ಯಕ್ಷಗಾನಕ್ಕೆ ಗಣೇಶ್ ಕೊಲೆಕಾಡಿ ಕೊಡುಗೆ ಅನನ್ಯ
Team Udayavani, Jan 24, 2018, 12:32 PM IST
ಮೂಲ್ಕಿ: ಯಕ್ಷಗಾನದ ಹೊಸ ಅವಿಷ್ಕಾರದ ಪ್ರಯೋಗಗಳಿಂದ ಯಕ್ಷಗಾನದ ಮೂಲ ವಸ್ತುವಿನ ಸ್ವರೂಪಕ್ಕೆ ಧಕ್ಕೆ ಉಂಟಾಗಬಹುದು ಎಂಬ ಆತಂಕದ ವಾತಾವರಣ ಜನರಲ್ಲಿ ನಿರ್ಮಾಣವಾಗಿದೆ ಎಂದು ಹವ್ಯಾಸಿ ಯಕ್ಷಗಾನ ಕಲಾವಿದ ಡಾ| ಭಾಸ್ಕರಾನಂದ ಕುಮಾರ್ ಹೇಳಿದರು.
ಅವರು ಮೂಲ್ಕಿಯ ಕುಂಜಾರುಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಯಕ್ಷಗಾನ ಸಾಧಕ, ಕವಿ
ಹಾಗೂ ಛಂದಸ್ಸು ಪ್ರವೀಣಾ ಯಕ್ಷಗುರು ಗಣೇಶ್ ಕೊಲೆಕಾಡಿಯವರಿಗೆ ಅವರ ಅಭಿಮಾನಿಗಳಿಂದ ನಡೆದ ಸಮ್ಮಾನ ಹಾಗೂ ಗೌರವಾರ್ಪಣೆಯ ಸಮಾರಂಭದಲ್ಲಿ ಅಭಿನಂದನಾ ಗ್ರಂಥವನ್ನು ಬಿಡುಗಡೆ ಮಾಡಿ ಮಾತನಾಡಿದರು.
ಗಣೇಶ್ ಕೊಲೆಕಾಡಿ ಅವರು ಯಕ್ಷಗಾನ ಪ್ರಪಂಚಕ್ಕೆ ನೀಡಿರುವ ಕೊಡುಗೆ ಅತ್ಯಮೂಲ್ಯವಾದದ್ದು. ಅವರು
ಯಕ್ಷಗಾನದ ಉಳಿವಿನಲ್ಲಿ ಕ್ರಾಂತಿಕಾರಿಯಾಗಿ ಹಲವು ಸಾಧನೆ ಮಾಡುವ ಮೂಲಕ ವಿಶೇಷ ವ್ಯಕ್ತಿತ್ವವನ್ನು ಪಡೆದಿರುವ ಅಸಮಾನ್ಯ ಸಾಧಕ ಎಂದರು.
ಶಿಷ್ಯರಿಗೆ ತರಬೇತಿ
ಧಾರ್ಮಿಕ ಮುಂದಾಳು ವಾದಿರಾಜ ಉಪಾಧ್ಯಾಯ ಮಾತನಾಡಿ, ಗಣೇಶ್ ಕೊಲೆಕಾಡಿಯವರು ಹಲವು ವರ್ಷ
ಗಳಿಂದ ಒಂದು ತಪಸ್ಸಿನಂತೆ ತನ್ನ ಅನಾರೋಗ್ಯದ ಕಾಲದಲ್ಲೂ ಯಕ್ಷಗಾನದ ಬಗ್ಗೆ ವಿಶೇಷ ಕಾಳಜಿ ವಹಿಸಿ ಶಿಷ್ಯವೃಂದದವರಿಗೆ ತರಬೇತಿ ನೀಡಿ ಪ್ರಬುದ್ಧ ಕಾಲವಿದರನ್ನು ಬೆಳೆಸಿದ್ದಾರೆ ಎಂದರು.
