ರಯುಕ್ತ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ಉದ್ದೇಶದಿಂದ ಜಿಲ್ಲಾ ಪೊಲೀಸ್ ಅಧೀಕ್ಷಕರ ಕೋರಿಕೆಯಂತೆ ಜಿಲ್ಲೆಯಲ್ಲಿ ಸೆ. 19, ಉಡುಪಿ ನಗರದಲ್ಲಿ ಸೆ. 21 ಮತ್ತು ಸೆ. 23ರಂದು ಡ್ರೈ ಡೇ ಘೋಷಿಸಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.