ಖ್ಯಾತ ಛಂದಸ್ಸುಕಾರ ಡಾ| ನಾರಾಯಣ ಶೆಟ್ಟಿ ಶಿಮಂತೂರು, ರಾಜ್ಯ ಕ.ಸಾ.ಪ. ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು,
ನಾಡೋಜ ಕೆ.ಪಿ.ರಾವ್, ತೆಂಕು ತಿಟ್ಟಿನ ಹಿರಿಯ ಭಾಗವತ ಕುರಿಯ ಗಣಪತಿ ಶಾಸ್ತ್ರೀ ಅವರು ಗಣೇಶ ಕೊಲಕಾಡಿಯ
ವರನ್ನು ಅಭಿನಂದಿಸಿ ಮಾತನಾಡಿದರು. ಸಮ್ಮಾನಕ್ಕೆ ಉತ್ತರಿಸಿದ ಗಣೇಶ ಕೊಲೆಕಾಡಿ, ನನ್ನ ಬದುಕು ಇರುವುದೇ
ಅಭಿಮಾನಿಗಳ ಪ್ರೀತಿಯಿಂದ. ನಾನು ಮಾಡಿರುವ ಸಾಧನೆಯೆಲ್ಲ ನನ್ನ ಗುರುಗಳಿಗೆ ಹಾಗು ಅಭಿಮಾನಿಗಳಿಗೆ ಸಲ್ಲಬೇಕು ಎಂದರು.
ಗಣೇಶ್ ಕೊಲೆಕಾಡಿಯವರಿಗೆ ಅವರ ತಾಯಿಯ ಜತೆಗೆ ಶಿಷ್ಯರಿಂದ ಹಾಗೂ ಸಮಿತಿಯ ವತಿಯಿಂದ ಗೌರವಾರ್ಪಣೆ
ಹಾಗೂ ನಿಧಿಸಮರ್ಪಣೆ ನಡೆಯಿತು. ಅವರ ಗುರುಗಳಾಗಿದ್ದ ದಿ| ಎಂ.ಡಿ. ಮೂಲ್ಕಿ ಅವರ ಪರವಾಗಿ ಗೋಪಿನಾಥ ಪಡಂಗರಿಗೆ ಹಾಗೂ ದಿ| ಸರಸ್ವತಿ ತಿಮ್ಮಪ್ಪ ಶೆಟ್ಟಿ ಬಾಳಿಕೆ ಮನೆ ಇವರ ಪರವಾಗಿ ರಾಮದಾಸ ಶೆಟ್ಟಿ ಮತ್ತು ಹವ್ಯಾಸಿ
ಕಲಾವಿದ ಸುಕುಮಾರ್ ಶೆಟ್ಟಿ ಅವರನ್ನು ಸಮ್ಮಾನಿಸಿ, ಗೌರವಿಸಲಾಯಿತು.
ಕಟೀಲು ಕ್ಷೇತ್ರದ ಅರ್ಚಕ ಹರಿನಾರಾಯಣ ದಾಸ ಆಸ್ರಣ್ಣ, ಮುರಳೀಧರ ಭಟ್ ಕಟೀಲು, ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಉಮಾನಾಥ ಕೋಟ್ಯಾನ್, ಭುವನಾಭಿರಾಮ ಉಡುಪ, ಸತ್ಯಜಿತ್ ಸುರತ್ಕಲ್, ಕಿಲ್ಪಾಡಿ ಬಂಡಸಾಲೆ ಶೇಖರ್ ಶೆಟ್ಟಿ, ಲಕ್ಷ್ಮೀ ಟಿ.ಎನ್. ಕೋಟ್ಯಾನ್, ಸುಶೀಲಾ ನಾರಾಯಣ ಶೆಟ್ಟಿ ಅತಿಥಿಗಳಾಗಿದ್ದರು. ಸಮಿತಿಯ ಅಧ್ಯಕ್ಷ ಗೋಪಿನಾಥ ಪಡಂಗ ಸ್ವಾಗತಿಸಿದರು. ಸಾಯಿನಾಥ ಶೆಟ್ಟಿ ನಿರೂಪಿಸಿದರು. ಕಾರ್ಯದರ್ಶಿ ಸಂದೀಪ್ ಕೋಟ್ಯಾನ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
MUST WATCH
ಹೊಸ ಸೇರ್ಪಡೆ
Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ
ಗಂಭೀರ್ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್ ಪೇನ್
Udupi: ಕಸ್ತೂರಿ ರಂಗನ್ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ
Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು
BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.